Home Bibles 2 ಸಮುವೇಲ 13:4 · ಕನ್ನಡ ಬೈಬಲ್
2 ಸಮುವೇಲ 13:4 · ಕನ್ನಡ ಬೈಬಲ್

ಇವನು ಅವನಿಗೆ--ಅರಸನ ಮಗನಾದ ನೀನು ದಿನದಿನಕ್ಕೆ ಯಾಕೆ ಕ್ಷೀಣನಾಗಿ ಹೋಗುತ್ತೀ? ನನಗೆ ತಿಳಿಸುವದಿಲ್ಲವೋ ಅಂದನು. ಅದಕ್ಕೆ ಅಮ್ನೋನನು ಅವನಿಗೆ--ನಾನು ನನ್ನ ಸಹೋದರನಾಗಿರುವ ಅಬ್ಷಾ ಲೋಮನ ಸಹೋದರಿಯಾದ ತಾಮಾರಳನ್ನು ಪ್ರೀತಿ ಮಾಡುತ್ತೇನೆ ಅಂದನು.

Cross references

ಲೇವ್ಯಕಾಂಡ 18:9

ನಿನ್ನ ಸಹೋದರಿಯ ಇಲ್ಲವೆ ನಿನ್ನ ತಂದೆಯ ಮಗಳ, ಅಂದರೆ ಅವಳು ಮನೆಯಲ್ಲಿ ಹುಟ್ಟಿದವಳಾಗಿರಲಿ ಹೊರಗೆ ಹುಟ್ಟಿದ ವಳಾಗಿರಲಿ ಅವರ ಬೆತ್ತಲೆತನವನ್ನು ಕಾಣುವಂತೆ ನೀನು ಮಾಡಬಾರದು.

ಲೇವ್ಯಕಾಂಡ 20:17

ಒಬ್ಬನು ತನ್ನ ತಂದೆಯ ಇಲ್ಲವೆ ತನ್ನ ತಾಯಿಯ ಮಗಳಾದ ತನ್ನ ಸಹೋದರಿಯನ್ನು ತೆಗೆದುಕೊಂಡು ಅವಳ ಬೆತ್ತಲೆ ತನವನ್ನು ನೋಡಿದರೆ ಇಲ್ಲವೆ ಅವಳು ಅವನ ಬೆತ್ತಲೆತನವನ್ನು ನೋಡಿದರೆ ಅದು ದುಷ್ಟತನವೇ; ಅವರು ತಮ್ಮ ಜನರ ದೃಷ್ಟಿಯಲ್ಲಿಯೇ ತೆಗೆದು ಹಾಕಲ್ಪಡಬೇಕು; ಅವರ ರಕ್ತವು ಅವರ ಮೇಲೆ ಇರುವದು. ಅವನು ತನ್ನ ಸಹೋದರಿಯ ಬೆತ್ತಲೆತನ ವನ್ನು ಕಾಣುವಂತೆ ಮಾಡಿದ್ದರಿಂದ ತನ್ನ ಅಪರಾಧ ವನ್ನು ತಾನೇ ಹೊತ್ತುಕೊಳ್ಳುವನು.

1 ಅರಸುಗಳು 21:5

ಆಗ ಅವನ ಹೆಂಡತಿಯಾದ ಈಜೆಬೆಲಳು ಅವನ ಬಳಿಗೆ ಬಂದು ಅವನಿಗೆ--ನೀನು ರೊಟ್ಟಿ ತಿನ್ನದ ಹಾಗೆ ನಿನ್ನ ಪ್ರಾಣ ವ್ಯಸನವುಳ್ಳದ್ದಾಗಿರುವದೇನು ಅಂದಳು.

1 ಅರಸುಗಳು 21:7

ಆಗ ಅವನ ಹೆಂಡತಿಯಾದ ಈಜೆಬೆಲಳು ಅವನಿಗೆ--ನೀನು ಈಗ ಇಸ್ರಾಯೇಲಿನ ರಾಜ್ಯವನ್ನು ಆಳುತ್ತಾ ಇದ್ದೀಯೊ? ಎದ್ದು ರೊಟ್ಟಿತಿನ್ನು; ನಿನ್ನ ಹೃದಯ ಸಂತೋಷವಾಗಿರಲಿ. ನಾನೇ ಇಜ್ರೇಲ್ಯನಾದ ನಾಬೋತನ ದ್ರಾಕ್ಷೇ ತೋಟವನ್ನು ನಿನಗೆ ಕೊಡುವೆನು ಅಂದಳು.

