Home Bibles 2 ಸಮುವೇಲ 16:21 · ಕನ್ನಡ ಬೈಬಲ್
2 ಸಮುವೇಲ 16:21 · ಕನ್ನಡ ಬೈಬಲ್

ಅಹೀತೋಫೆಲನು ಅಬ್ಷಾಲೋಮನಿಗೆ--ನಿನ್ನ ತಂದೆಯು ಮನೆಗೆ ಕಾವಲಿಟ್ಟ ಉಪಪತ್ನಿಗಳೊಡನೆ ಸಂಗಮಿಸು; ಆಗ ನಿನ್ನ ತಂದೆ ಯಿಂದ ನೀನು ಹಗೆಮಾಡಲ್ಪಟ್ಟವನೆಂದು ಎಲ್ಲಾ ಇಸ್ರಾ ಯೇಲ್ಯರು ಕೇಳಿ ನಿನ್ನ ಸಂಗಡ ಇರುವ ಎಲ್ಲಾ ಜನರ ಕೈಗಳೂ ಬಲವಾಗಿರುವವು ಅಂದನು.

Cross references

ಆದಿಕಾಂಡ 6:4

ಆ ದಿನಗಳಲ್ಲಿ ಭೂಮಿಯ ಮೇಲೆ ಮಹಾ ಶರೀರಗಳಾದವರು ಇದ್ದರು, ಆಮೇಲೆಯೂ ಇದ್ದರು; ದೇವಕುಮಾರರು ಮನುಷ್ಯ ಕುಮಾರ್ತೆಯರನ್ನು ಕೂಡಿದಾಗ ಅವರಿಗೆ ಮಕ್ಕಳನ್ನು ಹೆತ್ತರು. ಇವರೇ ಪೂರ್ವಕಾಲದಲ್ಲಿ ಪ್ರಸಿದ್ಧರಾದ ಪರಾಕ್ರಮಶಾಲಿ ಗಳಾಗಿದ್ದವರು.

ಆದಿಕಾಂಡ 34:30

ಆಗ ಯಾಕೋಬನು ಸಿಮೆಯೋನನಿಗೂ ಲೇವಿಗೂ ಹೇಳಿದ್ದೇನಂದರೆ--ನೀವು ನನ್ನನ್ನು ದೇಶದ ನಿವಾಸಿಗಳಾದ ಕಾನಾನ್ಯರಿಗೂ ಪೆರಿಜೀಯರಿಗೂ ದುರ್ವಾಸನೆಯಾಗುವಂತೆ ಮಾಡಿ ನನ್ನನ್ನು ಕಳವಳಪಡಿ ಸಿದಿರಿ; ನಾನು ಸ್ವಲ್ಪ ಮಂದಿಯುಳ್ಳವನು, ಹೀಗಿರುವಲ್ಲಿ ಅವರು ನನಗೆ ವಿರೋಧವಾಗಿ ಕೂಡಿಕೊಂಡು ನನ್ನನ್ನು ಕೊಲ್ಲುವರು. ಆಗ ನಾನೂ ನನ್ನ ಮನೆಯವರೂ ನಾಶವಾಗುವೆವು ಅಂದನು.ಆದರೆ ಅವರುನಮ್ಮ ತಂಗಿಯೊಂದಿಗೆ ಸೂಳೆಯಂತೆ ವರ್ತಿಸಬಹುದೋ ಅಂದರು.

ಆದಿಕಾಂಡ 35:22

ಇಸ್ರಾಯೇಲನು ಆ ದೇಶದಲ್ಲಿ ವಾಸವಾಗಿದ್ದಾಗ ರೂಬೇನನು ಹೋಗಿ ತನ್ನ ತಂದೆಯ ಉಪಪತ್ನಿಯಾದ ಬಿಲ್ಹಳ ಸಂಗಡ ಮಲಗಿದನು. ಅದನ್ನು ಇಸ್ರಾಯೇಲನು ಕೇಳಿದನು. ಯಾಕೋಬನಿಗೆ ಹನ್ನೆರಡು ಮಂದಿ ಕುಮಾರರು ಇದ್ದರು.

