Home Bibles 2 ಸಮುವೇಲ 24:22 · ಕನ್ನಡ ಬೈಬಲ್
2 ಸಮುವೇಲ 24:22 · ಕನ್ನಡ ಬೈಬಲ್

ಅರೌನನು ದಾವೀದನಿಗೆ--ಅರಸನಾದ ನನ್ನ ಒಡೆಯನು ಅದನ್ನು ತಕ್ಕೊಂಡು ತನ್ನ ದೃಷ್ಟಿಗೆ ಒಳ್ಳೇದಾಗಿರುವದನ್ನು ಅರ್ಪಿಸಲಿ; ಇಗೋ, ದಹನಬಲಿಗೋಸ್ಕರ ಎತ್ತು ಗಳೂ ಕಟ್ಟಿಗೆಗಳಿಗೋಸ್ಕರ ಹಂತಿ ದೂಡುವ ಸಾಮಾನೂ ಬಾತಿ ಮುಟ್ಟುಗಳೂ ಇಲ್ಲಿ ಅವೆ ಅಂದನು.

Cross references

ಆದಿಕಾಂಡ 23:11

ಒಡೆಯನೇ, ಹಾಗಲ್ಲ; ನನ್ನ ಮಾತನ್ನು ಕೇಳು; ಆ ಹೊಲವನ್ನು ಅದರಲ್ಲಿರುವ ಗವಿಯನ್ನೂ ನಿನಗೆ ಕೊಡುತ್ತೇನೆ; ಅದನ್ನು ನನ್ನ ಜನರ ಎದುರಿನಲ್ಲಿ ನಿನಗೆ ಕೊಡುತ್ತೇನೆ; ನಿನ್ನ ಹೆಂಡತಿಯ ಶವವನ್ನು ಹೂಣಿಡು ಅಂದನು.

ನ್ಯಾಯಾಧಿಪತಿಗಳು 6:26

ಈ ಪರ್ವತದ ತುದಿಯಲ್ಲಿ ನೇಮಕವಾದ ಸ್ಥಳದಲ್ಲಿ ನಿನ್ನ ದೇವರಾದ ಕರ್ತನಿಗೆ ಬಲಿಪೀಠವನ್ನು ಕಟ್ಟಿ ಆ ಎರಡನೇ ಹೋರಿಯನ್ನು ತಂದು ಅದನ್ನು ನೀನು ಕಡಿದುಹಾಕಿದ ತೋಪಿನ ಕಟ್ಟಿಗೆಗಳ ಮೇಲೆ ದಹನಬಲಿಯಾಗಿ ಅರ್ಪಿಸು ಅಂದನು.

1 ಸಮುವೇಲ 6:14

ಆ ಬಂಡಿಯು ಬೇತ್ಷೆಮೆಷಿನ ಊರಿನವನಾದ ಯೆಹೋಶುವನ ಹೊಲದಲ್ಲಿ ಬಂದು ನಿಂತಿತು.

1 ಅರಸುಗಳು 19:21

ಆಗ ಇವನು ಅವನನ್ನು ಬಿಟ್ಟು ತಿರುಗಿಕೊಂಡು ಒಂದು ಜೋಡು ಎತ್ತುಗಳನ್ನು ತಕ್ಕೊಂಡು ಅವುಗಳನ್ನು ಕೊಂದು ಆ ಜೋಡು ಎತ್ತು ಕುಂಟೆಗಳಿಂದ ಅವುಗಳ ಮಾಂಸ ವನ್ನು ಬೇಯಿಸಿ ಜನರಿಗೆ ಕೊಟ್ಟನು. ಅವರು ತಿಂದ ತರುವಾಯ ಅವನು ಎದ್ದು ಎಲೀಯನ ಹಿಂದೆ ಹೋಗಿ ಅವನಿಗೆ ಸೇವೆಮಾಡಿದನು.

1 ದಿನವೃತ್ತಾಂತ 21:22

ಆಗ ದಾವೀದನು ಒರ್ನಾನನಿಗೆ--ಈ ಬಾಧೆಯು ಜನರನ್ನು ಬಿಟ್ಟು ಹೋಗುವ ಹಾಗೆ ನಾನು ಕರ್ತನಿಗೆ ಬಲಿ ಪೀಠವನ್ನು ಕಟ್ಟಿಸುವದಕ್ಕೆ ಈ ಕಣದ ಸ್ಥಳವನ್ನು ಪೂರ್ಣ ಕ್ರಯಕ್ಕೆ ನನಗೆ ಕೊಡು ಅಂದನು.

Interlinear

Choose Theme