Home Bibles ☰ Books 2 ಸಮುವೇಲ 14:9 · ಕನ್ನಡ ಬೈಬಲ್
2 ಸಮುವೇಲ 14:9 · ಕನ್ನಡ ಬೈಬಲ್

ಆದರೆ ತೆಕೋವಿನ ಸ್ತ್ರೀಯು ಅರಸನಿಗೆ--ಅರಸನಾದ ನನ್ನ ಒಡೆಯನೇ, ಆ ಅಕ್ರಮವು ನನ್ನ ಮೇಲೆಯೂ ನನ್ನ ತಂದೆಯ ಮನೆಯ ಮೇಲೆಯೂ ಇರಲಿ; ಅರಸನೂ ಅವನ ಸಿಂಹಾಸನವೂ ನಿರಾಪರಾಧವಾಗಿರಲಿ ಅಂದಳು.

Cross references

ಆದಿಕಾಂಡ 27:13

ಅದಕ್ಕೆ ಅವನ ತಾಯಿಯು ಅವನಿಗೆ--ನನ್ನ ಮಗನೇ, ನಿನ್ನ ಶಾಪವು ನನ್ನ ಮೇಲೆ ಇರಲಿ; ನೀನು ಮಾತ್ರ ನನ್ನ ಮಾತಿಗೆ ವಿಧೇಯನಾಗಿ ಹೋಗಿ ಅವುಗಳನ್ನು ನನ್ನ ಬಳಿಗೆ ತಕ್ಕೊಂಡು ಬಾ ಅಂದಳು.

ಅಂಕೆಗಳ ಪುಸ್ತಕ 35:33

ಹೀಗೆ ನೀವು ಇರುವ ದೇಶವನ್ನು ಅಪವಿತ್ರ ಮಾಡಬೇಡಿರಿ; ದೇಶವನ್ನು ಅಪವಿತ್ರಮಾಡು ವಂಥದ್ದು ರಕ್ತವೇ. ಅದರಲ್ಲಿ ಚೆಲ್ಲಲ್ಪಟ್ಟ ರಕ್ತದ ನಿಮಿತ್ತ ಅದನ್ನು ಚೆಲ್ಲಿದವನ ರಕ್ತದಿಂದಲ್ಲದೆ ದೇಶವು ಶುದ್ಧವಾ ಗುವದಿಲ್ಲ.ಆದದರಿಂದ ನೀವು ವಾಸಮಾಡುವ ದೇಶವನ್ನು ನೀವು ಅಶುದ್ಧಮಾಡಬೇಡಿರಿ; ಯಾಕಂದರೆ ನಾನು ಅದರೊಳಗೆ ವಾಸಿಸುತ್ತೇನೆ; ಕರ್ತನಾಗಿರುವ ನಾನೇ ಇಸ್ರಾಯೇಲ್‌ ಮಕ್ಕಳ ಮಧ್ಯದಲ್ಲಿ ವಾಸಿಸುತ್ತೇನೆ.

ದ್ವಿತೀಯೋಪದೇಶಕಾಂಡ 21:1

ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯ ವಾಗಿ ಕೊಡುವ ದೇಶದಲ್ಲಿ ಯಾವನಾ ದರೂ ಹತನಾಗಿ ಹೊಲದಲ್ಲಿ ಸಿಕ್ಕಿರಲಾಗಿ ಅವನನ್ನು ಯಾರು ಹೊಡೆದರೆಂದು ತಿಳಿಯದೆ ಹೋದರೆ

1 ಸಮುವೇಲ 25:24

ದಯಮಾಡಿ ನಿನ್ನ ದಾಸಿಯನ್ನು ಮಾತಾಡಗೊಡಿಸಿ ನಿನ್ನ ದಾಸಿಯ ಮಾತುಗಳನ್ನು ಕೇಳು.

2 ಸಮುವೇಲ 3:28

ದಾವೀದನು ಅದನ್ನು ಕೇಳಿದಾಗ--ನೇರನ ಮಗ ನಾದ ಅಬ್ನೇರನ ರಕ್ತಾಪರಾಧಕ್ಕೆ ನಾನೂ ನನ್ನ ರಾಜ್ಯವೂ ಎಂದೆಂದಿಗೂ ಕರ್ತನ ಮುಂದೆ ನಿರಪರಾ ಧಿಯಾಗಿದ್ದೇವೆ.

1 ಅರಸುಗಳು 2:33

ಆದದರಿಂದ ಅವರ ರಕ್ತಾಪರಾಧವು ಯೋವಾಬನ ತಲೆಯ ಮೇಲೆ ಯೂ ಅವನ ಸಂತತಿಯವರ ತಲೆಯ ಮೇಲೆಯೂ ಯುಗಯುಗಕ್ಕೂ ಇರುವದು. ಆದರೆ ದಾವೀದನ ಮೇಲೆಯೂ ಅವನ ಸಂತಾನದವರ ಮೇಲೆಯೂ ಮನೆಯ ಮೇಲೆಯೂ ಸಿಂಹಾಸನದ ಮೇಲೆಯೂ ಕರ್ತನಿಂದ ಸಮಾಧಾನವು ಯುಗಯುಗಾಂತರಕ್ಕೂ ಇರುವದು ಅಂದನು.

ಮತ್ತಾಯ 27:25

ಅದಕ್ಕೆ ಜನರೆ ಲ್ಲರೂ ಪ್ರತ್ಯುತ್ತರವಾಗಿ--ಆತನ ರಕ್ತವು ನಮ್ಮ ಮೇಲೆಯೂ ನಮ್ಮ ಮಕ್ಕಳ ಮೇಲೆಯೂ ಇರಲಿ ಅಂದರು.

Interlinear

Choose Theme