Home Bibles 2 ಸಮುವೇಲ 12:8 · ಕನ್ನಡ ಬೈಬಲ್
2 ಸಮುವೇಲ 12:8 · ಕನ್ನಡ ಬೈಬಲ್

ನಿನ್ನ ಯಜಮಾನನ ಮನೆಯನ್ನೂ ನಿನ್ನ ಯಜಮಾನನ ಹೆಂಡತಿಯರನ್ನೂ ನಿನ್ನ ಎದೆಗೆ ಕೊಟ್ಟು ಇಸ್ರಾಯೇಲಿನ ಮನೆಯನ್ನೂ ಯೆಹೂದದ ಮನೆಯನ್ನೂ ನಿನಗೆ ಕೊಟ್ಟೆನು.

Cross references

1 ಸಮುವೇಲ 15:19

ಹೀಗಿರುವಾಗ ನೀನು ಯಾಕೆ ಕರ್ತನ ಮಾತಿಗೆ ವಿಧೇಯನಾಗದೆ ಕೊಳ್ಳೆಯ ಮೇಲೆ ಬಿದ್ದು ಕರ್ತನ ದೃಷ್ಟಿಗೆ ಕೆಟ್ಟದ್ದನ್ನು ಮಾಡಿದಿ ಅಂದನು.

2 ಸಮುವೇಲ 2:4

ಆಗ ಯೆಹೂದ ಜನರು ಬಂದು ಅಲ್ಲಿ ದಾವೀದನನ್ನು ಯೆಹೂದನ ಮನೆಯವರ ಮೇಲೆ ಅರಸನನ್ನಾಗಿ ಅಭಿಷೇಕಿಸಿದರು.

2 ಸಮುವೇಲ 5:5

ಅವನು ಹೆಬ್ರೋನಿನಲ್ಲಿ ಯೆಹೂದ ಜನರ ಮೇಲೆ ಏಳುವರೆ ವರುಷ ಆಳಿದನು. ಯೆರೂಸಲೇಮಿನಲ್ಲಿ ಎಲ್ಲಾ ಇಸ್ರಾಯೇಲ್ಯರ ಮೇಲೆಯೂ ಎಲ್ಲಾ ಯೆಹೂ ದದ ಜನರ ಮೇಲೆಯೂ ಮೂವತ್ತುಮೂರು ವರುಷ ಆಳಿದನು.

2 ಸಮುವೇಲ 7:19

ಓ ಕರ್ತ ನಾದ ದೇವರೇ, ಇದು ನಿನ್ನ ದೃಷ್ಟಿಯಲ್ಲಿ ಅಲ್ಪವೆಂದು ಕಾಣಿಸಿದಾಗ್ಯೂ ಮುಂದೆ ಬರುವ ಬಹು ಕಾಲದ ವರೆಗೆ ನಿನ್ನ ದಾಸನ ಮನೆಯನ್ನು ಕುರಿತು ಹೇಳಿದಿ. ಓ ಕರ್ತನಾದ ದೇವರೇ, ಇದು ಮನುಷ್ಯನ ಕ್ರಮವೋ?

2 ಸಮುವೇಲ 9:7

ದಾವೀ ದನು--ಮೆಫೀಬೋಶೆತನೇ ಅಂದನು. ಅವನು--ಇಗೋ, ನಿನ್ನ ದಾಸನು ಅಂದನು. ಆಗ ದಾವೀದನು ಅವನಿಗೆ -- ಭಯಪಡಬೇಡ, ನಿನ್ನ ತಂದೆಯಾದ ಯೋನಾತಾನನ ನಿಮಿತ್ತ ನಾನು ನಿನಗೆ ಖಂಡಿತವಾಗಿ ದಯೆತೋರಿಸುವೆನು. ನಿನ್ನ ತಂದೆಯಾದ ಸೌಲನ ಭೂಮಿಯನ್ನೆಲ್ಲಾ ನಿನಗೆ ತಿರಿಗಿ ಕೊಡುವೆನು ನೀನು ನನ್ನ ಮೇಜಿನಲ್ಲಿ ನಿತ್ಯವೂ ಭೋಜನ ಮಾಡುವಿ ಅಂದನು.

