Home Bibles 2 ಸಮುವೇಲ 12:7 · ಕನ್ನಡ ಬೈಬಲ್
2 ಸಮುವೇಲ 12:7 · ಕನ್ನಡ ಬೈಬಲ್

ಆಗ ನಾತಾನನು ದಾವೀದನಿಗೆ--ನೀನೇ ಆ ಮನು ಷ್ಯನು. ಇಸ್ರಾಯೇಲಿನ ದೇವರಾದ ಕರ್ತನು--ನಾನು ನಿನ್ನನ್ನು ಇಸ್ರಾಯೇಲಿನ ಮೇಲೆ ಅರಸನಾಗಿ ಅಭಿಷೇಕ ಮಾಡಿ ನಿನ್ನನ್ನು ಸೌಲನ ಕೈಗೆ ತಪ್ಪಿಸಿಬಿಟ್ಟು

Cross references

1 ಸಮುವೇಲ 13:13

ಸಮು ವೇಲನು ಸೌಲನಿಗೆ--ನೀನು ಬುದ್ಧಿಹೀನವಾದ ಕೆಲಸ ಮಾಡಿದ್ದೀ; ನಿನ್ನ ದೇವರಾದ ಕರ್ತನು ನಿನಗೆ ಆಜ್ಞಾಪಿಸಿದ ಆಜ್ಞೆಯನ್ನು ಕೈಕೊಳ್ಳಲಿಲ್ಲ. ಕರ್ತನು ಇಸ್ರಾಯೇಲ್ಯರಲ್ಲಿ ನಿನ್ನ ರಾಜ್ಯವನ್ನು ಎಂದೆಂದಿಗೂ ಸ್ಥಿರಪಡಿಸುವದಕ್ಕೆ ಇದ್ದನು.

1 ಸಮುವೇಲ 15:17

ಸಮುವೇಲನು--ನೀನು ನಿನ್ನ ದೃಷ್ಟಿಯಲ್ಲಿ ಅಲ್ಪನಾಗಿದ್ದರೂ ಇಸ್ರಾಯೇಲ್‌ ಗೋತ್ರಗಳ ಮೇಲೆ ಯಜಮಾನನಾಗಿ ಮಾಡಲ್ಪಟ್ಟಿಯಲ್ಲವೋ? ಕರ್ತನು ನಿನ್ನನ್ನು ಇಸ್ರಾಯೇಲ್ಯರ ಮೇಲೆ ಅರಸನಾಗಿ ಅಭಿಷೇಕಿಸಿ ದನಲ್ಲವೋ?

1 ಸಮುವೇಲ 16:13

ಸಮುವೇಲನು ಎಣ್ಣೆ ಇರುವ ಕೊಂಬನ್ನು ತಕ್ಕೊಂಡು ಅವನನ್ನು ಅವನ ಸಹೋದರರ ಮಧ್ಯದಲ್ಲಿ ಅಭಿಷೇಕ ಮಾಡಿದನು. ಆ ದಿವಸದಲ್ಲೇ ಕರ್ತನ ಆತ್ಮನು ದಾವೀದನ ಮೇಲೆ ಬಂದನು. ಸಮುವೇಲನು ಎದ್ದು ರಾಮಕ್ಕೆ ಹೋದನು.

1 ಸಮುವೇಲ 18:11

ಆಗ ಸೌಲನು ದಾವೀದನನ್ನು ಗೋಡೆಗೆ ಹತ್ತಿಕೊಳ್ಳುವ ಹಾಗೆ ಹೊಡೆಯುವೆನೆಂದು ಈಟಿಯನ್ನು ಎಸೆದನು. ಆದರೆ ದಾವೀದನು ಎರಡು ಸಾರಿ ಅವನ ಸಮ್ಮುಖದಿಂದ ತಪ್ಪಿಸಿಕೊಂಡನು.

