ಶಿಮ್ಮಿ ಅವನನ್ನು ದೂಷಿಸುತ್ತಾ--ರಕ್ತದ ಮನುಷ್ಯನೇ, ಬೆಲಿಯಾಳನ ಮನುಷ್ಯನೇ, ಹೊರಟು ಬಾ, ಹೊರಟು ಬಾ.
Cross references
ಬೆಲಿಯಾಳನ ಮಕ್ಕಳು ನಿನ್ನ ಮಧ್ಯದಿಂದ ಹೊರಟು ಹೋಗಿ ನೀವು ತಿಳಿಯದ ಬೇರೆ ದೇವರುಗಳನ್ನು--ನಾವು ಸೇವಿಸೋಣ ಎಂದು ಹೇಳಿ ತಮ್ಮ ಪಟ್ಟಣದ ನಿವಾಸಿಗಳನ್ನು ಹಿಂದೆ ಎಳೆದಿದ್ದಾರೆಂದು ಕೇಳಿದರೆ
ಆದರೆ ಏಲಿಯ ಕುಮಾರರು ಕರ್ತನನ್ನು ಅರಿಯದೆ ಬೆಲಿಯಾಳನ ಮಕ್ಕಳಾಗಿದ್ದರು.
ಈಗ ನೀನು ಅದಕ್ಕೆ ಮಾಡಬೇಕಾ ದದ್ದೇನೆಂದು ತಿಳುಕೊಂಡು ನೋಡು. ಯಾಕಂದರೆ ಕೇಡು ನಮ್ಮ ಯಜಮಾನನ ಮೇಲೆಯೂ ಅವನ ಮನೆಯೆಲ್ಲಾದರ ಮೇಲೆಯೂ ನಿಶ್ಚಯಿಸಲ್ಪಟ್ಟಿದೆ; ಏನಂದರೆ, ಅವನು ಬೆಲಿಯಾಳನ ಮಗನಾಗಿರುವದ ರಿಂದ ಅವನ ಸಂಗಡ ಯಾವನೂ ಮಾತನಾಡ ಕೂಡದು ಅಂದನು.
ನೇರನ ಮಗನಾದ ಅಬ್ನೇರನನ್ನು ಕೊಂದುಹಾಕಿದ್ದು ಅರಸನಿಂದ ಆದ ದ್ದಲ್ಲವೆಂದು ಎಲ್ಲಾ ಜನರೂ ಸಮಸ್ತ ಇಸ್ರಾಯೇಲ್ಯರೂ ಆ ದಿನದಲ್ಲಿ ತಿಳಿದುಕೊಂಡರು.
ಆ ಪತ್ರದಲ್ಲಿ--ಊರೀಯನನ್ನು ಘೋರವಾದ ಯುದ್ಧದ ಮುಂದುಗಡೆ ಸರಿಯಾಗಿ ನಿಲ್ಲಿಸಿ ಅವನು ಹೊಡೆಯಲ್ಪಟ್ಟು ಸಾಯುವ ಹಾಗೆ ಅವನನ್ನು ಬಿಟ್ಟು ನೀವು ಹಿಂದಕ್ಕೆ ಸರಿಯಿರಿ ಎಂದು ಬರೆದಿದ್ದನು.
ಇದು ಸಾಲದೆ ಇದ್ದರೆ ಇಂಥಿಂಥವುಗಳನ್ನು ನಿನಗೆ ಇನ್ನೂ ಕೊಡುತ್ತಿದ್ದೆನು. ನೀನು ಕರ್ತನ ದೃಷ್ಟಿಗೆ ಈ ಕೆಟ್ಟಕಾರ್ಯವನ್ನು ಮಾಡುವ ಹಾಗೆ ಆತನ ಆಜ್ಞೆ ಯನ್ನು ತಿರಸ್ಕರಿಸಿದ್ದೇನು? ನೀನು ಹಿತ್ತಿಯನಾದ ಊರೀಯನನ್ನು ಕತ್ತಿಯಿಂದ ಕೊಲ್ಲಿಸಿ ಅವನ ಹೆಂಡತಿ ಯನ್ನು ನಿನಗೆ ಹೆಂಡತಿಯಾಗಿ ತೆಗೆದುಕೊಂಡಿ; ಇದಲ್ಲದೆ ಅವನನ್ನು ಅಮ್ಮೋನನ ಮಕ್ಕಳ ಕತ್ತಿಯಿಂದ ಕೊಂದು ಹಾಕಿಸಿದಿ.
