ಆತನು ತನ್ನ ಅರಸನಿಗೆ ರಕ್ಷಣೆಯ ಗೋಪುರವಾಗಿದ್ದಾನೆ; ತನ್ನ ಅಭಿಷಕ್ತನಾದ ದಾವೀದ ನಿಗೂ ಅವನ ಸಂತತಿಗೂ ಕೃಪೆಯನ್ನು ಯುಗಯುಗಕ್ಕೂ ಅನುಗ್ರಹಿಸುತ್ತಾನೆ.
Cross references
ಇದಲ್ಲದೆ ಕರ್ತನು ನಿನಗೆ ತಿಳಿಸುವದೇನಂದರೆ, ನಾನು ನಿನಗೆ ಮನೆಯನ್ನು ಕಟ್ಟುವೆನು. ನಿನ್ನ ದಿವಸಗಳು ಪೂರ್ತಿ ಯಾಗಿ ನೀನು ನಿನ್ನ ಪಿತೃಗಳ ಸಂಗಡ ಮಲಗಿಕೊಂಡಿ ರುವಾಗ ನಿನ್ನ ಕರುಳುಗಳಿಂದ ಹೊರಡುವ ನಿನ್ನ ಸಂತತಿಯನ್ನು ನಿನ್ನ ತರುವಾಯ ಎಬ್ಬಿಸಿ ನಾನು ಅವನ ರಾಜ್ಯವನ್ನು ಸ್ಥಿರಮಾಡುವೆನು.
ಅವನು ನನ್ನ ಹೆಸ ರಿಗೆ ಮನೆಯನ್ನು ಕಟ್ಟುವನು; ನಾನು ಅವನ ರಾಜ್ಯದ ಸಿಂಹಾಸನವನ್ನು ಸದಾಕಾಲಕ್ಕೂ ಸ್ಥಿರಮಾಡುವೆನು. ನಾನು ಅವನ ತಂದೆಯಾಗಿರುವೆನು; ಅವನು ನನ್ನ ಮಗನಾಗಿರುವನು.
ನಿನ್ನ ಮನೆಯೂ ನಿನ್ನ ರಾಜ್ಯವೂ ನಿನ್ನ ಮುಂದೆ ಸದಾಕಾಲಕ್ಕೂ ಸ್ಥಿರಮಾಡಲ್ಪಡುವವು; ನಿನ್ನ ಸಿಂಹಾಸನವು ಯುಗ ಯುಗಾಂತರಕ್ಕೂ ಶಾಶ್ವತವಾಗಿರುವದು ಎಂದು ಹೇಳಿ ದನು.
ಕರ್ತನು ನನ್ನ ಬಂಡೆಯೂ ನನ್ನ ಕೋಟೆಯೂ ನನ್ನನ್ನು ತಪ್ಪಿಸುವವನೂ ಆಗಿದ್ದಾನೆ.
ದಾವೀದನ ಕಡೇ ಮಾತುಗಳು ಇವೇ--ಇಷಯನ ಮಗನಾದ ದಾವೀದನು ನುಡಿ ದನು; ಉನ್ನತವಾಗಿ ಏರಿಸಲ್ಪಟ್ಟ ಪುರುಷನು, ಯಾಕೋಬನ ದೇವರ ಅಭಿಷಕ್ತನು, ಇಸ್ರಾಯೇಲಿನ ರಮ್ಯವಾದ ಕೀರ್ತನೆಗಾರನು ನುಡಿದದ್ದೇನಂದರೆ--
ಆದರೆ ಓ ನನ್ನ ಕರ್ತನೇ, ನನಗೆ ಗುರಾಣಿಯೂ ನನ್ನ ಘನವೂ ನನ್ನ ತಲೆ ಎತ್ತುವವನೂ ನೀನೇ.
ಆತನು ತನ್ನ ಅರಸನಿಗೆ ದೊಡ್ಡ ಬಿಡುಗಡೆಯನ್ನು ಕೊಟ್ಟು ತನ್ನ ಅಭಿಷಕ್ತನಾದ ದಾವೀದನಿಗೂ ಅವನ ಸಂತತಿಗೂ ಕೃಪೆಯನ್ನು ಎಂದೆಂದಿಗೂ ತೋರಿಸುತ್ತಾನೆ.