1 ಸಮುವೇಲ 18:21

ಅವನಿಗೆ ಉರುಲಾಗಿರುವ ಹಾಗೆಯೂ ಫಿಲಿಷ್ಟಿಯರ ಕೈ ಅವನ ಮೇಲೆ ಬರುವ ಹಾಗೆಯೂ ಇವಳನ್ನು ಅವನಿಗೆ ಕೊಡುವೆನು ಅಂದುಕೊಂಡನು. ಆದದರಿಂದ ಸೌಲನು ದಾವೀದನಿಗೆ--ನೀನು ಎರಡನೆ ಯವಳಿಂದ ಈ ಹೊತ್ತು ಅಳಿಯನಾಗು ಅಂದನು.

1 ಸಮುವೇಲ 19:10

ಆಗ ಸೌಲನು ದಾವೀದನನ್ನು ಈಟಿಯಿಂದ ಗೋಡೆಗೆ ಹತ್ತಿಕೊಳ್ಳುವ ಹಾಗೆ ಹೊಡೆಯಬೇಕೆಂದು ಯತ್ನಿಸಿದನು; ಆದರೆ ಇವನು ಸೌಲನ ಎದುರಿನಿಂದ ತಪ್ಪಿಸಿಕೊಂಡನು. ಈಟಿಯು ಗೋಡೆಯಲ್ಲಿ ಹತ್ತಿ ಕೊಳ್ಳುವಂತೆ ಅವನು ಹೊಡೆದನು. ದಾವೀದನು ಆ ರಾತ್ರಿಯಲ್ಲಿ ಓಡಿಹೋಗಿ ತಪ್ಪಿಸಿಕೊಂಡನು.

1 ಸಮುವೇಲ 23:7

ದಾವೀದನು ಕೆಯಾಲಾಕ್ಕೆ ಬಂದಿದ್ದಾನೆಂದು ಸೌಲನಿಗೆ ತಿಳಿಸಲ್ಪಟ್ಟಾಗ ಸೌಲನು--ದೇವರು ಅವನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಟ್ಟನು, ಯಾಕಂದರೆ ಅವನು ಬಾಗಲುಗಳೂ ಅಗುಳಿಗಳೂ ಇರುವ ಪಟ್ಟಣದ ಒಳಗೆ ಪ್ರವೇಶಿಸಿದ್ದರಿಂದ ಮುಚ್ಚಲ್ಪಟ್ಟಿ ದ್ದಾನೆ ಅಂದುಕೊಂಡನು.

1 ಸಮುವೇಲ 23:14

ದಾವೀದನು ಅರಣ್ಯದಲ್ಲಿರುವ ಬಲವಾದ ಕೋಟೆಗಳಲ್ಲಿಯೂ ಜೀಫ್‌ ಎಂಬ ಅರಣ್ಯದ ಬೆಟ್ಟದ ಲ್ಲಿಯೂ ವಾಸವಾಗಿದ್ದನು. ಸೌಲನು ದಿನಾಲು ಅವ ನನ್ನು ಹುಡುಕುತ್ತಿದ್ದನು; ಆದರೆ ದೇವರು ಅವನನ್ನು ಅವನ ಕೈಯಲ್ಲಿ ಒಪ್ಪಿಸಿಕೊಡಲಿಲ್ಲ.

1 ಸಮುವೇಲ 23:26

ಸೌಲನು ಬೆಟ್ಟದ ಇನ್ನೊಂದು ಕಡೆಯಲ್ಲಿ ಹೋದನು; ದಾವೀದನೂ ಅವನ ಜನರೂ ಬೆಟ್ಟದ ಆ ಕಡೆಯಲ್ಲಿ ಹೋದರು; ಸೌಲನಿಗೆ ಭಯ ಪಟ್ಟು ತಪ್ಪಿಸಿಕೊಂಡು ಹೋಗಲು ದಾವೀದನು ತ್ವರೆ ಮಾಡುವಾಗ ಸೌಲನೂ ಅವನ ಮನುಷ್ಯರೂ ಹಿಡಿ ಯುವ ಹಾಗೆ ಅವರನ್ನು ಸುತ್ತಿಕೊಂಡರು.