ಆದಿಕಾಂಡ 38:16

ಮಾರ್ಗ ದಿಂದ ಆಕೆಯ ಕಡೆಗೆ ತಿರುಗಿಕೊಂಡು ಅವನು--ನನ್ನನ್ನು ನಿನ್ನ ಬಳಿಗೆ ಬರಗೊಡಿಸು ಅಂದನು. (ಯಾಕಂದರೆ ಅವಳು ತನ್ನ ಸೊಸೆಯೆಂದು ಅವನಿಗೆ ತಿಳಿದಿರಲಿಲ್ಲ). ಅವಳು--ನೀನು ನನ್ನ ಬಳಿಗೆ ಬಂದರೆ ನನಗೆ ಏನು ಕೊಡುವಿ ಅಂದಳು.

ಆದಿಕಾಂಡ 49:3

ರೂಬೇನನೇ, ನೀನು ನನ್ನ ಚೊಚ್ಚಲ ಮಗನು, ನನ್ನ ಶಕ್ತಿಯೂ ನನ್ನ ಬಲದ ಆರಂಭವೂ ಔನ್ಯತ್ಯಾತಿ ಶಯವೂ ಬಲಾತಿಶಯವೂ ನೀನೇ.

ಲೇವ್ಯಕಾಂಡ 18:8

ನಿನ್ನ ತಂದೆಯ ಹೆಂಡತಿಯ ಬೆತ್ತಲೆ ತನವನ್ನು ನೀನು ಕಾಣುವಂತೆ ಮಾಡಬಾರದು; ಅದು ನಿನ್ನ ತಂದೆಯ ಬೆತ್ತಲೆತನ.

ಲೇವ್ಯಕಾಂಡ 20:11

ತನ್ನ ತಂದೆಯ ಹೆಂಡತಿಯೊಡನೆ ಸಂಗಮಿಸುವವನು ತನ್ನ ತಂದೆಯ ಬೆತ್ತಲೆತನವನ್ನು ಕಾಣುವಂತೆ ಮಾಡಿದ್ದಾನೆ; ಅವರಿಬ್ಬರಿಗೂ ನಿಶ್ಚಯವಾಗಿ ಮರಣದಂಡನೆ ವಿಧಿಸ ಬೇಕು; ಅವರ ರಕ್ತವು ಅವರ ಮೇಲೆ ಇರುವದು;

1 ಸಮುವೇಲ 13:4

ಫಿಲಿಷ್ಟಿಯರ ಠಾಣ ವನ್ನು ಸೌಲನು ಹೊಡೆದನೆಂದೂ ಫಿಲಿಷ್ಟಿಯರಿಗೆ ಇಸ್ರಾಯೇಲ್ಯರು ಅಸಹ್ಯವಾದವರಾದರೆಂದೂ ಸಮಸ್ತ ಇಸ್ರಾಯೇಲ್ಯರು ಕೇಳಿದಾಗ ಸೌಲನ ಹಿಂದೆ ಹೋಗಲು ಗಿಲ್ಗಾಲಿಗೆ ಕರೆಸಿಕೊಳ್ಳಲ್ಪಟ್ಟರು.

1 ಸಮುವೇಲ 27:12

ಆಕೀಷನು ದಾವೀದನನ್ನು ನಂಬಿ--ಇವನು ತನ್ನ ಜನರಾದ ಇಸ್ರಾಯೇಲ್ಯರಿಗೆ ಅಸಹ್ಯವಾದನು. ಆದದರಿಂದ ಇವನು ಎಂದೆಂದಿಗೂ ನನ್ನ ದಾಸನಾಗಿ ರುವನು ಅಂದನು.

2 ಸಮುವೇಲ 2:7

ನೀವು ಪರಾ ಕ್ರಮಶಾಲಿಗಳಾಗಿದ್ದು ನಿಮ್ಮ ಕೈಗಳು ಬಲವಾಗಿರಲಿ; ನಿಮ್ಮ ಯಜಮಾನನಾದ ಸೌಲನು ಸತ್ತುಹೋದನು; ಯೆಹೂದನ ಮನೆಯವರು ನನ್ನನ್ನು ತಮ್ಮ ಮೇಲೆ ಅರಸನನ್ನಾಗಿ ಅಭಿಷೇಕಮಾಡಿದರು ಅಂದನು.

