Home Bibles ☰ Books 2 ಸಮುವೇಲ 23:12 · ಕನ್ನಡ ಬೈಬಲ್
2 ಸಮುವೇಲ 23:12 · ಕನ್ನಡ ಬೈಬಲ್

ಆದರೆ ಅವನು ಆ ಹೊಲದಲ್ಲಿ ನಿಂತುಕೊಂಡು ಅದನ್ನು ಕಾಪಾಡಿ ಫಿಲಿಷ್ಟಿಯರನ್ನು ಕೊಂದುಬಿಟ್ಟನು. ಹೀಗೆ ಕರ್ತನು ದೊಡ್ಡರಕ್ಷಣೆಯನ್ನುಂಟು ಮಾಡಿದನು.

Cross references

2 ಸಮುವೇಲ 23:10

ಇವನು ಎದ್ದು ತನ್ನ ಕೈ ದಣಿದು ಕತ್ತಿಗೆ ಹತ್ತಿಕೊಳ್ಳುವ ವರೆಗೂ ಫಿಲಿಷ್ಟಿಯರನ್ನು ಹೊಡೆದುಬಿಟ್ಟನು. ಆ ದಿನ ಕರ್ತನು ದೊಡ್ಡ ರಕ್ಷಣೆಯನ್ನುಂಟು ಮಾಡಿದನು. ಜನರು ಸುಲು ಕೊಳ್ಳುವದಕ್ಕೆ ಮಾತ್ರ ಅವನ ಹಿಂದೆ ಹಿಂತಿರುಗಿದರು.

ಕೀರ್ತನೆಗಳು 3:8

ರಕ್ಷಣೆಯು ಕರ್ತನದೇ; ನಿನ್ನ ಜನರ ಮೇಲೆ ನಿನ್ನ ಆಶೀರ್ವಾದ ಉಂಟು. ಸೆಲಾ.

ಕೀರ್ತನೆಗಳು 44:2

ನೀನು ನಿನ್ನ ಕೈಯಿಂದ ಜನಾಂಗಗಳನ್ನು ಹೊರಡಿಸಿ (ನಮ್ಮ ತಂದೆಗಳನ್ನು) ನೆಟ್ಟಿದ್ದೀ; ಜನರನ್ನು ಬಾಧೆಪಡಿಸಿ ಅವರನ್ನು ಹೊರಗೆ ಹಾಕಿದಿ.

ಸಾಮೇತಿಗಳು 21:31

ಯುದ್ಧದ ದಿನಕ್ಕಾಗಿ ಕುದುರೆಯು ಸಿದ್ಧವಾಗಿರುತ್ತದೆ; ಭದ್ರತೆಯು ಕರ್ತನಿಂದಲೇ.

Interlinear

Choose Theme