ನೀನು ದೇವರನ್ನೂ ಅರಸನನ್ನೂ ದೂಷಿ ಸಿದಿ ಎಂದು ಅವನಿಗೆ ವಿರೋಧವಾಗಿ ಸಾಕ್ಷಿ ಹೇಳಲು ಅವನ ಮುಂದೆ ಬೆಲಿಯಾಳನ ಮಕ್ಕಳಾದ ಇಬ್ಬರು ಮನುಷ್ಯರನ್ನು ನಿಲ್ಲಿಸಿರಿ; ತರುವಾಯ ಅವನನ್ನು ಹೊರಗೆ ತಕ್ಕೊಂಡು ಹೋಗಿ ಅವನು ಸಾಯುವ ಹಾಗೆ ಕಲ್ಲೆಸೆಯಿರಿ ಎಂದು ಬರೆದಿತ್ತು.
ಆಗ ಬೆಲಿಯಾಳನ ಮಕ್ಕಳಾದ ಇಬ್ಬರು ಮನುಷ್ಯರು ಬಂದು ಅವನಿಗೆದುರಾಗಿ ಕುಳಿತು ಕೊಂಡರು; ಈ ಬೆಲಿಯಾಳನ ಮನುಷ್ಯರು ಜನರ ಸಮ್ಮುಖದಲ್ಲಿ ನಾಬೋತನಿಗೆ ವಿರೋಧವಾಗಿ--ಈ ನಾಬೋತನು ದೇವರನ್ನೂ ಅರಸನನ್ನೂ ದೂಷಿಸಿದ ನೆಂದು ಸಾಕ್ಷಿ ಹೇಳಿದರು. ಆಗ ಅವನನ್ನು ಪಟ್ಟಣದ ಹೊರಗೆ ತಕ್ಕೊಂಡು ಹೋಗಿ ಅವನು ಸಾಯುವ ಹಾಗೆ ಅವರು ಅವನಿಗೆ ಕಲ್ಲೆಸೆದರು. ಅವನು ಸತ್ತನು.
ದೇವರಲ್ಲಿ ಇವನಿಗೆ ಯಾವ ಸಹಾಯವೂ ಇಲ್ಲವೆಂದು ನನ್ನ ವಿಷಯದಲ್ಲಿ ಅನೇಕರು ಹೇಳುತ್ತಾರೆ. ಸೆಲಾ.
ಸುಳ್ಳಾಡುವವರನ್ನು ನೀನು ನಾಶಮಾಡುತ್ತೀ; ಕೊಲೆಗಾರರನ್ನು ಮತ್ತು ಮೋಸಗಾರರನ್ನು ಕರ್ತನು ಅಸಹ್ಯಿಸುತ್ತಾನೆ.
ಓ ದೇವರೇ, ನನ್ನ ರಕ್ಷಣೆಯ ದೇವರೇ, ರಕ್ತಾಪರಾಧ ದಿಂದ ನೀನು ನನ್ನನ್ನು ಬಿಡಿಸು; ಆಗ ನನ್ನ ನಾಲಿಗೆಯು ನಿನ್ನ ನೀತಿಯನ್ನು ಗಟ್ಟಿಯಾಗಿ ಹಾಡುವದು.
ನನ್ನ ಹೃದಯವು ನನ್ನ ಅಂತ ರಂಗದಲ್ಲಿ ನೊಂದುಕೊಳ್ಳುತ್ತದೆ; ಮರಣದ ಬೆದರಿಕೆ ಗಳು ನನ್ನ ಮೇಲೆ ಬಿದ್ದವೆ.