ಆಗ ಅರಸನು ಗಿಬ್ಯೋನ್ಯರನ್ನು ಕಳುಹಿಸಿದನು. (ಆದರೆ ಗಿಬ್ಯೋನ್ಯರು ಇಸ್ರಾಯೇಲ್ ಮಕ್ಕಳಾಗಿರದೆ ಅಮೋರಿಯರಲ್ಲಿ ಉಳಿದವರಾಗಿದ್ದರು. ಅವರಿಗೆ ಇಸ್ರಾಯೇಲ್ ಮಕ್ಕಳು ಆಣೆ ಇಟ್ಟಿದ್ದರು. ಸೌಲನು ಇಸ್ರಾಯೇಲ್ ಮಕ್ಕಳಿಗೋಸ್ಕರವಾಗಿಯೂ ಯೆಹೂದ ಕ್ಕೋಸ್ಕರವಾಗಿಯೂ ತೋರಿಸಿದ ಆಸಕ್ತಿಯಿಂದ ಅವ ರನ್ನು ಹೊಡೆಯಲು ಹುಡುಕಿದ್ದನು)
Cross references
ಆದರೆ ನಾಲ್ಕನೆಯ ಸಂತಾನದಲ್ಲಿ ಅವರು ತಿರಿಗಿ ಬರುವರು; ಅಮೋರಿಯರ ದುಷ್ಟತನವು ಇನ್ನೂ ಪೂರ್ತಿಯಾಗಲಿಲ್ಲ ಎಂದು ಹೇಳಿದನು.
ನಿನ್ನ ದೇವರಾದ ಕರ್ತನು ನಿನಗೆ ಒಪ್ಪಿಸುವ ಜನಗಳನ್ನೆಲ್ಲಾ ನೀನು ಸಂಹರಿಸಿಬಿಡುವಿ; ಅವರ ಮೇಲೆ ನೀನು ಕಟಾಕ್ಷವಿಡಬಾರದು; ಇಲ್ಲವೆ ಅವರ ದೇವರು ಗಳನ್ನು ಸೇವಿಸಬಾರದು; ಅದು ನಿನಗೆ ಉರುಲಾ ಗುವದು.
ಆದರೆ ಯೆಹೋಶುವನು ಯೆರಿಕೋವಿಗೂ ಆಯಿಗೂ ಮಾಡಿದ್ದನ್ನು ಗಿಬ್ಯೋನಿನ ನಿವಾಸಿಗಳು ಕೇಳಿದಾಗ
ಯೆಹೋಶುವನು ಅವರ ಸಂಗಡ ಸಮಾಧಾನ ಮಾಡಿಕೊಂಡು ಅವರನ್ನು ಜೀವದಿಂದ ಇರಿಸುವದಕ್ಕೆ ಅವರ ಸಂಗಡ ಒಡಂಬಡಿಕೆ ಮಾಡಿದನು. ಇದಲ್ಲದೆ ಸಭೆಯ ಪ್ರಧಾನರು ಪ್ರಮಾಣಮಾಡಿದರು.
ಅದಕ್ಕೆ ಸೌಲನು--ಯೋನಾತಾನನೇ, ನೀನು ನಿಜವಾಗಿ ಸಾಯಬೇಕು; ಇಲ್ಲದಿದ್ದರೆ ದೇವರು ನನಗೆ ಹೆಚ್ಚಾದದ್ದನ್ನು ಮಾಡಲಿ ಅಂದನು.
ಆದರೆ ಸಮಸ್ತ ಜನರನ್ನು ಕತ್ತಿಯಿಂದ ಸಂಪೂರ್ಣ ನಾಶಮಾಡಿದನು.
ನೀನು ನನ್ನ ಸಂಗಡ ಬಂದು ಕರ್ತನಿಗೋ ಸ್ಕರ ನನಗುಂಟಾದ ಆಸಕ್ತಿಯನ್ನು ನೋಡು ಎಂದು ಹೇಳಿ ಅವನನ್ನು ತನ್ನ ರಥದಲ್ಲಿ ಕೂಡ್ರಿಸಿಕೊಂಡನು.
ಆದರೆ ಯೇಹುವು ತನ್ನ ಪೂರ್ಣಹೃದಯ ದಿಂದ ಇಸ್ರಾಯೇಲಿನ ದೇವರಾದ ಕರ್ತನ ನ್ಯಾಯ ಪ್ರಮಾಣದಲ್ಲಿ ನಡೆಯುವ ಹಾಗೆ ಎಚ್ಚರಿಕೆಯಾಗಿರ ಲಿಲ್ಲ; ಇಸ್ರಾಯೇಲ್ಯರನ್ನು ಪಾಪಮಾಡಲು ಪ್ರೇರೇಪಿ ಸಿದ ಯಾರೊಬ್ಬಾಮನ ಪಾಪಗಳನ್ನು ತೊರೆದು ಬಿಡಲಿಲ್ಲ.
ಹೇತನನ್ನೂ ಯೆಬೂಸ್ಯರನ್ನೂ ಅಮೋರ್ಯ ರನ್ನೂ ಗಿರ್ಗಾಷಿಯರನ್ನೂ ಹಿವ್ವಿಯರನ್ನೂ
ಆತನ ಶಿಷ್ಯರಾದ ಯಾಕೋಬ ಯೋಹಾನರು ಇದನ್ನು ನೋಡಿ--ಕರ್ತನೇ, ಎಲೀಯನು ಮಾಡಿದ ಪ್ರಕಾರ ಅವರನ್ನು ದಹಿಸಿಬಿಡುವಂತೆ ಆಕಾಶದಿಂದ ಬೆಂಕಿ ಬೀಳುವ ಹಾಗೆ ನಾವು ಅಪ್ಪಣೆಕೊಡಲು ನಿನಗೆ ಮನಸ್ಸುಂಟೋ ಎಂದು ಅವರು ಕೇಳಿದರು.
ಅವರು ನಿಮ್ಮನ್ನು ಸಭಾಮಂದಿರಗಳಿಂದ ಹೊರಗೆ ಹಾಕುವರು; ಹೌದು, ನಿಮ್ಮನ್ನು ಕೊಲ್ಲುವವನು ದೇವರ ಸೇವೆ ಮಾಡುತ್ತಾನೆಂದು ನೆನಸುವ ಗಳಿಗೆ ಬರುತ್ತದೆ.
ದೇವರಲ್ಲಿ ಆಸಕ್ತರಾಗಿದ್ದಾರೆಂದು ನಾನು ಅವರ ವಿಷಯದಲ್ಲಿ ಸಾಕ್ಷಿಕೊಡುತ್ತೇನೆ; ಆದರೂ ಅವರ ಆಸಕ್ತಿಯು ಜ್ಞಾನಾನುಸಾರವಾದದ್ದಲ್ಲ.
ಅವರು ನಿಮ್ಮನ್ನು ಮೆಚ್ಚಿಸುವದಕ್ಕೆ ಆಸಕ್ತರಾಗಿದ್ದಾರೆ; ಆದರೆ ಒಳ್ಳೇ ಅಭಿಪ್ರಾಯದಿಂದ ಅಲ್ಲ; ಹೌದು, ನೀವು ತಮ್ಮನ್ನೇ ಮೆಚ್ಚಿಸುವವರಾಗಬೇಕೆಂದು ನಿಮ್ಮನ್ನು ಅಗ ಲಿಸುವದಕ್ಕೆ ಅಪೇಕ್ಷಿಸುತ್ತಾರೆ.