ಎಸ್ತೇರ್ 5:13

ಆದರೆ ಯೆಹೂದ್ಯನಾದ ಮೊರ್ದೆಕೈ ಅರಮನೆಯ ಬಾಗಲಲ್ಲಿ ಕುಳಿತಿರುವದನ್ನು ನಾನು ನೋಡುವ ವರೆಗೆ ಇದೆಲ್ಲಾ ನನಗೆ ಪ್ರಯೋ ಜನವಿಲ್ಲ ಅಂದನು.ಆಗ ಅವನ ಹೆಂಡತಿಯಾದ ಜೆರೆಷಳೂ ಅವನ ಸಮಸ್ತ ಸ್ನೇಹಿತರೂ ಅವನಿಗೆಐವತ್ತು ಮೊಳ ಉದ್ದವಾದ ಒಂದು ಗಲ್ಲಿನ ಮರವು ಮಾಡಲ್ಪಡಲಿ; ಮೊರ್ದೆಕೈ ಅದರಲ್ಲಿ ಹಾಕಲ್ಪಡುವ ಹಾಗೆ ನಾಳೆ ಅರಸನ ಸಂಗಡ ಮಾತನಾಡು; ತರುವಾಯ ಅರಸನ ಸಂಗಡ ಔತಣಕ್ಕೆ ಸಂತೋಷ ವಾಗಿ ಹೋಗು ಅಂದರು. ಈ ಮಾತು ಹಾಮಾನನಿಗೆ ಚೆನ್ನಾಗಿ ಕಾಣಿಸಿದ್ದರಿಂದ ಗಲ್ಲಿನ ಮರವನ್ನು ಸಿದ್ಧ ಮಾಡಿಸಿದನು.

ಯೆಶಾಯ 3:9

ಅವರ ಮುಖಭಾವವೇ ಅವರಿಗೆ ವಿರುದ್ಧವಾಗಿ ಸಾಕ್ಷಿಯಾಗಿದೆ. ತಮ್ಮ ಪಾಪ ಗಳನ್ನು ಸೊದೋಮಿನವರಂತೆ ಮರೆಮಾಜದೆ ಪ್ರಕಟ ಮಾಡುತ್ತಾರೆ. ಅವರ ಆತ್ಮಕ್ಕೆ ಅಯ್ಯೋ! ತಮಗೆ ತಾವೇ ಕೇಡನ್ನು ಪ್ರತೀಕಾರವಾಗಿ ಮಾಡಿಕೊಂಡಿದ್ದಾರೆ.

ಯೆರೆಮಿಯ 8:12

ಇದನ್ನು ಗ್ರಹಿಸುವ ಜ್ಞಾನಿ ಯಾದ ಮನುಷ್ಯನು ಯಾರು? ಇದನ್ನು ತಿಳಿಸುವ ಹಾಗೆ ಕರ್ತನ ಬಾಯಿ ಯಾರ ಸಂಗಡ ಮಾತನಾಡಿತ್ತು? ದೇಶವು ಯಾವದಕ್ಕಾಗಿ ನಾಶವಾಗಿ ಹಾದು ಹೋಗುವ ವನಿಲ್ಲದೆ ಅರಣ್ಯದ ಹಾಗೆ ಹಾಳಾಯಿತು?

ಮೀಕ 7:3

ಕೆಟ್ಟದ್ದನ್ನು ಎರಡು ಕೈಗಳಿಂದ ಚೆನ್ನಾಗಿ ಮಾಡುವ ಹಾಗೆ ಪ್ರಧಾನನೂ ನ್ಯಾಯಾಧಿಪತಿಯೂ ಬಹುಮಾನವನ್ನು ಕೇಳುತ್ತಾರೆ; ದೊಡ್ಡ ಮನುಷ್ಯನು ತನ್ನ ಕೇಡಿನ ಆಸೆಯನ್ನು ತಾನೇ ಹೇಳುತ್ತಾನೆ; ಅವರು ಒಂದೇ ಕಟ್ಟಾಗಿದ್ದಾರೆ.

ಲೂಕ 12:32

ಚಿಕ್ಕ ಹಿಂಡೇ, ಭಯಪಡಬೇಡ; ಯಾಕಂದರೆ ನಿಮಗೆ ರಾಜ್ಯವನ್ನು ಕೊಡುವದಕ್ಕೆ ನಿಮ್ಮ ತಂದೆಯು ಸಂತೋಷವುಳ್ಳವನಾಗಿದ್ದಾನೆ.

Interlinear

Choose Theme