ನನ್ನ ಕಾಲುಗಳನ್ನು ಜಿಂಕೆಗಳ ಹಾಗೆ ಮಾಡಿ ನನ್ನನ್ನು ಉನ್ನತ ಸ್ಥಳಗಳ ಮೇಲೆ ನಿಲ್ಲಿಸುತ್ತಾನೆ.
Cross references
ಅವನು ಹೊಲದ ಆದಾಯವನ್ನು ತಿನ್ನುವ ಹಾಗೆ ಭೂಮಿಯ ಎತ್ತರವಾದ ಸ್ಥಳಗಳಲ್ಲಿ ಅವನನ್ನು ಹೋಗ ಮಾಡಿ ಬಂಡೆಯೊಳಗಿಂದ ಜೇನನ್ನೂ ಬಿಳೀ ಕಲ್ಲಿನ ಬಂಡೆಯೊಳಗಿಂದ ಎಣ್ಣೆಯನ್ನೂ ಅವನಿಗೆ ಕುಡಿಯಲು ಕೊಟ್ಟನು.
ಕಬ್ಬಿಣವೂ ತಾಮ್ರವೂ ನಿನ್ನ ಪಾದರಕ್ಷೆಯಾಗಿರಲಿ. ನಿನ್ನ ದಿವಸಗಳ ಪ್ರಕಾರ ನಿನ್ನ ಬಲವು ಇರಲಿ ಎಂದು ಹೇಳಿದನು.
ಚೆರೂಯಳ ಮೂವರು ಮಕ್ಕಳಾದ ಯೋವಾ ಬನೂ ಅಬಿಷೈಯೂ ಅಸಾಹೇಲನೂ ಅಲ್ಲಿ ಇದ್ದರು. ಅಸಾಹೇಲನು ಅಡವಿಯ ಜಿಂಕೆಯ ಹಾಗೆ ಪಾದ ತ್ವರಿತನಾಗಿದ್ದನು.
ದಾವೀದನ ಕಡೇ ಮಾತುಗಳು ಇವೇ--ಇಷಯನ ಮಗನಾದ ದಾವೀದನು ನುಡಿ ದನು; ಉನ್ನತವಾಗಿ ಏರಿಸಲ್ಪಟ್ಟ ಪುರುಷನು, ಯಾಕೋಬನ ದೇವರ ಅಭಿಷಕ್ತನು, ಇಸ್ರಾಯೇಲಿನ ರಮ್ಯವಾದ ಕೀರ್ತನೆಗಾರನು ನುಡಿದದ್ದೇನಂದರೆ--
ಬಂಡೆಗಳ ಕೋಟೆಗಳು ಅವನಿಗೆ ಆಶ್ರಯವಾಗಿ ರುವವು. ರೊಟ್ಟಿಯು ಅವನಿಗೆ ಕೊಡಲ್ಪಡುವದು, ನೀರು ತಪ್ಪುವದಿಲ್ಲ.
ಆಗ ಕರ್ತನಲ್ಲಿ ಆನಂದಗೊಳ್ಳುವಿ; ಭೂಮಿಯ ಎತ್ತರವಾದ ಸ್ಥಳಗಳ ಮೇಲೆ ನಿನ್ನನ್ನು ಹತ್ತಿಸಿ, ನಿನ್ನ ತಂದೆಯಾದ ಯಾಕೋಬನ ಬಾಧ್ಯತೆಯನ್ನು ಅನುಭವಿ ಸುವಂತೆ ನಿನಗೆ ಮಾಡುವೆನು. ಕರ್ತನೇ ಇದನ್ನು ನುಡಿದಿದ್ದಾನೆ.
ಕರ್ತನಾದ ದೇವರು ನನ್ನ ಬಲವಾಗಿದ್ದಾನೆ. ಆತನು ನನ್ನ ಕಾಲುಗಳನ್ನು ಜಿಂಕೆಯ ಕಾಲುಗಳ ಹಾಗೆ ಮಾಡಿ ನನ್ನ ಉನ್ನತ ಸ್ಥಳಗಳಲ್ಲಿ ನಾನು ನಡೆಯುವಂತೆ ಆತನು ಮಾಡುವನು. ಪ್ರಧಾನ ಗಾಯಕನ ಕೀರ್ತನ ಸಂಗ್ರಹದಿಂದ ತೆಗೆದದ್ದು: ನನ್ನ ತಂತಿವಾದ್ಯದೊಡನೆ ಹಾಡತಕ್ಕದ್ದು.