Home Bibles ☰ Books 2 ಸಮುವೇಲ 12:20 · ಕನ್ನಡ ಬೈಬಲ್
2 ಸಮುವೇಲ 12:20 · ಕನ್ನಡ ಬೈಬಲ್

ಆಗ ದಾವೀದನು ನೆಲದಿಂದ ಎದ್ದು ಸ್ನಾನಮಾಡಿ ತೈಲವನ್ನು ಹಚ್ಚಿಕೊಂಡ ವನಾಗಿ ಬದಲಿ ವಸ್ತ್ರಗಳನ್ನು ಧರಿಸಿಕೊಂಡು ಕರ್ತನ ಮಂದಿರಕ್ಕೆ ಹೋಗಿ ಆತನನ್ನು ಆರಾಧಿಸಿ ತನ್ನ ಮನೆಗೆ ಬಂದನು. ಅವನು ಕೇಳಿದಾಗ ಅವರು ಅವನ ಮುಂದೆ ಇಟ್ಟ ರೊಟ್ಟಿ ತಿಂದನು.

Cross references

ರೂತ 3:3

ನೀನು ಸ್ನಾನಮಾಡಿ ಎಣ್ಣೆ ಹಚ್ಚಿಕೊಂಡು ನಿನ್ನ ವಸ್ತ್ರಗಳನ್ನು ಧರಿಸಿಕೊಂಡು ಆ ಕಣಕ್ಕೆ ಹೋಗು. ಆದರೆ ಆ ಮನುಷ್ಯನು ಅನ್ನಪಾನಗಳನ್ನು ತೆಗೆದು ಕೊಳ್ಳುವ ವರೆಗೂ ಅವನಿಗೆ ನೀನು ತಿಳಿಯದಂತೆ ಮರೆಯಾಗಿರು.

1 ಸಮುವೇಲ 15:25

ಆದದರಿಂದ ಈಗ ದಯಮಾಡಿ ನನ್ನ ಪಾಪವನ್ನು ಕ್ಷಮಿಸಿ ನಾನು ಕರ್ತನನ್ನು ಆರಾಧಿಸುವ ಹಾಗೆ ನನ್ನ ಸಂಗಡ ತಿರಿಗಿ ಬಾ ಎಂದು ಬೇಡಿಕೊಂಡನು.

1 ಸಮುವೇಲ 15:31

ಹಾಗೆಯೇ ಸಮುವೇಲನು ತಿರಿಗಿ ಸೌಲನ ಹಿಂದೆ ಹೋದನು; ಸೌಲನು ಕರ್ತನನ್ನು ಆರಾಧಿಸಿದನು.

2 ಸಮುವೇಲ 6:17

ಅವರು ಕರ್ತನ ಮಂಜೂಷವನ್ನು ಒಳಗೆ ತಂದು ದಾವೀದನು ಹಾಕಿಸಿದ ಗುಡಾರದೊಳಗೆ ಅದರ ಸ್ಥಳದಲ್ಲಿ ಅದನ್ನು ಇಟ್ಟ ತರುವಾಯ ದಾವೀದನು ಕರ್ತನ ಸನ್ನಿಧಿಯಲ್ಲಿ ದಹನಬಲಿಗಳನ್ನೂ ಸಮಾ ಧಾನದಬಲಿಗಳನ್ನೂ ಅರ್ಪಿಸಿದನು.

2 ಸಮುವೇಲ 7:18

ಆಗ ಅರಸ ನಾದ ದಾವೀದನು ಒಳಗೆ ಪ್ರವೇಶಿಸಿ ಕರ್ತನ ಸನ್ನಿಧಿ ಯಲ್ಲಿ ಕೂತುಕೊಂಡು--ಓ ಕರ್ತನಾದ ದೇವರೇ, ನನ್ನನ್ನು ನೀನು ಇಷ್ಟರ ಮಟ್ಟಿಗೆ ತಂದದ್ದಕ್ಕೆ ನಾನು ಎಷ್ಟರವನು? ನನ್ನ ಮನೆ ಎಷ್ಟರದು?

ಯೋಬ 1:20

ಆಗ ಯೋಬನು ಎದ್ದು ತನ್ನ ನಿಲುವಂಗಿಯನ್ನು ಹರಿದು ತನ್ನ ತಲೆಬೋಳಿಸಿಕೊಂಡು ನೆಲಕ್ಕೆ ಬಿದ್ದು ಆರಾಧಿಸಿ

ಯೋಬ 2:10

ಆದರೆ ಅವನು ಅವಳಿಗೆ--ಮೂರ್ಖ ಹೆಂಗಸರಲ್ಲಿ ಒಬ್ಬಳು ಮಾತನಾಡುವ ಪ್ರಕಾರ ನೀನೂ ಮಾತನಾಡುವಿಯಾ? ದೇವರ ಕೈಯಿಂದ ಒಳ್ಳೇದನ್ನು ಹೊಂದುತ್ತೇವಲ್ಲಾ? ಕೆಟ್ಟದ್ದನ್ನು ಹೊಂದುವದು ಬೇಡವೋ ಅಂದನು. ಇವೆಲ್ಲವುಗಳಲ್ಲಿ ಯೋಬನು ತನ್ನ ತುಟಿಗಳಿಂದ ಪಾಪಮಾಡಲಿಲ್ಲ.

ಕೀರ್ತನೆಗಳು 39:9

ನಾನು ಮೌನವಾದೆನು, ನನ್ನ ಬಾಯಿ ತೆರೆಯಲಿಲ್ಲ; ನೀನು ಅದನ್ನು ಮಾಡಿದಿ.

ಸಭಾಪ್ರಸಂಗಿ 9:8

ನಿನ್ನ ವಸ್ತ್ರಗಳು ಯಾವಾಗಲೂ ಬಿಳುಪಾಗಿರಲಿ. ನಿನ್ನ ತಲೆಯಲ್ಲಿ ಎಣ್ಣೆಯು ಕಡಿಮೆ ಯಾಗದಿರಲಿ.

ವಿಲಾಪಗಳು 3:39

ಬದುಕುವ ಮನುಷ್ಯನು ತನ್ನ ಪಾಪಗಳ ಶಿಕ್ಷೆಗಾಗಿ ಗುಣು ಗುಟ್ಟುವದೇಕೆ?

ಮತ್ತಾಯ 6:17

ಆದರೆ ನೀನು ಉಪವಾಸ ಮಾಡುವಾಗ ನಿನ್ನ ತಲೆಗೆ ಎಣ್ಣೆ ಹಚ್ಚಿಕೊಂಡು ನಿನ್ನ ಮುಖವನ್ನು ತೊಳೆದುಕೋ.

Interlinear

Choose Theme