Home Bibles 2 ಸಮುವೇಲ 17:29 · ಕನ್ನಡ ಬೈಬಲ್
2 ಸಮುವೇಲ 17:29 · ಕನ್ನಡ ಬೈಬಲ್

ಅವರೆಯನ್ನೂ ಹೆಸರನ್ನೂ ಹುರಿದ ಕಡಲೆಯನ್ನೂ ಜೇನು ತುಪ್ಪವನ್ನೂ ಬೆಣ್ಣೆಯನ್ನೂ ಕುರಿಗಳನ್ನೂ ಹಸುವಿನ ಗಿಣ್ಣದ ಗಡ್ಡೆಗಳನ್ನೂ ದಾವೀದನಿಗೂ ಅವನ ಸಂಗಡ ಲಿದ್ದ ಜನರಿಗೂ ತಿನ್ನುವದಕ್ಕೆ ತಂದರು. ಯಾಕಂದರೆ ಅರಣ್ಯದಲ್ಲಿ ಜನರು ಹಸಿದು ದಣಿದು ದಾಹವಾಗಿರು ವರೆಂದು ಅಂದುಕೊಂಡರು.

Cross references

ನ್ಯಾಯಾಧಿಪತಿಗಳು 8:4

ಗಿದ್ಯೋನನು ಯೊರ್ದನಿಗೆ ಬಂದು ಅದನ್ನು ದಾಟಿ ಅವನೂ ಅವನ ಸಂಗಡ ಇದ್ದ ಮುನ್ನೂರು ಜನರೂ ದಣಿದವರಾಗಿಯೂ ಹಿಂದಟ್ಟುವವರಾಗಿಯೂ ಇದ್ದರು.

1 ಸಮುವೇಲ 17:18

ಇದಲ್ಲದೆ ಈ ಹತ್ತು ಗಿಣ್ಣಿನ ಗಡ್ಡೆಗಳನ್ನು ಅವರ ಸಾವಿರಕ್ಕೆ ಪ್ರಧಾನನಾದವನಿಗೆ ಕೊಟ್ಟು ನಿನ್ನ ಸಹೋದರರ ಕ್ಷೇಮಸಮಾಚಾರವನ್ನು ವಿಚಾರಿಸಿ ಅವರ ಗುರುತನ್ನು ತಕ್ಕೊಂಡು ಬಾ ಅಂದನು.

2 ಸಮುವೇಲ 16:2

ಅರಸನು ಚೀಬನಿಗೆ--ಇವು ಯಾಕೆ ಅಂದನು. ಅದಕ್ಕೆ ಚೀಬನು--ಕತ್ತೆಗಳು ಅರಸನ ಮನೆಯವರು ಹತ್ತುವದಕ್ಕೂ ಆ ರೊಟ್ಟಿಗಳೂ ವಸಂತಕಾಲದ ಫಲಗಳೂ ಯೌವನಸ್ಥರು ತಿನ್ನುವ ದಕ್ಕೂ ದ್ರಾಕ್ಷಾರಸವು ಅರಣ್ಯದಲ್ಲಿ ದಣಿದವರು ಕುಡಿಯುವದಕ್ಕೂ ಅಂದನು.

2 ಸಮುವೇಲ 16:14

ಅರಸನೂ ಅವನ ಸಂಗಡಲಿರುವ ಎಲ್ಲಾ ಜನರೂ ನಡೆದು ದಣಿದದ್ದರಿಂದ ಅಲ್ಲಿ ವಿಶ್ರಮಿಸಿಕೊಂಡರು.

2 ಸಮುವೇಲ 17:2

ಅವನು ದಣಿದವನೂ ಧೈರ್ಯಗುಂದಿದವನೂ ಆಗಿ ರುವಾಗಲೇ ಫಕ್ಕನೆ ಅವನ ಮೇಲೆ ಬಿದ್ದು ಅವನನ್ನು ಬೆದರಿಸುವೆನು, ಅವನ ಜನರೆಲ್ಲರೂ ಓಡಿಹೋಗು ವರು.

ಕೀರ್ತನೆಗಳು 34:8

ಕರ್ತನು ಒಳ್ಳೆಯವನೆಂದು ರುಚಿಸಿ ನೋಡಿರಿ; ಆತನಲ್ಲಿ ಆಶ್ರ ಯಿಸಿಕೊಳ್ಳುವ ಮನುಷ್ಯನು ಧನ್ಯನು.

