ಅವಳ ಗಂಡನು ಅವಳ ಸಂಗಡ ಬಹುರೀಮಿನ ವರೆಗೂ ಅಳುತ್ತಾ ಅವಳ ಹಿಂದೆ ಹೋದನು. ಆಗ ಅಬ್ನೇರನು ಅವನಿಗೆತಿರುಗಿ ಹೋಗು ಅಂದನು; ಅವನು ತಿರುಗಿ ಹೋದನು.
Cross references
ಅರಸನಾದ ದಾವೀದನು ಬಹುರೀಮಿನ ವರೆಗೂ ಬಂದಾಗ ಇಗೋ, ಸೌಲನ ಗೋತ್ರದವನಾದಂಥ ಗೇರನ ಮಗನಾದ ಶಿಮ್ಮಿಯೆಂಬ ಹೆಸರುಳ್ಳ ಒಬ್ಬ ಮನುಷ್ಯನು ಅಲ್ಲಿಂದ ಹೊರಟು ದೂಷಿಸುತ್ತಾ ನಡೆದು ಬಂದನು.
ಆದರೆ ಒಬ್ಬ ಹುಡುಗನು ಅವರನ್ನು ನೋಡಿ ಅಬ್ಷಾ ಲೋಮನಿಗೆ ತಿಳಿಸಿದನು. ಆದದರಿಂದ ಅವರಿಬ್ಬರು ಶೀಘ್ರವಾಗಿ ಹೋಗಿ ಬಹುರೀಮಿನಲ್ಲಿರುವ ಒಬ್ಬ ಮನುಷ್ಯನ ಮನೆಯಲ್ಲಿ ಪ್ರವೇಶಿಸಿ ಅವನ ಅಂಗಳ ದಲ್ಲಿರುವ ಬಾವಿಯಲ್ಲಿ ಇಳಿದರು.
ಇದಲ್ಲದೆ ಬಹುರೀಮಿನವನೂ ಬೆನ್ಯಾವಿಾನ್ಯನೂ ಗೇರನ ಮಗನಾದ ಶಿಮ್ಮಿಯು ತ್ವರೆಯಾಗಿ ಯೆಹೂದ ಜನರ ಸಂಗಡ ಅರಸನಾದ ದಾವೀದನನ್ನು ಎದುರು ಗೊಳ್ಳುವದಕ್ಕೆ ಬಂದನು.
ಅವನ ಸಂಗಡ ಸಾವಿರ ಮಂದಿ ಬೆನ್ಯಾವಿಾನ್ಯರಿದ್ದರು. ಸೌಲನ ಮನೆಯ ಸೇವಕ ನಾದ ಚೀಬನೂ ಅವನ ಸಂಗಡ ತನ್ನ ಹದಿನೈದು ಮಂದಿ ಕುಮಾರರೂ ತನ್ನ ಇಪ್ಪತ್ತು ಮಂದಿ ಸೇವಕರೂ ಯೊರ್ದನನ್ನು ದಾಟಿ ಅರಸನಿಗೆ ಎದುರಾಗಿ ಬಂದರು.
ಪಿತೋನ್ಯ ನಾದ ಬೆನಾಯನು, ನಹಲೇ ಗಾಷ್ ಊರಿನವನಾದ ಹಿದೈ ಅರಾಬಾದ ಅಬೀಅಲ್ಬೋನ್, ಬರ್ಹುಮ್ಯನಾದ ಅಜ್ಮಾವೇತನು, ಶಾಲ್ಬೋನ್ಯನಾದ ಎಲೆಯಖ್ಬಾ
ಇದಲ್ಲದೆ ನಾನು ಮಹನಯಿಮಿಗೆ ಹೋಗುವ ದಿನದಲ್ಲಿ ಘೋರವಾದ ಶಾಪದಿಂದ ನನ್ನನ್ನು ಶಪಿಸಿದ ಬಹುರೀಮಿನ ಬೆನ್ಯಾ ವಿಾನನಾದ ಗೇರನ ಮಗನಾಗಿರುವ ಶಿಮ್ಮಿಯು ನಿನ್ನ ಬಳಿಯಲ್ಲಿದ್ದಾನೆ. ಅವನು ಯೊರ್ದನಿನ ಬಳಿಯಲ್ಲಿ ನನ್ನನ್ನು ಎದುರುಗೊಳ್ಳಲು ಬಂದದರಿಂದ ನಾನು ನಿನ್ನನ್ನು ಕತ್ತಿಯಿಂದ ಕೊಲ್ಲಿಸುವದಿಲ್ಲವೆಂದು ಕರ್ತನ ಹೆಸರಿನಲ್ಲಿ ಆಣೆ ಇಟ್ಟೆನು.
ಕದಿಯಲ್ಪಟ್ಟ ನೀರುಗಳು ಸಿಹಿಯಾಗಿವೆ ರಹಸ್ಯ ದಲ್ಲಿ ತಿನ್ನುವ ರೊಟ್ಟಿಯು ರುಚಿಯಾಗಿದೆ ಎಂದು ಹೇಳುತ್ತಾಳೆ.ಆದರೆ ಸತ್ತವರು ಅಲ್ಲಿದ್ದಾರೆಂದೂ ಪಾತಾಳದ ಅಗಾಧಗಳಲ್ಲಿ ಅವಳ ಅಥಿತಿಗಳು ಇದ್ದಾ ರೆಂದೂ ಅವನಿಗೆ ತಿಳಿಯದು.