Home Bibles 2 ಸಮುವೇಲ 18:7 · ಕನ್ನಡ ಬೈಬಲ್
2 ಸಮುವೇಲ 18:7 · ಕನ್ನಡ ಬೈಬಲ್

ಯುದ್ಧವು ಎಫ್ರಾ ಯಾಮ್‌ ಅಡವಿಯಲ್ಲಿತ್ತು. ಅಲ್ಲಿ ಇಸ್ರಾಯೇಲ್ಯರು ದಾವೀದನ ಸೇವಕರ ಮುಂದೆ ಸಂಹಾರವಾದರು.

Cross references

2 ಸಮುವೇಲ 2:17

ಇದಲ್ಲದೆ ಆ ದಿನದಲ್ಲಿ ಅಘೋರವಾದ ಯುದ್ಧವಾಯಿತು. ಅಬ್ನೇರನೂ ಇಸ್ರಾಯೇಲ್‌ ಜನ ರೂ ದಾವೀದನ ಸೇವಕರಿಂದ ಹೊಡೆಯಲ್ಪಟ್ಟರು.

2 ಸಮುವೇಲ 2:26

ಆಗ ಅಬ್ನೇರನು ಯೋವಾಬನಿಗೆ--ಕತ್ತಿಯು ಯಾವಾಗಲೂ ನುಂಗಿಬಿಡುವದೋ? ಅಂತ್ಯ ದಲ್ಲಿ ಅದು ಕಹಿಯಾಗಿರುವದೆಂದು ನಿನಗೆ ಗೊತ್ತಾಗು ವದಿಲ್ಲವೋ? ತಮ್ಮ ಸಹೋದರರನ್ನು ಹಿಂಬಾಲಿಸು ವದನ್ನು ಬಿಟ್ಟು ಹಿಂದಕ್ಕೆ ತಿರುಗುವ ಹಾಗೆ ಜನರಿಗೆ ಎಷ್ಟು ಕಾಲ ಹೇಳದೆ ಇರುವಿ ಎಂದು ಕೂಗಿ ಹೇಳಿದನು.

2 ಸಮುವೇಲ 2:31

ಆದರೆ ದಾವೀದನ ಸೇವಕರು ಬೆನ್ಯಾ ವಿಾನ್ಯರಲ್ಲಿಯೂ ಅಬ್ನೇರನ ಜನರಲ್ಲಿಯೂ ಮುನ್ನೂರ ಅರವತ್ತು ಜನರನ್ನು ಹೊಡೆದದ್ದರಿಂದ ಅವರು ಸತ್ತರು.ಅವರು ಅಸಾಹೇಲನನ್ನು ಎತ್ತಿ ಕೊಂಡು ಬೇತ್ಲೆಹೇಮಿನಲ್ಲಿರುವ ಅವನ ತಂದೆಯ ಸಮಾಧಿಯಲ್ಲಿ ಹೂಣಿಟ್ಟರು. ಯೋವಾಬನೂ ಅವನ ಜನರೂ ರಾತ್ರಿಯೆಲ್ಲಾ ನಡೆದು ಉದಯವಾದಾಗ ಹೆಬ್ರೋನಿಗೆ ಬಂದರು.

2 ಸಮುವೇಲ 15:6

ಈ ಪ್ರಕಾರ ಅಬ್ಷಾಲೋಮನು ನ್ಯಾಯಕ್ಕೋಸ್ಕರ ಅರಸನ ಬಳಿಗೆ ಬರುವ ಇಸ್ರಾಯೇಲ್ಯರೆಲ್ಲರಿಗೆ ಮಾಡಿ ದನು. ಈ ರೀತಿಯಲ್ಲಿ ಅಬ್ಷಾಲೋಮನು ಇಸ್ರಾ ಯೇಲ್ಯರಿಗೆ ಮಾಡಿದನು. ಹೀಗೆ ಅಬ್ಷಾಲೋಮನು ಇಸ್ರಾಯೇಲ್ಯರ ಹೃದಯಗಳನ್ನು ಕದ್ದುಕೊಂಡನು.

2 ಸಮುವೇಲ 19:41

ಇಗೋ, ಇಸ್ರಾಯೇಲ್‌ ಜನರೆಲ್ಲರೂ ಅರಸನ ಬಳಿಗೆ ಬಂದು ಅರಸನಿಗೆ--ನಮ್ಮ ಸಹೋದರರಾದ ಯೆಹೂದ ಜನರು ಕಳ್ಳತನವಾಗಿ ನಿನ್ನನ್ನು ಕರ ತಂದದ್ದೇನು? ಅರಸನನ್ನೂ ಅವನ ಮನೆಯವರನ್ನೂ ಅವನ ಸಂಗಡ ಇರುವ ದಾವೀದನ ಎಲ್ಲಾ ಜನರನ್ನೂ ಯೊರ್ದನನ್ನು ದಾಟಿಸಿದ್ದೇನು ಅಂದರು.

2 ದಿನವೃತ್ತಾಂತ 13:16

ಇಸ್ರಾಯೇಲಿನ ಮಕ್ಕಳು ಯೆಹೂದದವರ ಎದುರಿ ನಿಂದ ಓಡಿಹೋದರು. ದೇವರು ಅವರನ್ನು ಅವರ ಕೈಯಲ್ಲಿ ಒಪ್ಪಿಸಿದನು.

2 ದಿನವೃತ್ತಾಂತ 28:6

ಅವರು ತಮ್ಮ ಪಿತೃಗಳ ಕರ್ತನಾದ ದೇವರನ್ನು ಬಿಟ್ಟದ್ದರಿಂದ ರೆಮಲ್ಯನ ಮಗ ನಾದ ಪೆಕಹನು ಒಂದೇ ದಿವಸದೊಳಗೆ ಯೆಹೂ ದದವರಲ್ಲಿ ಲಕ್ಷದ ಇಪ್ಪತ್ತು ಸಾವಿರ ಮಂದಿಯನ್ನು ಕೊಂದುಹಾಕಿದನು; ಇವರೆಲ್ಲರು ಪರಾಕ್ರಮಶಾಲಿ ಗಳಾಗಿದ್ದರು.

ಸಾಮೇತಿಗಳು 11:21

ಕೈಗೆ ಕೈ ಕೊಟ್ಟರೂ ದುಷ್ಟನು ಶಿಕ್ಷಿಸಲ್ಪಡದೆ ಇರುವದಿಲ್ಲ; ನೀತಿವಂತರ ವಂಶವು ತಪ್ಪಿಸಿಕೊಳ್ಳುವದು.

ಸಾಮೇತಿಗಳು 24:21

ನನ್ನ ಮಗನೇ, ಕರ್ತನಿಗೂ ಅರಸನಿಗೂ ಭಯಪಡು; ಭಯಪಡದವರ ಗೊಡವೆಗೆ ಹೋಗ ಬೇಡ.

Interlinear

Choose Theme