ಕೀರ್ತನೆಗಳು 84:11

ದೇವರಾದ ಕರ್ತನು ಸೂರ್ಯ ನೂ ಗುರಾಣಿಯೂ ಆಗಿದ್ದಾನೆ; ಕರ್ತನು ಕೃಪೆಯನ್ನೂ ಮಹಿಮೆಯನ್ನೂ ಕೊಡುತ್ತಾನೆ; ಸಂಪೂರ್ಣವಾಗಿ ನಡೆದುಕೊಳ್ಳುವವರಿಗೆ ಆತನು ಯಾವ ಒಳ್ಳೇದನ್ನು ಹಿಂದೆಗೆಯುವದಿಲ್ಲ.ಸೈನ್ಯಗಳ ಓ ಕರ್ತನೇ, ನಿನ್ನಲ್ಲಿ ಭರವಸವಿಡುವ ಮನುಷ್ಯನು ಧನ್ಯನು.

ಕೀರ್ತನೆಗಳು 107:5

ಹಸಿದು, ದಾಹಗೊಂಡು ಅವರ ಪ್ರಾಣವು ಅವರಲ್ಲಿ ಕುಗ್ಗಿಹೋಯಿತು.

ಸಭಾಪ್ರಸಂಗಿ 11:1

ನಿನ್ನ ರೊಟ್ಟಿಯನ್ನು ನೀರಿನ ಮೇಲೆ ಹಾಕು, ಬಹಳ ದಿನಗಳ ಮೇಲೆ ಅದು ನಿನಗೆ ಸಿಗುವದು.

ಯೆಶಾಯ 21:14

ತೇಮಾ ದೇಶದ ನಿವಾಸಿಗಳೇ, ಬಾಯಾರಿದವರಿಗೆ ನೀರನ್ನು ತರುತ್ತಾರೆ. ಓಡಿ ಹೋಗುವವರನ್ನು ತಮ್ಮ ರೊಟ್ಟಿಯಿಂದ ನಿವಾರಿಸು ತ್ತಾರೆ.

ಯೆಶಾಯ 58:7

ನಿನ್ನ ರೊಟ್ಟಿಯನ್ನು ಹಸಿದವರಿಗೆ ಹಂಚುವದೂ ಅಲೆಯು ತ್ತಿರುವ ಬಡವರನ್ನು ನಿನ್ನ ಮನೆಗೆ ಬರಮಾಡಿ ಕೊಳ್ಳುವದೂ ಬೆತ್ತಲೆಯವರನ್ನು ಕಂಡಾಗೆಲ್ಲ ಅವರಿಗೆ ಹೊದಿಸುವದೂ ನಿನ್ನ ಸ್ವಂತ ಶರೀರದಂತಿರುವವ ನಿಗೆ ನಿನ್ನನ್ನು ಮರೆಮಾಡಿಕೊಳ್ಳದಿರುವದೂ ಇದೇ ಅಲ್ಲವೋ?

ಲೂಕ 8:3

ಹೆರೋದನ ಮನೆವಾರ್ತೆಯವನಾದ ಕೂಜನ ಹೆಂಡತಿ ಯೋಹಾನಳೂ ಸುಸನ್ನಳೂ ಮತ್ತು ಬೇರೆ ಅನೇಕರು ತಮ್ಮ ಸೊತ್ತಿನಿಂದ ಆತನನ್ನು ಉಪಚರಿ ಸಿದವರು ಆತನೊಂದಿಗೆ ಇದ್ದರು.

ರೋಮಾಪುರದವರಿಗೆ 12:13

ಪರಿಶುದ್ಧರ ಕೊರತೆಯ ಪ್ರಕಾರ ಹಂಚಿರಿ; ಅತಿಥಿಸತ್ಕಾರವನ್ನು ಮಾಡಿರಿ.

ಫಿಲಿಪ್ಪಿಯವರಿಗೆ 4:15

ಇದಲ್ಲದೆ ಫಿಲಿಪ್ಪಿ ಯವರೇ, ಸುವಾರ್ತೆಯ ಪ್ರಾರಂಭದಲ್ಲಿ ನಾನು ಮಕೆದೋನ್ಯದಿಂದ ಹೊರಟಾಗ ಕೊಡುವದರ ಮತ್ತು ತೆಗೆದುಕೊಳ್ಳುವದರ ವಿಷಯದಲ್ಲಿ ನಿಮ್ಮ ಹೊರತು ಬೇರೆ ಸಭೆಯು ನನ್ನೊಂದಿಗೆ ಭಾಗವಹಿಸಲಿಲ್ಲವೆಂದು ನೀವು ಸಹ ಬಲ್ಲಿರಿ.

Interlinear

Choose Theme