2 ಸಮುವೇಲ 12:2

ಐಶ್ವರ್ಯವಂತನಿಗೆ ಕುರಿ ಪಶುಗಳು ಬಹಳವಾಗಿದ್ದವು.

2 ಸಮುವೇಲ 12:11

ಕರ್ತನು--ಇಗೋ, ನಾನು ನಿನ್ನ ಮನೆಯಲ್ಲಿ ಕೆಟ್ಟದ್ದನ್ನು ನಿನಗೆ ವಿರೋಧವಾಗಿ ಏಳುವಂತೆ ಮಾಡಿ ನಿನ್ನ ಕಣ್ಣುಗಳ ಮುಂದೆ ನಿನ್ನ ಹೆಂಡತಿಯರನ್ನು ತೆಗೆದು ನಿನ್ನ ನೆರೆಯವನಿಗೆ ಕೊಡುವೆನು. ಅವನು ಹಗಲಿನಲ್ಲಿಯೇ ಅವರ ಸಂಗಡ ಮಲಗುವನು.

1 ಅರಸುಗಳು 2:22

ಅರಸನಾದ ಸೊಲೊಮೋನನು ತನ್ನ ತಾಯಿಗೆ ಪ್ರತ್ಯುತ್ತರವಾಗಿಅದೋನೀಯನಿಗೋಸ್ಕರ ಶೂನೇಮ್ಯಳಾದ ಅಬೀಷ ಗೈಳನ್ನು ನೀನು ಕೇಳುವದೇನು? ಅವನಿಗೋಸ್ಕರ ರಾಜ್ಯ ವನ್ನು ಕೇಳು, ಅವನು ನನ್ನ ಅಣ್ಣ. ಅವನಿಗೋಸ್ಕರವೂ ಯಾಜಕನಾದ ಎಬ್ಯಾತಾರನಿಗೋಸ್ಕರವೂ ಚೆರೂ ಯಳ ಮಗನಾದ ಯೋವಾಬನಿಗೋಸ್ಕರವೂ ಕೇಳು ಅಂದನು.

ಕೀರ್ತನೆಗಳು 84:11

ದೇವರಾದ ಕರ್ತನು ಸೂರ್ಯ ನೂ ಗುರಾಣಿಯೂ ಆಗಿದ್ದಾನೆ; ಕರ್ತನು ಕೃಪೆಯನ್ನೂ ಮಹಿಮೆಯನ್ನೂ ಕೊಡುತ್ತಾನೆ; ಸಂಪೂರ್ಣವಾಗಿ ನಡೆದುಕೊಳ್ಳುವವರಿಗೆ ಆತನು ಯಾವ ಒಳ್ಳೇದನ್ನು ಹಿಂದೆಗೆಯುವದಿಲ್ಲ.ಸೈನ್ಯಗಳ ಓ ಕರ್ತನೇ, ನಿನ್ನಲ್ಲಿ ಭರವಸವಿಡುವ ಮನುಷ್ಯನು ಧನ್ಯನು.

ಕೀರ್ತನೆಗಳು 86:15

ಆದರೆ ನೀನು ಓ ಕರ್ತನೇ, ಅಂತಃಕರುಣೆಯೂ ದಯೆಯೂ ಉಳ್ಳ ದೇವರು ದೀರ್ಘಶಾಂತನೂ ಬಹಳ ಕೃಪೆಯೂ ಸತ್ಯವೂ ಉಳ್ಳವನೂ ಆಗಿದ್ದೀ.

ರೋಮಾಪುರದವರಿಗೆ 8:32

ದೇವರು ತನ್ನ ಸ್ವಂತ ಮಗನನ್ನು ಉಳಿಸಿಕೊಳ್ಳದೆ ಆತನನ್ನು ನಮ್ಮೆಲ್ಲರಿಗೊಸ್ಕರ ಒಪ್ಪಿಸಿಕೊಟ್ಟ ಮೇಲೆ ಆತನೊಂದಿಗೆ ಎಲ್ಲವುಗಳನ್ನು ಉಚಿತವಾಗಿ ನಮಗೆ ಕೊಡದೆ ಇರುವನೇ?

Interlinear

Choose Theme