ಓ ಕರ್ತನೇ, ನಿನ್ನ ಬಲದಲ್ಲಿ ಅರಸನು ಸಂತೋಷಪಡುವನು; ನಿನ್ನ ರಕ್ಷಣೆಯಲ್ಲಿ ಎಷ್ಟೋ ಅಧಿಕವಾಗಿ ಉಲ್ಲಾಸಪಡುವನು.
ದೇವರು ಅದರ ಅರಮನೆಗಳಲ್ಲಿ ಆಶ್ರಯ ವೆಂದು ಗೊತ್ತಾಗಿದೆ.
ನನ್ನ ಸೇವಕನಾದ ದಾವೀದನನ್ನು ಕಂಡು ಕೊಂಡಿದ್ದೇನೆ; ನನ್ನ ಪರಿಶುದ್ಧ ಎಣ್ಣೆಯಿಂದ ಅವನನ್ನು ಅಭಿಷೇಕಿಸಿದ್ದೇನೆ.
ಆದರೆ ನನ್ನ ನಂಬಿಗಸ್ತಿಕೆಯೂ ಕರುಣೆಯೂ ಅವನ ಸಂಗಡ ಇರುವವು. ನನ್ನ ಹೆಸರಿನಲ್ಲಿ ಅವನ ಕೊಂಬು ಉನ್ನತವಾಗುವದು.
ಅವನು--ನೀನು ನನ್ನ ತಂದೆಯೂ ದೇವರೂ ರಕ್ಷಣೆಯ ಬಂಡೆಯೂ ಎಂದು ನನಗೆ ಮೊರೆಯಿಡು ವನು.
ಅವನ ಸಂತತಿ ಯನ್ನು ಸಹ ಎಂದೆಂದಿಗೂ ಅವನ ಸಿಂಹಾಸನವನ್ನು ಆಕಾಶದ ದಿವಸಗಳ ಹಾಗೆಯೂ ಮಾಡುವೆನು.
ಅವನ ಸಂತತಿಯು ಯುಗ ಯುಗಕ್ಕೂ ಅವನ ಸಿಂಹಾಸನವು ನನ್ನ ಮುಂದೆ ಸೂರ್ಯನ ಹಾಗೆಯೂ ಇರುವದು.
ನನ್ನ ಆಶ್ರಯವೂ ಕೋಟೆಯೂ ನಾನು ಭರವಸವಿಟ್ಟಿರುವ ನನ್ನ ದೇವರೂ ಎಂದು ನಾನು ಕರ್ತನಿಗೆ ಹೇಳುತ್ತೇನೆ.
ಅರಸುಗಳಿಗೆ ರಕ್ಷಣೆಯನ್ನು ಕೊಡು ವಾತನೇ, ನಿನ್ನ ಸೇವಕನಾದ ದಾವೀದನನ್ನು ಕೇಡಿನ ಕತ್ತಿಯಿಂದ ತಪ್ಪಿಸುವಾತನೇ,
ಅಳುತ್ತಾ ಬರುವರು; ಬಿನ್ನಹಗಳ ಸಂಗಡ ಅವರನ್ನು ನಡಿಸುವೆನು; ಅವರು ಎಡವದ ಸಮದಾರಿಯಲ್ಲಿ ನೀರಿನ ನದಿಗಳ ಬಳಿಯಲ್ಲಿ ನಡೆಯುವಂತೆ ಮಾಡುವೆನು; ನಾನು ಇಸ್ರಾಯೇಲಿಗೆ ತಂದೆಯಾಗಿದ್ದೇನೆ; ಎಫ್ರಾಯಾಮನು ನನ್ನ ಚೊಚ್ಚಲನೇ.
ಇಗೋ, ನೀನು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವಿ; ಆತನಿಗೆ ಯೇಸು ಎಂದು ಹೆಸರಿಡಬೇಕು.
ಏಳನೆಯ ದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ-- ಈ ಲೋಕದ ರಾಜ್ಯಗಳು ನಮ್ಮ ಕರ್ತನ ಮತ್ತು ಆತನ ಕ್ರಿಸ್ತನ ರಾಜ್ಯಗಳಾದವು; ಆತನು ಯುಗ ಯುಗಾಂತರಗಳಲ್ಲಿಯೂ ಆಳುವನು ಎಂದು ಹೇಳಿ ದವು.