2 ಸಮುವೇಲ 7:8

ಈಗ ನೀನು ನನ್ನ ಸೇವಕನಾದ ದಾವೀದನಿಗೆ--ನೀನು ನನ್ನ ಜನ ರಾದ ಇಸ್ರಾಯೇಲ್ಯರ ಮೇಲೆ ನಾಯಕನಾಗಿರುವಂತೆ ಕುರಿಗಳ ಹಿಂದೆ ಹೋಗುತ್ತಿದ್ದ ನಿನ್ನನ್ನು ನಾನು ಕುರಿಯ ಹಟ್ಟಿಯಿಂದ ತೆಗೆದುಕೊಂಡೆನು;

2 ಸಮುವೇಲ 14:13

ಆಗ ಅವನು--ಹೇಳು ಅಂದನು. ಆಗ ಆ ಸ್ತ್ರೀಯು--ದೇವರ ಜನರಿಗೆ ವಿರೋಧವಾಗಿ ಅಂಥಾ ಕಾರ್ಯವನ್ನು ನೀನು ನೆನೆಸು ವದೇನು? ಅರಸನು ತಾನು ಹೊರಡಿಸಿದವನನ್ನು ತಿರಿಗಿ ಸೇರಿಸಿಕೊಳ್ಳದೆ ಹೋದದರಿಂದ ಇದನ್ನು ಅಪರಾಧಸ್ಥನ ಹಾಗೆಯೇ ಮಾತಾಡುತ್ತಿದ್ದಾನೆ.

2 ಸಮುವೇಲ 22:1

ಕರ್ತನು ದಾವೀದನನ್ನು ಅವನ ಎಲ್ಲಾ ಶತ್ರುಗಳ ಕೈಯೊಳಗಿಂದಲೂ ಸೌಲನ ಕೈಯೊಳಗಿಂದಲೂ ಬಿಡಿಸಿದ ದಿವಸದಲ್ಲಿ ಅವನು ಕರ್ತನನ್ನು ಕುರಿತು ಈ ಹಾಡಿನ ಮಾತುಗಳನ್ನು ಹೇಳಿದನು. ಏನಂದರೆ--

2 ಸಮುವೇಲ 22:49

ಆತನು ನನ್ನ ಶತ್ರುಗಳಿಂದ ನನ್ನನ್ನು ಹೊರಗೆ ತರು ತ್ತಾನೆ. ನೀನು ನನ್ನ ಎದುರಾಳಿಗಳಿಂದ ನನ್ನನ್ನು ತಪ್ಪಿಸಿ ಗೌರವಿಸುತ್ತೀ; ಬಲಾತ್ಕಾರದ ಮನುಷ್ಯನಿಂದ ತಪ್ಪಿ ಸುತ್ತೀ.

1 ಅರಸುಗಳು 18:18

ಅದಕ್ಕೆ ಅವನು--ನಾನು ಇಸ್ರಾಯೇಲ್ಯರನ್ನು ಕಳವಳಪಡಿಸು ವದಿಲ್ಲ; ಆದರೆ ನೀನೂ ನಿನ್ನ ತಂದೆಯ ಮನೆಯವರೂ ಕರ್ತನ ಆಜ್ಞೆಗಳನ್ನು ತೊರೆದುಬಿಡುವದರಿಂದಲೇ; ಮತ್ತು ಬಾಳನನ್ನು ಹಿಂಬಾಲಿಸಿದಿ.

