Home Bibles 2 ಸಮುವೇಲ 23:14 · ಕನ್ನಡ ಬೈಬಲ್
2 ಸಮುವೇಲ 23:14 · ಕನ್ನಡ ಬೈಬಲ್

ದಾವೀದನು ಗಡಿ ಸ್ಥಳದಲ್ಲಿರುವಾಗ ಫಿಲಿಷ್ಟಿಯರ ದಂಡು ಬೇತ್ಲೆಹೇಮಿನಲ್ಲಿತ್ತು.

Cross references

ಆದಿಕಾಂಡ 35:19

ರಾಹೇಲಳು ಸತ್ತುಹೋದಳು. ಅವಳನ್ನು ಎಫ್ರಾತದ ಮಾರ್ಗದಲ್ಲಿ ಹೂಣಿಟ್ಟರು; ಅದೇ ಬೇತ್ಲೆಹೇಮ್‌.

1 ಸಮುವೇಲ 10:5

ತರುವಾಯ ಫಿಲಿಷ್ಟಿಯರ ಠಾಣವಿರುವ ದೇವರ ಗುಡ್ಡಕ್ಕೆ ಹೋಗುವಿ. ಅಲ್ಲಿಂದ ನೀನು ಪಟ್ಟಣದಲ್ಲಿ ಪ್ರವೇಶಿಸುವಾಗ ನಿನಗೆದುರಾಗಿ ವೀಣೆ, ದಮ್ಮಡಿ, ಪಿಳ್ಳಂಗೋವಿ, ಕಿನ್ನರಿಗಳನ್ನು ತಮ್ಮ ಮುಂದೆ ಇಟ್ಟುಕೊಂಡವರಾಗಿ ಮೇಲಿನಿಂದ ಇಳಿದು ಬರುವ ಪ್ರವಾದಿಗಳ ಗುಂಪು ಬರುವದು. ಅವರು ಪ್ರವಾದಿಸುವರು.

1 ಸಮುವೇಲ 13:4

ಫಿಲಿಷ್ಟಿಯರ ಠಾಣ ವನ್ನು ಸೌಲನು ಹೊಡೆದನೆಂದೂ ಫಿಲಿಷ್ಟಿಯರಿಗೆ ಇಸ್ರಾಯೇಲ್ಯರು ಅಸಹ್ಯವಾದವರಾದರೆಂದೂ ಸಮಸ್ತ ಇಸ್ರಾಯೇಲ್ಯರು ಕೇಳಿದಾಗ ಸೌಲನ ಹಿಂದೆ ಹೋಗಲು ಗಿಲ್ಗಾಲಿಗೆ ಕರೆಸಿಕೊಳ್ಳಲ್ಪಟ್ಟರು.

1 ಸಮುವೇಲ 13:23

ಆಗ ಫಿಲಿಷ್ಟಿಯರ ದಂಡು ಮಿಕ್ಮಾಷಿನ ಕಣಿವೆಯ ಮಾರ್ಗಕ್ಕೆ ಹೊರಟಿತು.

1 ಸಮುವೇಲ 14:6

ಆಗ ಯೋನಾತಾನನು ತನ್ನ ಆಯುಧಗಳನ್ನು ಹಿಡಿಯುವ ಯೌವನಸ್ಥನಿಗೆ--ನಾವು ಈ ಸುನ್ನತಿ ಇಲ್ಲದವರ ಠಾಣಕ್ಕೆ ದಾಟಿಹೋಗೋಣ ಬಾ; ಒಂದು ವೇಳೆ ದೇವರು ನಮಗೋಸ್ಕರ ಕಾರ್ಯ ನಡಿಸುವನು. ಯಾಕಂದರೆ ಅನೇಕ ಜನರಿಂದಾದರೂ ಸ್ವಲ್ಪ ಜನರಿಂದಾದರೂ ರಕ್ಷಿಸುವದಕ್ಕೆ ಕರ್ತನಿಗೆ ಯಾವ ಆಟಂಕವಿಲ್ಲ ಅಂದನು.

1 ಸಮುವೇಲ 22:1

ದಾವೀದನು ಆ ಸ್ಥಳದಿಂದ ತಪ್ಪಿಸಿಕೊಂಡು ಅದುಲ್ಲಾಮೆಂಬ ಗವಿಗೆ ಬಂದನು. ಈ ವರ್ತಮಾನವನ್ನು ಅವನ ಸಹೋದರರೂ ಅವನ ತಂದೆಯ ಮನೆಯವರೆಲ್ಲರೂ ಕೇಳಿ ಅವನ ಬಳಿಗೆ ಬಂದರು.

1 ಸಮುವೇಲ 22:4

ದಾವೀದನು ಗವಿಯಲ್ಲಿ ಇದ್ದ ದಿವಸಗಳೆಲ್ಲಾ ಅವರು ಆ ಅರಸನ ಬಳಿಯಲ್ಲಿ ವಾಸವಾಗಿದ್ದರು.

1 ಸಮುವೇಲ 24:22

ಹಾಗೆಯೇ ದಾವೀ ದನು ಸೌಲನಿಗೆ ಪ್ರಮಾಣಮಾಡಿದನು. ಆಗ ಸೌಲನು ತನ್ನ ಮನೆಗೆ ಹೋದನು. ಆದರೆ ದಾವೀದನೂ ಅವನ ಜನರೂ ಭದ್ರವಾದ ಸ್ಥಳಕ್ಕೆ ಏರಿ ಹೋದರು.

2 ಸಮುವೇಲ 5:17

ಅವರು ದಾವೀದನನ್ನು ಇಸ್ರಾಯೇಲಿನ ಮೇಲೆ ಅರಸನಾಗಲು ಅಭಿಷೇಕಮಾಡಿದ್ದಾರೆಂದು ಫಿಲಿಷ್ಟಿ ಯರು ಕೇಳಿದಾಗ ಅವರೆಲ್ಲರು ದಾವೀದನನ್ನು ಹುಡುಕು ವದಕ್ಕೆ ಬಂದರು. ಅದನ್ನು ದಾವೀದನು ಕೇಳಿ ಗಡಿ ಸ್ಥಳಕ್ಕೆ ಹೋದನು.

1 ದಿನವೃತ್ತಾಂತ 12:16

ಬೆನ್ಯಾವಿಾನನ ಮತ್ತು ಯೆಹೂದನ ಮಕ್ಕಳಲ್ಲಿ ಕೆಲವರು ಬಲವಾದ ಸ್ಥಳದಲ್ಲಿದ್ದ ದಾವೀದನ ಬಳಿಗೆ ಬಂದರು.

Interlinear

Choose Theme