ಅದೇ ದಿವಸದಲ್ಲಿ ಪ್ರವಾದಿಯಾದ ಗಾದನು ದಾವೀದನ ಬಳಿಗೆ ಬಂದು ಅವನಿಗೆ--ನೀನು ಹೋಗಿ ಯೆಬೂಸಿಯನಾದ ಅರೌನನ ಕಣದಲ್ಲಿ ಕರ್ತನಿಗೆ ಒಂದು ಬಲಿಪೀಠವನ್ನು ಕಟ್ಟಿಸು ಅಂದನು.
Cross references
ದಾವೀದನು ಉದಯದಲ್ಲಿ ಎದ್ದಾಗ ಅವನ ದರ್ಶಿಯಾದ ಗಾದ್ ಪ್ರವಾದಿಗೆ ಕರ್ತನ ವಾಕ್ಯ ಉಂಟಾಗಿ ಅವನಿಗೆ--
ಆಗ ಕರ್ತನ ದೂತನು ಗಾದನಿಗೆ--ದಾವೀದನು ಹೋಗಿ ಯೆಬೂಸಿಯನಾದ ಒರ್ನಾನನ ಕಣದಲ್ಲಿ ಕರ್ತನಿಗೆ ಬಲಿಪೀಠವನ್ನು ಕಟ್ಟುವ ಹಾಗೆ ದಾವೀದನಿಗೆ ಹೇಳು ಅಂದನು.
ದಾವೀದನು ಒರ್ನಾನನ ಬಳಿಗೆ ಬಂದಾಗ ಅವನು ದೃಷ್ಟಿಸಿ ದಾವೀದ ನನ್ನು ಕಂಡು ಕಣದಿಂದ ಹೊರಟು ದಾವೀದನ ಮುಂದೆ ಮೋರೆ ಕೆಳಗಾಗಿ ನೆಲಕ್ಕೆ ಅಡ್ಡಬಿದ್ದನು.
ಆಗ ಸೊಲೊಮೋನನು ಯೆರೂಸಲೇಮಿನಲ್ಲಿ ತನ್ನ ತಂದೆಯಾದ ದಾವೀದನಿಗೆ ಕರ್ತನು ಕಾಣಿಸಿಕೊಂಡ ಸ್ಥಳವಾದ ಮೋರೀಯಾ ಬೆಟ್ಟದ ಮೇಲೆ ದಾವೀದನು ಸಿದ್ಧಮಾಡಿದ ಯೆಬೂಸಿ ಯನಾದ ಒರ್ನಾನನ ಕಣದಲ್ಲಿ ಕರ್ತನ ಆಲಯವನ್ನು ಕಟ್ಟಲು ಪ್ರಾರಂಭಿಸಿದನು.
ಅವನ ರಕ್ತ ವನ್ನು ಅವನ ಬಾಯೊಳಗಿಂದಲೂ ಅವನ ಅಸಹ್ಯ ಗಳನ್ನು ಅವನ ಹಲ್ಲುಗಳ ನಡುವೆಯಿಂದಲೂ ನಾನು ತೆಗೆದುಹಾಕುವೆನು; ಅವನು ಸಹ ನಮ್ಮ ದೇವರಿಗಾಗಿ ಉಳಿಯುವನು; ಯೆಹೂದದಲ್ಲಿ ಪ್ರಭುವಿನ ಹಾಗೆ ಇರುವನು; ಎಕ್ರೋನು ಯೆಬೂಸಿಯನ ಹಾಗೆ ಇರು ವನು.