Home Bibles 2 ಸಮುವೇಲ 14:26 · ಕನ್ನಡ ಬೈಬಲ್
2 ಸಮುವೇಲ 14:26 · ಕನ್ನಡ ಬೈಬಲ್

ಅವನು ತನ್ನ ತಲೆಯ ಕೂದಲು ಭಾರವಾಗಿದೆ ಎಂದು ಪ್ರತಿವರುಷದ ಕೊನೆಯಲ್ಲಿ ಬೋಳಿಸಿಕೊಳ್ಳುವನು; ಬೋಳಿಸಿಕೊಳ್ಳುವಾಗ ಅವನ ತಲೆಯ ಕೂದಲು ಅರಸನ ತೂಕದ ಪ್ರಕಾರ ಇನ್ನೂರು ಶೆಕೇಲು ತೂಕವಾಗಿರುವದು.

Cross references

ಆದಿಕಾಂಡ 23:16

ಅಬ್ರಹಾಮನು ಎಫ್ರೋನನ ಮಾತನ್ನು ಕೇಳಿದನು. ಆದದರಿಂದ ಹೇತನ ಮಕ್ಕಳಿಗೆ ಕೇಳುವಂತೆ ಎಫ್ರೋನನು ಹೇಳಿದ ಬೆಲೆ ಅಂದರೆ ವರ್ತಕರಲ್ಲಿ ನಡಿಯುವ ನಾಲ್ಕುನೂರು ಶೆಕೆಲು (ಬೆಳ್ಳಿಯನ್ನು) ತೂಗಿ ಅವನಿಗೆ ಕೊಟ್ಟನು.

ಲೇವ್ಯಕಾಂಡ 19:36

ನ್ಯಾಯದತ್ರಾಸು, ನ್ಯಾಯದ ಕಲ್ಲುಗಳು, ನ್ಯಾಯದಎಫವು ಮತ್ತು ನ್ಯಾಯದಹೀನ್‌ ನಿಮಗಿರಬೇಕು. ಐಗುಪ್ತದೇಶದೊಳಗಿಂದ ನಿಮ್ಮನ್ನು ಹೊರಗೆ ತಂದ ನಿಮ್ಮ ದೇವರಾದ ಕರ್ತನು ನಾನೇ.ಆದದರಿಂದ ನನ್ನ ಎಲ್ಲಾ ನಿಯಮಗಳನ್ನೂ ನ್ಯಾಯ ಗಳನ್ನೂ ಕೈಕೊಂಡು ಅವುಗಳನ್ನು ಮಾಡಬೇಕು; ನಾನೇ ಕರ್ತನು ಎಂದು ಹೇಳಿದನು.

2 ಸಮುವೇಲ 18:9

ಆಗ ಅಬ್ಷಾಲೋಮನು ದಾವೀದನ ಸೇವಕರಿಗೆ ಎದುರಾಗಿ ಬಂದನು. ಆದರೆ ಅಬ್ಷಾಲೋಮನು ಹೇಸರ ಕತ್ತೆಯ ಮೇಲೆ ಏರಿದ್ದನು. ಆ ಹೇಸರ ಕತ್ತೆಯು ಒಂದು ದೊಡ್ಡ ಏಲಾ ಮರದ ಬಲವಾದ ಕೊಂಬೆಗಳ ಕೆಳಗೆ ಬಂದಾಗ ಅವನ ತಲೆಯು ಆ ಮರದ ಕೊಂಬೆ ಯಲ್ಲಿ ಸಿಕ್ಕಿಕೊಂಡಿತು. ಆದದರಿಂದ ಅವನು ಹತ್ತಿದ್ದ ಹೇಸರ ಕತ್ತೆಯು ಹೊರಟು ಹೋಯಿತು.

ಯೆಶಾಯ 3:24

ಆಗ ಸುವಾಸನೆಯ ಬದಲಾಗಿ ದುರ್ವಾಸನೆ, ಡಾಬಿಗೆ ಬದಲಾಗಿ ಹಗ್ಗ; ಜಡೆಯ ಬದಲಾಗಿ ಬೋಳುತಲೆ; ನಡುವಿನ ಶಲ್ಯಕ್ಕೆ ಪ್ರತಿಯಾಗಿ ಗೋಣೀತಟ್ಟು; ಸೌಂದರ್ಯಕ್ಕೆ ಬದಲಾಗಿ ಬರೆ, ಇವು ಆಗುವವು;

ಯೆಹೆಜ್ಕೇಲ 44:20

ಇದಲ್ಲದೆ ಅವರು ತಮ್ಮ ತಲೆಗಳನ್ನು ಬೋಳಿಸಿಕೊಳ್ಳದೆ ಉದ್ದ ಕೂದಲನ್ನು ಬೆಳೆಸದೆ ತಮ್ಮ ತಲೆಕೂದಲುಗಳನ್ನು ಕತ್ತರಿಸಬೇಕು.

ಯೆಹೆಜ್ಕೇಲ 45:9

ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಓ ಇಸ್ರಾಯೇಲಿನ ಪ್ರಭುಗಳೇ, ನೀವು ಸಾಕುಮಾಡಿರಿ, ಬಲಾತ್ಕಾರವನ್ನು ಸುಲಿಗೆಯನ್ನು ಬಿಡಿರಿ; ನ್ಯಾಯವನ್ನೂ ನೀತಿಯನ್ನೂ ಮಾಡಿರಿ; ನನ್ನ ಜನರನ್ನು ಓಡಿಸಬೇಡಿರಿ ಎಂದು ದೇವರಾದ ಕರ್ತನು ಹೇಳುತ್ತಾನೆ.

1 ಕೊರಿಂಥದವರಿಗೆ 11:14

ಪುರುಷನು ಕೂದಲು ಬೆಳೆಸಿಕೊಂಡರೆ ಅದು ಅವನಿಗೆ ಅವಮಾನ ಕರವಾಗಿದೆಯೆಂದು ನಿಮಗೆ ಸ್ವಭಾವ ಸಿದ್ಧವಾಗಿ ತಿಳಿಯುತ್ತದಲ್ಲವೋ?

Interlinear

Choose Theme