2 ಸಮುವೇಲ 10:6

ಅಮ್ಮೋನನ ಮಕ್ಕಳು ತಾವು ದಾವೀದನಿಗೆ ಅಸಹ್ಯ ವಾದೆವೆಂದು ತಿಳುಕೊಂಡಾಗ ಅವರು (ದೂತರನ್ನು) ಕಳುಹಿಸಿ ಬೇತ್‌ರೆಹೋಬ್‌ನಲ್ಲಿಯೂ ಚೋಬಾದ ಲ್ಲಿಯೂ ಇರುವ ಇಪ್ತತ್ತು ಸಾವಿರ ಕಾಲಾಳುಗಳಾದ ಅರಾಮ್ಯರನ್ನೂ ಅರಸನಾದ ಮಾಕನ ಬಳಿಯಿಂದ ಸಾವಿರ ಜನರನ್ನೂ ಇಷ್ಟೋಬ್‌ನಿಂದ ಹನ್ನೆರಡು ಸಾವಿರ ಜನರನ್ನೂ ಕೂಲಿಗೆ ತೆಗೆದುಕೊಂಡರು.

2 ಸಮುವೇಲ 12:11

ಕರ್ತನು--ಇಗೋ, ನಾನು ನಿನ್ನ ಮನೆಯಲ್ಲಿ ಕೆಟ್ಟದ್ದನ್ನು ನಿನಗೆ ವಿರೋಧವಾಗಿ ಏಳುವಂತೆ ಮಾಡಿ ನಿನ್ನ ಕಣ್ಣುಗಳ ಮುಂದೆ ನಿನ್ನ ಹೆಂಡತಿಯರನ್ನು ತೆಗೆದು ನಿನ್ನ ನೆರೆಯವನಿಗೆ ಕೊಡುವೆನು. ಅವನು ಹಗಲಿನಲ್ಲಿಯೇ ಅವರ ಸಂಗಡ ಮಲಗುವನು.

2 ಸಮುವೇಲ 13:5

ಆಗ ಯೋನಾದಾಬನು ಅವನಿಗೆ--ನೀನು ರೋಗಿಷ್ಟನ ಹಾಗೆ ಮಂಚದ ಮೇಲೆ ಮಲಗು; ನಿನ್ನನ್ನು ನೋಡುವದಕ್ಕೆ ನಿನ್ನ ತಂದೆ ಬರುವಾಗ ನೀನು ಅವನಿಗೆ--ನನ್ನ ಸಹೋದರಿಯಾದ ತಾಮಾರಳು ಬರುವ ಹಾಗೆ ದಯಮಾಡಬೇಕು; ನಾನು ಅವಳ ಕೈಯಿಂದ ಉಣ್ಣುವ ಹಾಗೆ ಅವಳು ನನ್ನ ಕಣ್ಣೆದುರಿನಲ್ಲಿ ಅಡಿಗೆಯನ್ನು ಮಾಡಿ ನನಗೆ ಆಹಾರ ಕೊಡಲಿ ಎಂದು ಹೇಳು ಅಂದನು.

2 ಸಮುವೇಲ 15:16

ಅರಸನು ಮನೆಗೆ ಕಾವಲಿರುವಂತೆ ಉಪಪತ್ನಿಗಳಾದ ಹತ್ತು ಮಂದಿ ಸ್ತ್ರೀಯರನ್ನು ಬಿಟ್ಟು ಅವನೂ ಅವನ ಮನೆ ಯವರೆಲ್ಲರೂ ಅವನ ಹಿಂದೆ ಹೊರಟು ಹೋದರು.

2 ಸಮುವೇಲ 20:3

ದಾವೀದನು ಯೆರೂಸಲೇಮಿನಲ್ಲಿರುವ ತನ್ನ ಮನೆಗೆ ಬಂದನು; ಅರಸನು ಮನೆಯಲ್ಲಿ ಕಾಯಲಿಟ್ಟ ಉಪಪತ್ನಿಗಳಾದ ಹತ್ತುಮಂದಿ ಸ್ತ್ರೀಯರನ್ನು ತೆಗೆದು ಕೊಂಡು ಅವರನ್ನು ಒಂದು ಕಾವಲಿನಲ್ಲಿ ಇರಿಸಿ ಸಾಕುತ್ತಿದ್ದನು. ಆದರೆ ಅವರನ್ನು ತಿರುಗಿ ಕೂಡಲಿಲ್ಲ. ಹಾಗೆಯೇ ಅವರು ಸಾಯುವ ದಿವಸದ ವರೆಗೂ ಕಾವಲಲ್ಲಿ ಇರಿಸಲ್ಪಟ್ಟು ವಿಧವೆಯರ ಹಾಗೆಯೇ ಬದುಕಿದರು.

