Home Bibles 2 ಸಮುವೇಲ 19:11 · ಕನ್ನಡ ಬೈಬಲ್
2 ಸಮುವೇಲ 19:11 · ಕನ್ನಡ ಬೈಬಲ್

ಅರಸನಾದ ದಾವೀದನು ಯಾಜಕರಾದ ಚಾದೋಕನ ಬಳಿಗೂ ಎಬ್ಯಾತಾರನ ಬಳಿಗೂ ಸೇವಕ ರನ್ನು ಕಳುಹಿಸಿ--ನೀವು ಯೆಹೂದದ ಹಿರಿಯರಿಗೆಎಲ್ಲಾ ಇಸ್ರಾಯೇಲಿನ ಮಾತು ಅರಸನಿಗೂ ಅವನ ಮನೆಗೂ ಬಂದಿರುವಾಗ ಅರಸನನ್ನು ಅವನ ಮನೆಗೆ ತಿರಿಗಿ ಕರಕೊಂಡು ಬರುವಂತೆ ನೀವು ಹಿಂಜರಿದ ದ್ದೇನು? ನೀವು ನನ್ನ ಸಹೋದರರೂ ನನ್ನ ಎಲುಬೂ ನನ್ನ ಮಾಂಸವೂ ಆಗಿದ್ದೀರಿ.

Cross references

2 ಸಮುವೇಲ 15:29

ಹಾಗೆಯೇ ಚಾದೋಕನೂ ಎಬ್ಯಾತಾರನೂ ದೇವರ ಮಂಜೂಷವನ್ನು ತಿರಿಗಿ ಯೆರೂಸಲೇಮಿಗೆ ತಕ್ಕೊಂಡು ಹೋಗಿ ಅಲ್ಲಿದ್ದರು.

2 ಸಮುವೇಲ 15:35

ಅಲ್ಲಿ ಯಾಜಕ ರಾದ ಚಾದೋಕನೂ ಎಬ್ಯಾತಾರನೂ ನಿನ್ನ ಬಳಿಯಲ್ಲಿ ಲ್ಲವೋ? ಆದದರಿಂದ ನೀನು ಅರಸನ ಮನೆಯಲ್ಲಿ ಯಾವ ವರ್ತಮಾನವನ್ನು ಕೇಳುತ್ತೀಯೋ ಅದನ್ನು ಯಾಜಕರಾದ ಚಾದೋಕನಿಗೂ ಎಬ್ಯಾತಾರನಿಗೂ ತಿಳಿಸು.

2 ಸಮುವೇಲ 18:14

ಆಗ ಯೋವಾಬನು--ನಾನು ಹೀಗೆ ನಿನ್ನ ಮುಂದೆ ಆಲಸ್ಯಮಾಡೆನು ಎಂದು ಹೇಳಿ ಮೂರು ಈಟಿಗಳನ್ನು ತನ್ನ ಕೈಯಲ್ಲಿ ತಕ್ಕೊಂಡು ಅಬ್ಷಾಲೋಮನು ಇನ್ನೂ ಏಲಾಮರದ ಮಧ್ಯದಲ್ಲಿ ಜೀವದಿಂದಿರುವಾಗ ಅವು ಗಳನ್ನು ಅವನ ಎದೆಗೆ ತಿವಿದನು.

2 ಸಮುವೇಲ 18:15

ಯೋವಾಬನ ಆಯುಧ ಹಿಡಿಯುವ ಹತ್ತು ಮಂದಿ ಯೌವನಸ್ಥರು ಸುತ್ತಿಕೊಂಡು ಅಬ್ಷಾಲೋಮನನ್ನು ಕೊಂದುಹಾಕಿದರು.

1 ಅರಸುಗಳು 2:25

ಅರಸನಾದ ಸೊಲೊಮೋನನು ಯೆಹೋಯಾದಾವನ ಮಗನಾದ ಬೆನಾಯನನ್ನು ಕಳುಹಿಸಿದನು. ಇವನು ಅವನ ಮೇಲೆ ಬಿದದ್ದರಿಂದ ಅವನು ಸತ್ತುಹೋದನು.

1 ಅರಸುಗಳು 2:35

ಆಗ ಅರಸನು ಯೆಹೋಯಾದಾವನ ಮಗನಾದ ಬೆನಾಯನನ್ನು ಯೋವಾಬನಿಗೆ ಬದಲಾಗಿ ಸೈನ್ಯದ ಮೇಲೆ ನೇಮಿಸಿದನು. ಇದಲ್ಲದೆ ಅರಸನು ಎಬ್ಯಾ ತಾರನಿಗೆ ಬದಲಾಗಿ ಯಾಜಕನಾದ ಚಾದೋಕನನ್ನು ನೇಮಿಸಿದನು.

ಮತ್ತಾಯ 5:16

ಅದರಂತೆಯೇ ಜನರು ನಿಮ್ಮ ಒಳ್ಳೇ ಕ್ರಿಯೆಗಳನ್ನು ನೋಡಿ ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಮಹಿಮೆಪಡಿಸುವ ಹಾಗೆ ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ.

2 ಕೊರಿಂಥದವರಿಗೆ 5:20

ದೇವರೇ ನಮ್ಮ ಮೂಲಕ ನಿಮ್ಮನ್ನು ಬೇಡಿ ಕೊಳ್ಳುತ್ತಾನೋ ಎಂಬಂತೆ ನಾವು ಈಗ ಕ್ರಿಸ್ತನ ರಾಯಭಾರಿಗಳಾಗಿದ್ದೇವೆ. ದೇವರೊಂದಿಗೆ ಸಮಾ ಧಾನವಾಗಿರೆಂದು ಕ್ರಿಸ್ತನಿಗೆ ಬದಲಾಗಿ ನಾವು ನಿಮ್ಮನ್ನು ಬೇಡಿಕೊಳ್ಳುತ್ತೇವೆ.ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.

2 ತೆಸಲೋನಿಕದವರಿಗೆ 3:9

ನಿಮ್ಮಿಂದ ಪೋಷಣೆ ಹೊಂದು ವದಕ್ಕೆ ನಮಗೆ ಹಕ್ಕಿಲ್ಲವೆಂದು ಹಾಗೆ ಮಾಡಲಿಲ್ಲ. ನೀವು ನಮ್ಮನ್ನು ಅನುಸರಿಸುವದಕ್ಕಾಗಿ ನಿಮಗೆ ಮಾದರಿ ಯಾಗಿರೋಣವೆಂದೇ ಮಾಡಿದೆವು;

Interlinear

Choose Theme