Home Bibles 2 ಸಮುವೇಲ 17:3 · ಕನ್ನಡ ಬೈಬಲ್
2 ಸಮುವೇಲ 17:3 · ಕನ್ನಡ ಬೈಬಲ್

ಆಗ ನಾನು ಅರಸನನ್ನು ಮಾತ್ರ ಕೊಂದು ಜನರೆಲ್ಲರನ್ನು ತಿರಿಗಿ ನಿನ್ನ ಬಳಿಗೆ ತಕ್ಕೊಂಡು ಬರು ವೆನು. ನೀನು ಹುಡುಕುವವನು ಸಿಕ್ಕಿದರೆ ಜನರೆಲ್ಲರೂ ಹಿಂತಿರುಗಿದ ಹಾಗೆ ಆಗುವದು; ಜನರೆಲ್ಲರೂ ಸಮಾ ಧಾನವಾಗಿರುವರು ಅಂದನು.

Cross references

2 ಸಮುವೇಲ 3:21

ಆಗ ಅಬ್ನೇರನು ದಾವೀದನಿಗೆಎಲ್ಲಾ ಇಸ್ರಾಯೇಲ್ಯರು ನಿನ್ನ ಸಂಗಡ ಒಡಂಬಡಿಕೆ ಯನ್ನು ಮಾಡುವ ಹಾಗೆಯೂ ನಿನ್ನ ಪ್ರಾಣವು ಇಚ್ಚಿ ಸಿದ ಹಾಗೆ ಎಲ್ಲರ ಮೇಲೆ ಆಳುವ ಹಾಗೆಯೂ ನಾನು ಎದ್ದು ಹೋಗಿ ಎಲ್ಲಾ ಇಸ್ರಾಯೇಲ್ಯರನ್ನು ಅರಸನಾದ ನನ್ನ ಒಡೆಯನ ಬಳಿಗೆ ಕೂಡಿಸಿಕೊಂಡು ಬರುವೆನು ಅಂದನು. ದಾವೀದನು ಅಬ್ನೇರನಿಗೆ ಅಪ್ಪಣೆ ಕೊಟ್ಟದ್ದರಿಂದ ಅವನು ಸಮಾಧಾನವಾಗಿ ಹೋದನು.

ಯೆಶಾಯ 48:22

ದುಷ್ಟರಿಗೆ ಸಮಾಧಾನವೇ ಇಲ್ಲ ಎಂದು ಕರ್ತನು ನುಡಿಯುತ್ತಾನೆ.

ಯೆಶಾಯ 57:21

ದುಷ್ಟರಿಗೆ ಸಮಾಧಾನವೇ ಇಲ್ಲವೆಂದು ನನ್ನ ದೇವರು ಹೇಳುತ್ತಾನೆ.

1 ತೆಸಲೋನಿಕದವರಿಗೆ 5:3

ಆದರೆ--ಸಮಾಧಾನವಾಗಿಯೂ ಸುರಕ್ಷಿತವಾಗಿಯೂ ಇರುತ್ತೇ ವೆಂದು ಜನರು ಹೇಳುತ್ತಿರುವಾಗಲೇ ಅವರ ಮೇಲೆ ನಾಶನವು ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವದು; ಅವರು ಹೇಗೂ ತಪ್ಪಿಸಿಕೊಳ್ಳಲಾರರು.

Interlinear

Choose Theme