ಸೌಲನ ಮತ್ತು ಅವನ ಮಗನಾದ ಯೋನಾತಾನನ ಎಲುಬುಗಳನ್ನು ಬೆನ್ಯಾವಿಾನನ ದೇಶದ ಚೇಲಾದಲ್ಲಿರುವ ಅವನ ತಂದೆಯಾದ ಕೀಷನ ಸಮಾಧಿಯಲ್ಲಿ ಹೂಣಿಟ್ಟರು. ಅವರು ಅರಸನು ಆಜ್ಞಾ ಪಿಸಿದ್ದನ್ನೆಲ್ಲಾ ತೀರಿಸಿದ ತರುವಾಯ ದೇಶಕ್ಕೋಸ್ಕರ ದೇವರಿಗೆ ವಿಜ್ಞಾಪನೆ ಮಾಡಿದರು.
Cross references
ಅವನು ಅವರಿಗೆ--ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಪ್ರತಿಯೊಬ್ಬನು ತನ್ನ ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಂಡು ಪಾಳೆಯದಲ್ಲೆಲ್ಲಾ ಒಳಗಿನಿಂದ ಹೊರಕ್ಕೆ ದ್ವಾರದಿಂದ ದ್ವಾರಕ್ಕೆ ಹೋಗಿ ತನ್ನ ಸಹೋದರನನ್ನೂ ತನ್ನ ಜೊತೆಗಾರನನ್ನೂ ತನ್ನ ನೆರೆಯವನನ್ನೂ ಕೊಲ್ಲಲಿ ಎಂದು ಹೇಳಿದನು.
ಇಸ್ರಾಯೇಲಿನವನಾದ ಆ ಮನುಷ್ಯನ ಹಿಂದೆ ಡೇರೆಯೊಳಗೆ ಪ್ರವೇಶಿಸಿ ಇಸ್ರಾಯೇಲಿನವನನ್ನೂ ಆ ಸ್ತ್ರೀಯನ್ನೂ ಇಬ್ಬರ ಹೊಟ್ಟೆಯನ್ನು ತಿವಿದನು; ಹೀಗೆ ಇಸ್ರಾಯೇಲ್ ಮಕ್ಕಳಿಗೆ ಉಂಟಾಗಿದ್ದ ವ್ಯಾಧಿಯು ನಿಂತುಹೋಯಿತು.
ಅವನು ತನ್ನ ದೇವರಿಗೋಸ್ಕರ ಆಸಕ್ತನಾಗಿದ್ದು ಇಸ್ರಾಯೇಲಿನ ಮಕ್ಕಳಿಗೋಸ್ಕರ ಪಾಪ ಪ್ರಾಯಶ್ಚಿತ್ತ ಮಾಡಿದ್ದರಿಂದ ಅವನಿಗೂ ಅವನ ಹಿಂದೆ ಬರುವ ಅವನ ಸಂತತಿಗೂ ನಿತ್ಯ ಯಾಜಕತ್ವದ ಒಡಂಬಡಿಕೆಯಾಗಿರುವದು ಎಂದು ಹೇಳಿದನು.
ಅವರ ಮೇಲೆ ಕಲ್ಲು ಕುಪ್ಪೆ ಕೂಡಿಸಿದರು. ಅದು ಈ ದಿನದ ವರೆಗೂ ಇದೆ. ಆಗ ಕರ್ತನು ತನ್ನ ಕೋಪದ ಉರಿಯನ್ನು ಬಿಟ್ಟು ತಿರುಗಿದನು; ಆದದರಿಂದ ಆ ಸ್ಥಳವು ಈ ವರೆಗೂ ಆಕೋರಿನ ತಗ್ಗೆಂದು ಕರೆಯಲ್ಪಡುವದು.
ಚೇಲ, ಎಲೆಫ್, ಯೆಬೂಸಿಯರು ಇದ್ದಂಥ ಯೆರೂಸಲೇಮು ಗಿಬೆಯತ್, ಕಿರ್ಯತ್ ಎಂಬ ಹದಿನಾಲ್ಕು ಪಟ್ಟಣಗಳು ಅವುಗಳ ಗ್ರಾಮಗಳು. ಇವೇ ಬೆನ್ಯಾವಿಾನನ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಇರುವ ಬಾಧ್ಯತೆಗಳಾಗಿದ್ದವು.
ನೀನು ಈ ಹೊತ್ತು ನನ್ನನ್ನು ಬಿಟ್ಟು ಹೋದಾಗ ಬೆನ್ಯಾವಿಾನನ ಮೇರೆಯಾದ ಚೆಲ್ಚಹಿ ನಲ್ಲಿರುವ ರಾಹೇಲಳ ಸಮಾಧಿಯ ಬಳಿಯಲ್ಲಿ ಇಬ್ಬರು ಮನುಷ್ಯರನ್ನು ಕಂಡುಕೊಳ್ಳುವಿ. ಅವರು ನಿನಗೆ--ನೀನು ಹುಡುಕಲು ಹೋದ ಕತ್ತೆಗಳು ಸಿಕ್ಕಿದವು; ಇದಲ್ಲದೆ ಇಗೋ, ನಿನ್ನ ತಂದೆಯು ಕತ್ತೆಗಳ ಚಿಂತೆ ಬಿಟ್ಟು ನಿನಗೋಸ್ಕರ ಚಿಂತೆಪಟ್ಟು--ನನ್ನ ಮಗನಿಗೋ ಸ್ಕರ ಏನು ಮಾಡಲಿ? ಅನ್ನುತ್ತಾನೆಂದು ಹೇಳುವರು.