1 ಅರಸುಗಳು 2:17

ಆಕೆಯು ಅವನಿಗೆ--ಹೇಳು ಅಂದಳು. ಆಗ ಅವನು--ನೀನು ದಯಮಾಡಿ ಅರಸನಾದ ಸೊಲೊಮೋನನು ಶೂನೇ ಮ್ಯಳಾದ ಅಬೀಷಗೈಳನ್ನು ನನಗೆ ಹೆಂಡತಿಯಾಗಿ ಕೊಡಲು ಅವನನ್ನು ಕೇಳು;

1 ಅರಸುಗಳು 2:22

ಅರಸನಾದ ಸೊಲೊಮೋನನು ತನ್ನ ತಾಯಿಗೆ ಪ್ರತ್ಯುತ್ತರವಾಗಿಅದೋನೀಯನಿಗೋಸ್ಕರ ಶೂನೇಮ್ಯಳಾದ ಅಬೀಷ ಗೈಳನ್ನು ನೀನು ಕೇಳುವದೇನು? ಅವನಿಗೋಸ್ಕರ ರಾಜ್ಯ ವನ್ನು ಕೇಳು, ಅವನು ನನ್ನ ಅಣ್ಣ. ಅವನಿಗೋಸ್ಕರವೂ ಯಾಜಕನಾದ ಎಬ್ಯಾತಾರನಿಗೋಸ್ಕರವೂ ಚೆರೂ ಯಳ ಮಗನಾದ ಯೋವಾಬನಿಗೋಸ್ಕರವೂ ಕೇಳು ಅಂದನು.

1 ಅರಸುಗಳು 11:25

ಹದದನು ಮಾಡಿದ ಕೇಡು ಹೊರತಾಗಿ ಇವನು ಸೊಲೊ ಮೋನನ ದಿವಸಗಳಲ್ಲೆಲ್ಲಾ ಇಸ್ರಾಯೇಲ್ಯರಿಗೆ ಶತ್ರು ವಾಗಿದ್ದನು. ಅವನು ಇಸ್ರಾಯೇಲ್ಯರನ್ನು ಹಗೆ ಮಾಡಿ ಅರಾಮ್‌ ದೇಶವನ್ನು ಆಳುತ್ತಾ ಇದ್ದನು.

ಜೆಕರ್ಯ 8:13

ಆಗುವದೇನಂದರೆ, ಓ ಯೆಹೂದದ ಮನೆತನದವರೇ, ಇಸ್ರಾಯೇಲಿನ ಮನೆತನದವರೇ, ನೀವು ಜನಾಂಗಗಳಲ್ಲಿ ಶಾಪವಾಗಿದ್ದ ಪ್ರಕಾರ ನಾನು ನಿಮ್ಮನ್ನು ರಕ್ಷಿಸುವೆನು ಮತ್ತು ನೀವು ಆಶೀರ್ವಾದವಾಗಿರುವಿರಿ; ಭಯಪಡಬೇಡಿರಿ; ನಿಮ್ಮ ಕೈಗಳು ಬಲವಾಗಿರಲಿ.

1 ಕೊರಿಂಥದವರಿಗೆ 5:1

ನಿಮ್ಮಲ್ಲಿ ಜಾರತ್ವವಿದೆಯೆಂದು ಸಾಧಾರಣ ವಾಗಿ ಹೇಳಲ್ಪಟ್ಟಿದೆ; ಒಬ್ಬನು ತನ್ನ ಅಪ್ಪನ ಹೆಂಡತಿಯನ್ನು ಇಟ್ಟುಕೊಂಡಿದ್ದಾನಂತೆ; ಅಂಥ ಜಾರತ್ವವು ಅನ್ಯಜನರಲ್ಲಿಯೂ ಇಲ್ಲ.

Interlinear

Choose Theme