Home Bibles 2 ಸಮುವೇಲ 22:40 · ಕನ್ನಡ ಬೈಬಲ್
2 ಸಮುವೇಲ 22:40 · ಕನ್ನಡ ಬೈಬಲ್

ನೀನು ಯುದ್ದಕ್ಕೆ ಪರಾ ಕ್ರಮದಿಂದ ನನ್ನ ನಡುವನ್ನು ಕಟ್ಟಿದಿ; ನನ್ನ ಎದು ರಾಳಿಗಳನ್ನು ನನ್ನ ಕೆಳಗೆ ಅಧೀನಮಾಡಿದಿ.

Cross references

1 ಸಮುವೇಲ 17:49

ತನ್ನ ಕೈಯನ್ನು ಚೀಲದಲ್ಲಿ ಹಾಕಿ ಅದರಲ್ಲಿರುವ ಒಂದು ಕಲ್ಲನ್ನು ತೆಗೆದುಕೊಂಡು ಕವಣೆಯಲ್ಲಿಟ್ಟು ಬೀಸಿ ಫಿಲಿಷ್ಟಿ ಯನ ಹಣೆಯನ್ನು ತಾಕುವಂತೆ ಎಸೆದನು. ಆ ಕಲ್ಲು ಅವನ ಹಣೆಯೊಳಗೆ ಹೊಕ್ಕಿದ್ದರಿಂದ ಅವನು ನೆಲದ ಮೇಲೆ ಬೋರಲು ಬಿದ್ದನು.

1 ಸಮುವೇಲ 23:5

ಹಾಗೆಯೇ ದಾವೀದನೂ ತನ್ನ ಮನುಷ್ಯರೂ ಕೆಯಾಲಾಕ್ಕೆ ಹೋಗಿ ಫಿಲಿಷ್ಟಿಯರ ಸಂಗಡ ಯುದ್ಧಮಾಡಿ ಅವರ ದನಗಳನ್ನು ಹಿಡುಕೊಂಡು ಬಂದು ಅವರನ್ನು ಪೂರ್ಣವಾಗಿ ಸಂಹರಿಸಿದನು. ಈ ಪ್ರಕಾರ ದಾವೀದನು ಕೆಯಾಲಾದ ನಿವಾಸಿಗಳನ್ನು ರಕ್ಷಿಸಿದನು.

ಕೀರ್ತನೆಗಳು 18:32

ಪರಾ ಕ್ರಮದಿಂದ ನನ್ನ ನಡುವನ್ನು ಕಟ್ಟಿ ನನ್ನ ಮಾರ್ಗವನ್ನು ಸಂಪೂರ್ಣ ಮಾಡುವ ದೇವರು ಆತನೇ.

ಕೀರ್ತನೆಗಳು 18:39

ನೀನು ಯುದ್ಧಕಾಗ್ಕಿ ಪರಾ ಕ್ರಮದಿಂದ ನನ್ನ ನಡುವನ್ನು ಕಟ್ಟಿ ನನ್ನ ಎದುರಾಳಿಗ ಳನ್ನು ಅಧೀನ ಮಾಡಿದಿ.

ಕೀರ್ತನೆಗಳು 44:5

ನಿನ್ನಿಂದ ನಮ್ಮ ವೈರಿಗಳನ್ನು ದೊಬ್ಬುವೆವು; ನಿನ್ನ ಹೆಸರಿನಲ್ಲಿ ನಮ್ಮ ಎದುರಾಳಿಗಳನ್ನು ತುಳಿಯುವೆವು.

ಕೀರ್ತನೆಗಳು 144:2

ಆತನು ನನ್ನ ಒಳ್ಳೇತನವೂ ನನ್ನ ಕೋಟೆಯೂ ನನ್ನ ಎತ್ತರವಾದ ದುರ್ಗವೂ ನನ್ನನ್ನು ತಪ್ಪಿಸುವವನೂ ನನ್ನ ಭರವಸವೂ ನನ್ನ ಗುರಾಣಿಯೂ ನನ್ನ ಜನರನ್ನು ನನಗೆ ವಶಮಾಡುವಾತನೂ ಆಗಿದ್ದಾನೆ.

ಯೆಶಾಯ 45:5

ನಾನೇ ಕರ್ತನು, ಮತ್ತೊಬ್ಬನಿಲ್ಲ; ನನ್ನ ಹೊರತು ಯಾವ ದೇವರೂ ಇಲ್ಲ; ನೀನು ನನ್ನನ್ನು ಅರಿಯದನಾಗಿದ್ದರೂ ನಿನಗೆ ನಡುಕಟ್ಟುವೆನು.

ಯೆಶಾಯ 60:14

ಆಗ ನಿನ್ನನ್ನು ಕುಗ್ಗಿಸಿದವರ ಮಕ್ಕಳು ಬೊಗ್ಗಿಕೊಂಡು ನಿನ್ನ ಬಳಿಗೆ ಬರುವರು; ನಿನ್ನನ್ನು ಅಸಡ್ಡೆಮಾಡಿದವರೆಲ್ಲರು ನಿನ್ನ ಅಂಗಾಲುಗಳಿಗೆ ಸರಿಯಾಗಿ ಅಡ್ಡಬಿದ್ದು ನಿನ್ನನ್ನು ಕರ್ತನ ಪಟ್ಟಣವೆಂದು ಇಸ್ರಾಯೇಲಿನ ಪರಿಶುದ್ಧನ ಚೀಯೋ ನೆಂದೂ ಕರೆಯುವರು.

ಕೊಲೊಸ್ಸೆಯವರಿಗೆ 1:11

ಆತನ ಮಹಿಮಾ ಶಕ್ತಿಯ ಪ್ರಕಾರ ಪರಿಪೂರ್ಣ ಬಲಹೊಂದಿ ಬಲಿಷರಾಗಿ ಆನಂದ ಪೂರ್ವಕವಾದ ತಾಳ್ಮೆಯನ್ನು ಮತ್ತು ದೀರ್ಘಶಾಂತಿಯನ್ನು ತೋರಿಸುವವರೂ

ಪ್ರಕಟನೆ 5:9

ಅವರು ಹೊಸ ಹಾಡನ್ನು ಹಾಡುತ್ತಾ--ನೀನು ಪುಸ್ತಕವನ್ನು ತೆಗೆದುಕೊಳ್ಳುವದಕ್ಕೂ ಅದರ ಮುದ್ರೆಗಳನ್ನು ಬಿಚ್ಚುವದಕ್ಕೂ ಯೋಗ್ಯ ನಾಗಿದ್ದೀ; ಯಾಕಂದರೆ ನೀನು ವಧಿತನಾಗಿ ನಿನ್ನ ರಕ್ತದಿಂದ ಸಕಲ ಕುಲ ಭಾಷೆ ಪ್ರಜೆ ಜನಾಂಗಗಳ ವರಿಂದ ನಮ್ಮನ್ನು ದೇವರಿಗಾಗಿ ವಿಮೋಚಿಸಿದ್ದೀ;

Interlinear

Choose Theme