Home Bibles 2 ಸಮುವೇಲ 13:22 · ಕನ್ನಡ ಬೈಬಲ್
2 ಸಮುವೇಲ 13:22 · ಕನ್ನಡ ಬೈಬಲ್

ಅಬ್ಷಾಲೋಮನು ತನ್ನ ಸಹೋದರನಾದ ಅಮ್ನೋನನ ಸಂಗಡ ಒಳ್ಳೇದಾ ದರೂ ಕೆಟ್ಟದ್ದಾದರೂ ಮಾತನಾಡದೆ ಇದ್ದನು. ಅವನು ತನ್ನ ಸಹೋದರಿಯಾದ ತಾಮಾರಳನ್ನು ಬಲವಂತ ಮಾಡಿದ್ದರಿಂದ ಅಬ್ಷಾಲೋಮನು ಅವನನ್ನು ಹಗೆ ಮಾಡಿದನು.

Cross references

ಆದಿಕಾಂಡ 24:50

ಲಾಬಾನನೂ ಬೆತೊವೇಲನೂ ಪ್ರತ್ಯುತ್ತರವಾಗಿ--ಕರ್ತನಿಂದ ಆದ ಕಾರ್ಯಕ್ಕೆ ನಾವು ಕೆಟ್ಟದ್ದ ನ್ನಾದರೂ ಒಳ್ಳೆಯದನ್ನಾದರೂ ನಿನಗೆ ಹೇಳಲಾರೆವು.

ಆದಿಕಾಂಡ 31:24

ಆ ರಾತ್ರಿ ದೇವರು ಸ್ವಪ್ನದಲ್ಲಿ ಅರಾಮ್ಯನಾದ ಲಾಬಾನನ ಬಳಿಗೆ ಬಂದು ಅವನಿಗೆ--ನೀನು ಯಾಕೋಬನ ಸಂಗಡ ಒಳ್ಳೆಯದನ್ನಾಗಲಿ ಕೆಟ್ಟದನ್ನಾಗಲಿ ಮಾತನಾಡದಂತೆ ಎಚ್ಚರಿಕೆಯಾಗಿರು ಅಂದನು.

ಆದಿಕಾಂಡ 31:29

ನಿನಗೆ ಕೇಡುಮಾಡುವದಕ್ಕೆ ನನ್ನ ಕೈಯಲ್ಲಿ ಸಾಮರ್ಥ್ಯ ಇದೆ. ಆದರೆ ನಿನ್ನ ತಂದೆಯ ದೇವರು ನಿನ್ನೆ ರಾತ್ರಿ ನನ್ನ ಸಂಗಡ ಮಾತನಾಡಿ--ನೀನು ಯಾಕೋಬನಿಗೆ ಒಳ್ಳೇದನ್ನಾಗಲಿ ಕೆಟ್ಟದ್ದನ್ನಾಗಲಿ ಹೇಳದ ಹಾಗೆ ಎಚ್ಚರಿಕೆಯಾಗಿರು ಎಂದು ಹೇಳಿದನು.

ಲೇವ್ಯಕಾಂಡ 19:17

ನಿನ್ನ ಹೃದಯ ದಲ್ಲಿ ನಿನ್ನ ಸಹೋದರನನ್ನು ದ್ವೇಷಿಸಬೇಡ; ಹೇಗಾ ದರೂ ನಿನ್ನ ನೆರೆಯವನ ಪಾಪವು ನಿನ್ನ ಮೇಲೆ ಬಾರದಂತೆ ಅವನನ್ನು ತಪ್ಪದೆ ಗದರಿಸು.

ಸಾಮೇತಿಗಳು 10:18

ಸುಳ್ಳಾಡುವ ತುಟಿಗಳಿಂದ ಹಗೆಯನ್ನಿಟ್ಟುಕೊಂಡ ವನೂ ಚಾಡಿಹೇಳುವವನೂ ಮೂರ್ಖನು.

ಸಾಮೇತಿಗಳು 25:9

ನಿನ್ನ ನೆರೆಯವನೊಂದಿಗೆ ನಿನ್ನ ವ್ಯಾಜ್ಯವನ್ನು ಚರ್ಚಿಸು; ಗುಟ್ಟನ್ನು ಬೇರೊಬ್ಬನಿಗೆ ಹೊರಪಡಿಸಬೇಡ;

ಸಾಮೇತಿಗಳು 26:24

ಹಗೆಮಾಡುವವನು ತನ್ನ ತುಟಿಗಳಿಂದ ಮೋಸವನ್ನು ನಟಿಸುತ್ತಾನೆ, ತನ್ನ ಅಂತರಂಗದಲ್ಲಿ ಮೋಸವನ್ನು ಇಟ್ಟುಕೊಳ್ಳುತ್ತಾನೆ.

