ಅವರು ಯೊರ್ದನನ್ನು ದಾಟಿ ಗಾದ್ ನದಿಯ ಮಧ್ಯದಲ್ಲಿರುವ ಪಟ್ಟಣಕ್ಕೆ ಬಲ ಪಾರ್ಶ್ವವಾದ ಅರೋಯೇರಿನಲ್ಲಿಯೂ ಯಗ್ಜೇರಿ ನಲ್ಲಿಯೂ ಇಳಿದು
Cross references
ಇದಲ್ಲದೆ ಮೋಶೆಯು ಯಗ್ಜೇರನ್ನು ಪಾಳತಿ ನೋಡುವದಕ್ಕೆ ಕಳುಹಿಸಿದನು; ಅವರು ಅವರ ಗ್ರಾಮ ಗಳನ್ನು ವಶಪಡಿಸಿಕೊಂಡು ಅಲ್ಲಿರುವ ಅಮೋರಿಯ ರನ್ನು ಹೊರಡಿಸಿಬಿಟ್ಟರು.
ಇದಲ್ಲದೆ ರೂಬೇನನ ಮಕ್ಕಳಿಗೂ ಗಾದನ ಮಕ್ಕಳಿಗೂ ಬಹಳ ಅಧಿಕವಾದ ಪಶುಗಳು ಇದ್ದವು; ಅವರು ಯಗ್ಜೇರೂ ಗಿಲ್ಯಾದೂ ಎಂಬ ದೇಶ ಗಳನ್ನು ನೋಡಿದಾಗ ಅಗೋ, ಆ ಸ್ಥಳವು ಪಶುಗಳ ಸ್ಥಳವಾಗಿತ್ತು.
ಅಟಾರೋತ್, ದೀಬೋನ್, ಯಗ್ಜೇರ್, ನಿಮ್ರಾ, ಹೆಷ್ಬೋನ್, ಎಲೆಯಾಲೆ, ಸೆಬಾಮ್, ನೆಬೋ, ಬೆಯೋನ್ ಎಂಬವುಗಳೂ
ಅಟ್ರೋತ್ಪೊ ಫಾನ್, ಯಗ್ಜೇರ್, ಯೊಗ್ಬೆಹಾ, ಬೇತ್ನಿಮ್ರಾ,
ಅರ್ನೋನಿನ ತೀರದಲ್ಲಿರುವ ಅರೋ ಯೇರ್ ಮತ್ತು ಆ ಹಳ್ಳದ ಪಟ್ಟಣವು ಮೊದಲ್ಗೊಂಡು ಗಿಲ್ಯಾದಿನ ವರೆಗೂ ಒಂದು ಪಟ್ಟಣವಾದರೂ ನಮಗೆ ಅಸಾಧ್ಯವಾಗಿರಲಿಲ್ಲ; ನಮ್ಮ ದೇವರಾದ ಕರ್ತನು ಅವುಗಳನ್ನೆಲ್ಲಾ ನಮ್ಮ ಕೈಗೆ ಒಪ್ಪಿಸಿದನು.ಅಮ್ಮೋನಿಯರ ಮಕ್ಕಳ ದೇಶಕ್ಕೂ ಯಬ್ಬೋಕ್ ನದಿಯ ಯಾವ ದೊಂದು ಸ್ಥಳಕ್ಕೂ ಪರ್ವತ ಪಟ್ಟಣಗಳಿಗೂ ನಮ್ಮ ದೇವರಾದ ಕರ್ತನು ನಮಗೆ ಬೇಡವೆಂದ ಯಾವ ಸ್ಥಳಕ್ಕೂ ನೀನು ಮಾತ್ರ ಬರಲಿಲ್ಲ.
ಅರ್ನೋನ್ ನದೀ ತೀರದಲ್ಲಿರುವ ಅರೋಯೇರ್ ನದಿಯ ಮಧ್ಯಭಾಗ ದಲ್ಲಿರುವ ಪಟ್ಟಣವು ಮೊದಲುಗೊಂಡು ದಿಬೋನಿನ ವರೆಗೆ ಮೇದೆಬದ ಸಮನಾದ ಭೂಮಿಯೂ
ಅರ್ನೋನ್ ನದಿಯ ತೀರದ ಲ್ಲಿರುವ ಅರೋಯೇರ್ ನದಿಯ ಮಧ್ಯದಲ್ಲಿರುವ ಪಟ್ಟಣವು ಮೊದಲುಗೊಂಡು
ಯಗ್ಜೇರ್; ಗಿಲ್ಯಾದಿನ ಸಮಸ್ತ ಪಟ್ಟಣ ಗಳೂ ರಬ್ಬಾಕ್ಕೆ ಎದುರಾಗಿರುವ ಅರೋಯೆರಿನ ವರೆಗೂ ಇರುವ ಅಮ್ಮೋನಿನ ಮಕ್ಕಳ ಅರ್ಧ ದೇಶವು;
ಅರೋಯೇರಿನಲ್ಲಿರುವ ವರಿಗೂ ಸಿಪ್ಮೋತಿನಲ್ಲಿರುವವರಿಗೂ ಎಷ್ಟೆಮೋವದ ಲ್ಲಿರುವವರಿಗೂ
ಹೆಷ್ಬೋನಿನ ಹೊಲ ಗಳೂ, ಸಿಬ್ಮದ ದ್ರಾಕ್ಷೆಯೂ ನಿಸ್ಸಾರವಾಗಿವೆ; ಅನ್ಯ ಜನಗಳ ಪ್ರಭುಗಳು ಅದರ ಮುಖ್ಯವಾದ ಗಿಡಗಳನ್ನು ಮುರಿದುಹಾಕಿದ್ದಾರೆ; ಅವರು ಯಜ್ಜೇರಿನ ವರೆಗೂ ಬಂದರು; ಅಡವಿಯಲ್ಲಿ ಅವರು ಸಂಚರಿಸಿದರು. ಅವಳ ಕೊಂಬೆಗಳು ಚಾಚಲ್ಪಟ್ಟವು ಅವರು ಸಮುದ್ರದ ಮೇಲೆ ಹೋದರು.
ಆರೋಯೇರಿನ ಪಟ್ಟಣಗಳು ತಳ್ಳಿಹಾಕ ಲ್ಪಟ್ಟಿವೆ; ಅವು ಯಾರ ಹೆದರಿಕೆಯೂ ಇಲ್ಲದೆ ಅಲ್ಲಿ ಮಲಗುವ ಮಂದೆಗಳಿಗೆ ಸ್ಥಳವಾಗುವದು.