1 ಅರಸುಗಳು 20:40

ಆದರೆ ನಿನ್ನ ಸೇವಕನು ಅಲ್ಲಿ ಇಲ್ಲಿ ಕೆಲಸ ಮಾಡುತ್ತಿರುವಾಗ ಅವನು ಇಲ್ಲದೆ ಹೋದನು ಅಂದನು. ಇಸ್ರಾಯೇಲಿನ ಅರ ಸನು ಅವನಿಗೆ--ನಿನ್ನ ತೀರ್ಪಿನ ಹಾಗೆಯೇ ಆಗು ವದು; ನೀನೇ ನಿರ್ಣಯಿಸಿದಿ ಅಂದನು.

1 ಅರಸುಗಳು 20:42

ಇವನು ಅವನಿಗೆ--ಕರ್ತನು ಹೇಳುವ ದೇನಂದರೆ--ನಾನು ಪೂರ್ಣನಾಶಕ್ಕೆ ಒಪ್ಪಿಸಿದ ಮನು ಷ್ಯನನ್ನು ನೀನು ಕೈಬಿಟ್ಟು ಹೋಗಗೊಡಿಸಿದ ಕಾರಣ ಅವನ ಪ್ರಾಣಕ್ಕೆ ಬದಲಾಗಿ ನಿನ್ನ ಪ್ರಾಣವೂ ಅವನ ಜನಕ್ಕೆ ಬದಲಾಗಿ ನಿನ್ನ ಜನವೂ ಹೋಗುವದು ಅಂದನು.ಆಗ ಇಸ್ರಾಯೇಲಿನ ಅರಸನು ವ್ಯಸನ ದಿಂದಲೂ ಕೋಪದಿಂದಲೂ ಸಮಾರ್ಯದಲ್ಲಿದ್ದ ತನ್ನ ಮನೆಗೆ ಹೊರಟು ಬಂದನು.

1 ಅರಸುಗಳು 21:19

ನೀನು ಅವನಿಗೆನೀನು ಕೊಂದುಹಾಕಿ ಸ್ವಾಧೀನಮಾಡಿಕೊಂಡಿಯಲ್ಲಾ. ಆದದರಿಂದ ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲೇ ನಿನ್ನ ರಕ್ತವನ್ನು ನಿಶ್ಚಯವಾಗಿ ನೆಕ್ಕು ವವು ಎಂದು ಕರ್ತನು ಹೇಳುತ್ತಾನೆಂದು ಅಂದನು.

ಕೀರ್ತನೆಗಳು 18:1

ನನ್ನ ಬಲವಾಗಿರುವ ಓ ಕರ್ತನೇ, ನಾನು ನಿನ್ನನ್ನು ಪ್ರೀತಿಸುತ್ತೇನೆ.

ಯೆರೆಮಿಯ 34:6

ಆದರೆ ಅವರು ಹೇಳಿದ್ದೇನಂದರೆ--ನಾವು ದ್ರಾಕ್ಷಾರಸ ಕುಡಿಯುವದಿಲ್ಲ; ನಮ್ಮ ತಂದೆಯಾದ ರೇಕಾಬನ ಮಗನಾದ ಯೋನಾದಾಬನು ನಮಗೆ ಈ ಆಜ್ಞೆ ಕೊಟ್ಟನು; ಏನಂದರೆ--ನೀವಾದರೂ ನಿಮ್ಮ ಮಕ್ಕಳಾ ದರೂ ಎಂದೆಂದಿಗೂ ದ್ರಾಕ್ಷಾರಸವನ್ನು ಕುಡಿಯ ಬೇಡಿರಿ;

ಮತ್ತಾಯ 14:14

ಆಗ ಯೇಸು ಹೊರಟುಹೋಗಿ ಜನರ ಮಹಾಸಮೂಹವನ್ನು ಕಂಡು ಅವರ ಮೇಲೆ ಕನಿಕರ ಪಟ್ಟು ಅವರಲ್ಲಿದ್ದ ರೋಗಿಗಳನ್ನು ಸ್ವಸ್ಥಮಾಡಿದನು.

Interlinear

Choose Theme