ಸಾಮೇತಿಗಳು 26:26

ಯಾವನ ಹಗೆ ತನವು ಮೋಸದಿಂದ ಮುಚ್ಚಲ್ಪಟ್ಟಿದೆಯೋ ಅವನ ಕೆಟ್ಟತನವು ಸಭೆಯಲ್ಲಿ ಬಯಲಾಗುವದು.

ಸಾಮೇತಿಗಳು 27:4

ಕ್ರೋಧವು ಕ್ರೂರ. ಕೋಪವು ಘೋರ; ಮತ್ಸರದ ಮುಂದೆ ಯಾವನು ನಿಂತಾನು?

ಸಭಾಪ್ರಸಂಗಿ 7:9

ಕೋಪಿಸಿಕೊಳ್ಳು ವದಕ್ಕೆ ನಿನ್ನ ಮನಸ್ಸಿನಲ್ಲಿ ಆತುರಪಡದಿರು; ಕೋಪವು ಮೂಢರ ಎದೆಯಲ್ಲಿ ನೆಲೆಗೊಳ್ಳುತ್ತದೆ.

ಮತ್ತಾಯ 18:15

ಇದಲ್ಲದೆ ನಿನ್ನ ಸಹೋದರನು ನಿನಗೆ ವಿರೋಧ ವಾಗಿ ತಪ್ಪು ಮಾಡಿದರೆ ನೀನೂ ಅವನೂ ಮಾತ್ರ ಇರುವಾಗ ಅವನ ತಪ್ಪನ್ನು ಅವನಿಗೆ ತಿಳಿಸು; ಅವನು ನಿನ್ನ ಮಾತನ್ನು ಕೇಳಿದರೆ ನೀನು ನಿನ್ನ ಸಹೋದರನನ್ನು ಸಂಪಾದಿಸಿಕೊಂಡಿರುವಿ.

ಎಫೆಸದವರಿಗೆ 4:26

ಕೋಪಮಾಡಬೇಕಾದರೂ ಪಾಪ ಮಾಡಬೇಡಿರಿ; ಸೂರ್ಯನು ಮುಳುಗುವದಕ್ಕಿಂತ ಮುಂಚೆ ನಿಮ್ಮ ಸಿಟ್ಟು ತೀರಲಿ;

ಎಫೆಸದವರಿಗೆ 4:31

ಎಲ್ಲಾ ದ್ವೇಷ, ಕೋಪ, ಕ್ರೋಧ, ಕಲಹ, ದೂಷಣೆ ಇವುಗಳನ್ನೂ ಸಕಲ ವಿಧವಾದ ದುಷ್ಟತನವನ್ನೂ ನಿಮ್ಮಿಂದ ದೂರ ಮಾಡಿರಿ.ದೇವರು ನಿಮಗೆ ಕ್ರಿಸ್ತನಲ್ಲಿ ಕ್ಷಮಿಸಿ ದಂತೆಯೇ ನೀವು ಒಬ್ಬರಿಗೊಬ್ಬರು ಉಪಕಾರಿಗಳಾ ಗಿಯೂ ಕರುಣೆಯುಳ್ಳವರಾಗಿಯೂ ಕ್ಷಮಿಸುವವ ರಾಗಿಯೂ ಇರ್ರಿ.

1 ಯೋಹಾನ 2:9

ಬೆಳಕಿನಲ್ಲಿದ್ದೇನೆಂದು ಹೇಳಿಕೊಂಡು ತನ್ನ ಸಹೋದರನನ್ನು ದ್ವೇಷಿಸುವವನು ಈವರೆಗೂ ಕತ್ತಲೆಯಲ್ಲಿದ್ದಾನೆ.

1 ಯೋಹಾನ 2:11

ಆದರೆ ತನ್ನ ಸಹೋದರನನ್ನು ದ್ವೇಷಿಸುವವನು ಕತ್ತಲೆಯಲ್ಲಿ ದ್ದಾನೆ ಮತ್ತು ಕತ್ತಲೆಯಲ್ಲಿ ನಡೆದುಕೊಳ್ಳುತ್ತಾನೆ. ಕತ್ತಲೆಯು ಅವನ ಕಣ್ಣುಗಳನ್ನು ಕುರುಡು ಮಾಡಿದ್ದರಿಂದ ತಾನು ಎಲ್ಲಿಗೆ ಹೋಗುತ್ತಾನೋ ಎಂದು ಅವನಿಗೆ ತಿಳಿಯದು.

1 ಯೋಹಾನ 3:15

ಯಾರಾದರೂ ತನ್ನ ಸಹೋದರನನ್ನು ದ್ವೇಷಿಸುವ ವನು ಕೊಲೆಗಾರನಾಗಿದ್ದಾನೆ. ಯಾವ ಕೊಲೆಗಾರ ನಲ್ಲಿಯೂ ನಿತ್ಯಜೀವವು ಇರುವದಿಲ್ಲವೆಂಬದು ನಿಮಗೆ ಗೊತ್ತಾಗಿದೆ.

Interlinear

Choose Theme