Home Bibles 2 ಸಮುವೇಲ 2:32 · ಕನ್ನಡ ಬೈಬಲ್
2 ಸಮುವೇಲ 2:32 · ಕನ್ನಡ ಬೈಬಲ್

ಅವರು ಅಸಾಹೇಲನನ್ನು ಎತ್ತಿ ಕೊಂಡು ಬೇತ್ಲೆಹೇಮಿನಲ್ಲಿರುವ ಅವನ ತಂದೆಯ ಸಮಾಧಿಯಲ್ಲಿ ಹೂಣಿಟ್ಟರು. ಯೋವಾಬನೂ ಅವನ ಜನರೂ ರಾತ್ರಿಯೆಲ್ಲಾ ನಡೆದು ಉದಯವಾದಾಗ ಹೆಬ್ರೋನಿಗೆ ಬಂದರು.

Cross references

1 ಸಮುವೇಲ 17:58

ಆಗ ಸೌಲನು--ಯೌವನ ಸ್ತನೇ, ನೀನು ಯಾರ ಮಗನು ಎಂದು ಅವನನ್ನು ಕೇಳಿದನು. ಅದಕ್ಕೆ ದಾವೀದನು--ನಾನು ನಿನ್ನ ಸೇವಕ ನಾಗಿರುವ ಬೇತ್ಲೆಹೇಮಿನವನಾದ ಇಷಯನ ಮಗನು ಅಂದನು.

2 ಸಮುವೇಲ 5:1

ಇದಾದ ಮೇಲೆ ಇಸ್ರಾಯೇಲ್‌ ಗೋತ್ರ ಗಳೆಲ್ಲಾ ಹೆಬ್ರೋನಿನಲ್ಲಿದ್ದ ದಾವೀದನ ಬಳಿಗೆ ಬಂದು--ಇಗೋ, ನಾವು ನಿನ್ನ ಎಲುಬೂ ನಿನ್ನ ಮಾಂಸವೂ ಆಗಿದ್ದೇವೆ.

1 ದಿನವೃತ್ತಾಂತ 2:13

ಇಷಯನು ತನ್ನ ಚೊಚ್ಚಲ ಮಗನಾದ ಎಲೀಯಾಬನನ್ನೂ ಎರಡನೆಯವನಾದ ಅಬೀನಾದಾಬನನ್ನೂ

2 ದಿನವೃತ್ತಾಂತ 16:14

ಅವನು ತನಗೋಸ್ಕರ ದಾವೀ ದನ ಪಟ್ಟಣದಲ್ಲಿ ಅಗಿಸಿದ ಅವನ ಸ್ವಂತ ಸಮಾಧಿಯಲ್ಲಿ ಅವನನ್ನು ಹೂಣಿಟ್ಟರು. ಅವರು ತೈಲಗಾರರ ವಿದ್ಯೆ ಯಿಂದ ಸಿದ್ಧಮಾಡಿದ ಸುಗಂಧಗಳಿಂದಲೂ ನಾನಾ ವಿಧವಾದ ಪದಾರ್ಥಗಳಿಂದಲೂ ತುಂಬಲ್ಪಟ್ಟ ಹಾಸಿ ಗೆಯ ಮೇಲೆ ಅವನನ್ನು ಮಲಗಿಸಿ ಅವನಿಗೋಸ್ಕರ ಬಹಳ ಹೆಚ್ಚಾಗಿ (ಧೂಪವನ್ನು) ಸುಟ್ಟರು.

2 ದಿನವೃತ್ತಾಂತ 21:1

ಆದರೆ ಯೆಹೋಷಾಫಾಟನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ದಾವೀದನ ಪಟ್ಟಣ ದಲ್ಲಿ ತನ್ನ ಪಿತೃಗಳ ಸಂಗಡ ಹೂಣಲ್ಪಟ್ಟನು. ಅವನ ಮಗನಾದ ಯೆಹೋರಾಮನು ಅವನಿಗೆ ಬದಲಾಗಿ ಆಳಿದನು.

ಸಾಮೇತಿಗಳು 22:29

ತನ್ನ ಕೆಲಸದಲ್ಲಿ ಶ್ರದ್ಧೆಯುಳ್ಳವನನ್ನು ನೀನು ನೋಡಿ ದ್ದೀಯಾ? ಅವನು ನೀಚರ ಮುಂದೆ ಅಲ್ಲ, ಅರಸರ ಮುಂದೆಯೇ ನಿಲ್ಲುವನು.

Interlinear

Choose Theme