ಅವರು ಅಬ್ನೇರನನ್ನು ಹೆಬ್ರೋನಿನಲ್ಲಿ ಹೂಣಿಟ್ಟರು. ಆಗ ಅರಸನು ಗಟ್ಟಿ ಯಾಗಿ ಅಬ್ನೇರನ ಸಮಾಧಿಯ ಬಳಿಯಲ್ಲಿ ಅತ್ತನು; ಜನರೆಲ್ಲರೂ ಅತ್ತರು.
ದಾವೀದನು ತನ್ನ ಯೌವ ನಸ್ಥರಿಗೆ ಆಜ್ಞಾಪಿಸಿದ್ದರಿಂದ ಅವರು ಅವರನ್ನು ಕೊಂದು ಹಾಕಿ, ಅವರ ಕೈಕಾಲುಗಳನ್ನು ಕಡಿದು ಹೆಬ್ರೋ ನಿನಲ್ಲಿರುವ ಕೊಳದ ಬಳಿಯಲ್ಲಿ ತೂಗುಹಾಕಿದರು. ಅವರು ಈಷ್ಬೋಶೆತನ ತಲೆಯನ್ನು ತಕ್ಕೊಂಡು ಅದನ್ನು ಹೆಬ್ರೋನಿನಲ್ಲಿರುವ ಅಬ್ನೇರನ ಸಮಾಧಿಯಲ್ಲಿ ಹೂಣಿಟ್ಟರು.
ಆಗ ದಾವೀದನು ಕರ್ತನಿಗೆ ಅಲ್ಲಿ ಬಲಿಪೀಠವನ್ನು ಕಟ್ಟಿಸಿ ದಹನಬಲಿಗಳನ್ನೂ ಸಮಾ ಧಾನದಬಲಿಗಳನ್ನೂ ಅರ್ಪಿಸಿದನು. ಹೀಗೆ ಕರ್ತನು ದೇಶಕ್ಕೋಸ್ಕರ ಬಿನ್ನಹವನ್ನು ಕೇಳಿದ್ದರಿಂದ ಇಸ್ರಾ ಯೇಲಿನ ಕಡೆಯಿಂದ ಆ ಬಾಧೆಯು ನಿಂತಿತು.
ಆಗ ಎಲೀಯನು ಅವರಿಗೆ--ನೀವು ಬಾಳನ ಪ್ರವಾದಿಗಳನ್ನು ಹಿಡಿಯಿರಿ; ಅವರಲ್ಲಿ ಒಬ್ಬನೂ ತಪ್ಪಿಸಿ ಕೊಳ್ಳದೆ ಇರಲಿ ಅಂದನು. ಇವರು ಅವರನ್ನು ಹಿಡಿ ದರು; ಎಲೀಯನು ಅವರನ್ನು ಕೀಷೋನ್‌ಹಳ್ಳದ ಬಳಿಗೆ ತಕ್ಕೊಂಡುಹೋಗಿ ಅಲ್ಲಿ ಅವರನ್ನು ಕೊಂದು ಹಾಕಿದನು.
ಆಗ ಕರ್ತನು ನನಗೆ ಹೇಳಿದ್ದೇನಂದರೆ --ಮೋಶೆಯೂ ಸಮುವೇಲನೂ ನನ್ನ ಮುಂದೆ ನಿಂತರೂ ನನ್ನ ಮನಸ್ಸು ಈ ಜನರ ಮೇಲೆ ಇರುವದಿಲ್ಲ. ಅವರನ್ನು ನನ್ನ ಸನ್ನಿಧಿಯಿಂದ ಕಳುಹಿಸಿ ಬಿಡು; ಅವರು ಹೋಗಲಿ.
ಆಗ ಕರ್ತನು ತನ್ನ ದೇಶಕ್ಕೋಸ್ಕರ ರೋಷ ಗೊಂಡು ತನ್ನ ಜನರನ್ನು ಕನಿಕರಿಸುವನು.
ದೇವರಾದ ಕರ್ತನು ನನಗೆ ಹೀಗೆ ತೋರಿಸಿದನು; ಇಗೋ, ಹಿಂಗಾರು ಮಳೆ ಬಿದ್ದು ಪೈರು ಸೊಂಪಾಗುವದಕ್ಕೆ ಆರಂಭವಾದಾಗ ಅಂದರೆ, ರಾಜಾದಾಯದ ಹುಲ್ಲನ್ನು ಕೊಯ್ದ ಮೇಲೆ ಬೆಳೆಯು ವೃದ್ಧಿಯಾಗುತ್ತಿದ್ದಾಗ ಇಗೋ, ಕರ್ತನು ಮಿಡತೆಗಳನ್ನು ಉಂಟುಮಾಡಿದನು.
ಆಗ ಅವರು ಯೋನನನ್ನು ಎತ್ತಿ ಸಮುದ್ರದಲ್ಲಿ ಹಾಕಿದರು; ಆಗ ಸಮುದ್ರವು ತನ್ನ ಉಗ್ರವನ್ನು ನಿಲ್ಲಿಸಿ ಬಿಟ್ಟಿತು.
ಆಗ ಅವನು ನನಗೆ ಕೂಗಿ ಹೇಳಿದ್ದೇನಂ ದರೆ--ನೋಡು, ಉತ್ತರ ದೇಶಕ್ಕೆ ಹೊರಟವುಗಳು ಉತ್ತರ ದೇಶದಲ್ಲಿ ನನ್ನ ಆತ್ಮವನ್ನು ಶಾಂತಿಪಡಿಸಿವೆ ಅಂದನು.