2 ಸಮುವೇಲ 2:28 · ಕನ್ನಡ ಬೈಬಲ್
ಹೀಗೆ ಯೋವಾಬನು ತುತೂರಿಯನ್ನು ಊದಿ ದನು. ಆಗ ಜನರೆಲ್ಲರೂ ನಿಂತರು. ಇಸ್ರಾಯೇಲನ್ನು ಹಿಂದಟ್ಟಲಿಲ್ಲ ಮತ್ತು ಯುದ್ಧಮಾಡಲಿಲ್ಲ.
Cross references
1 ಸಮುವೇಲ 13:3
ಯೋನಾತಾನನು ಗಿಬೆಯದಲ್ಲಿ ಫಿಲಿಷ್ಟಿಯರ ಠಾಣವನ್ನು ಹೊಡೆದನು; ಫಿಲಿಷ್ಟಿಯರಿಗೆ ಅದು ಕೇಳಿಬಂತು. ಆದದರಿಂದ ಸೌಲನು ದೇಶದಲ್ಲೆಲ್ಲಾ ಇಬ್ರಿಯರು ಕೇಳಲೆಂದು ತುತೂರಿಯನ್ನು ಊದಿಸಿದನು.
2 ಸಮುವೇಲ 18:16
ಯೋವಾಬನು ತುತೂರಿಯನ್ನು ಊದಿದ್ದರಿಂದ ಜನರು ಇಸ್ರಾಯೇಲ್ಯರನ್ನು ಹಿಂದಟ್ಟುವದನ್ನು ಬಿಟ್ಟು ಹಿಂತಿರುಗಿದರು.
2 ಸಮುವೇಲ 20:22
ಆ ಸ್ತ್ರೀಯು ತನ್ನ ಜ್ಞಾನದಿಂದ ಎಲ್ಲಾ ಜನರ ಬಳಿಗೆ ಹೋದಳು. ಆಗ ಅವರು ಬಿಕ್ರೀಯ ಮಗನಾದ ಶೆಬನ ತಲೆಯನ್ನು ಕಡಿದು ಯೋವಾಬನ ಬಳಿಗೆ ಹಾಕಿದರು. ಅವನು ತುತೂರಿಯನ್ನು ಊದಿದ್ದರಿಂದ ಅವರು ಪಟ್ಟಣದಿಂದ ಚದರಿ ಪ್ರತಿ ಮನುಷ್ಯನು ತನ್ನ ತನ್ನ ಡೇರೆಗೆ ಹೋದನು. ಯೋವಾಬನು ಯೆರೂಸಲೇಮಿನಲ್ಲಿರುವ ಅರಸನ ಬಳಿಗೆ ಹಿಂತಿರುಗಿ ಬಂದನು.