Home Bibles 2 ಸಮುವೇಲ 14:33 · ಕನ್ನಡ ಬೈಬಲ್
2 ಸಮುವೇಲ 14:33 · ಕನ್ನಡ ಬೈಬಲ್

ಹಾಗೆಯೇ ಯೋವಾಬನು ಅರಸನ ಬಳಿಗೆ ಹೋಗಿ ತಿಳಿಸಿದ್ದರಿಂದ ಅರಸನು ಅಬ್ಷಾ ಲೋಮನನ್ನು ಕರೆಸಿದನು. ಆಗ ಅವನು ಅರಸನ ಬಳಿಗೆ ಬಂದು ಸಾಷ್ಟಾಂಗನಮಸ್ಕಾರ ಮಾಡಿದನು. ಆಗ ಅರಸನು ಅಬ್ಷಾಲೋಮನನ್ನು ಮುದ್ದಿಟ್ಟನು.

Cross references

ಆದಿಕಾಂಡ 27:26

ಅವನ ತಂದೆಯಾದ ಇಸಾಕನು ಅವನಿಗೆ--ನನ್ನ ಮಗನೇ, ಹತ್ತಿರ ಬಂದು ನನಗೆ ಮುದ್ದಿಡು ಅಂದನು.

ಆದಿಕಾಂಡ 33:4

ಆಗ ಏಸಾವನು ಅವನನ್ನು ಎದುರುಗೊಳ್ಳುವದಕ್ಕೆ ಓಡಿ ಬಂದು ಅವನನ್ನು ಅಪ್ಪಿಕೊಂಡು ಅವನ ಕೊರಳಿನ ಮೇಲೆ ಬಿದ್ದು ಅವನಿಗೆ ಮುದ್ದಿಟ್ಟನು. ಅವರು ಅತ್ತರು.

ಆದಿಕಾಂಡ 45:15

ಇದಲ್ಲದೆ ತನ್ನ ಸಹೋದರ ರಿಗೆಲ್ಲಾ ಮುದ್ದಿಟ್ಟು ಅವರನ್ನು ಹಿಡುಕೊಂಡು ಅತ್ತನು. ತರುವಾಯ ಅವನ ಸಹೋದರರು ಅವನ ಸಂಗಡ ಮಾತನಾಡಿದರು.

1 ಅರಸುಗಳು 1:53

ಅರಸನಾದ ಸೊಲೊಮೋನನು ಅವ ನನ್ನು ಕರೆಸಿದಾಗ ಬಲಿಪೀಠದ ಬಳಿಯಿಂದ ಅವ ನನ್ನು ಕರಕೊಂಡು ಬಂದರು. ಆಗ ಅವನು ಬಂದು ಅರಸನಾದ ಸೊಲೊಮೋನನಿಗೆ ಅಡ್ಡ ಬಿದ್ದನು. ಸೊಲೊಮೋನನು ಅವನಿಗೆ--ನಿನ್ನ ಮನೆಗೆ ಹೋಗು ಅಂದನು.

ಲೂಕ 15:20

ಎದ್ದು ತನ್ನ ತಂದೆಯ ಬಳಿಗೆ ಬಂದನು. ಆದರೆ ಅವನು ಇನ್ನೂ ಬಹಳ ದೂರದಲ್ಲಿರುವಾಗಲೇ ಅವನ ತಂದೆಯು ಅವನನ್ನು ನೋಡಿ ಕನಿಕರಪಟ್ಟು ಓಡಿಬಂದು ಅವನ ಕೊರಳನ್ನು ಅಪ್ಪಿಕೊಂಡು ಅವನಿಗೆ ಮುದ್ದಿಟ್ಟನು.

Interlinear

Choose Theme