Home Bibles 2 ಸಮುವೇಲ 3:18 · ಕನ್ನಡ ಬೈಬಲ್
2 ಸಮುವೇಲ 3:18 · ಕನ್ನಡ ಬೈಬಲ್

ಆದರೆ ಈಗ ಅದನ್ನು ಮಾಡಿರಿ; ಯಾಕಂದರೆ--ನಾನು ನನ್ನ ಜನರಾದ ಇಸ್ರಾಯೇಲನ್ನು ಫಿಲಿಷ್ಟಿಯರ ವಶದಿಂದಲೂ ಅವರ ಎಲ್ಲಾ ಶತ್ರುಗಳ ವಶದಿಂದಲೂ ನನ್ನ ದಾಸನಾದ ದಾವೀದನ ಕೈಯಿಂದ ತಪ್ಪಿಸಿ ರಕ್ಷಿಸು ವೆನು ಎಂದು ಕರ್ತನು ದಾವೀದನ ವಿಷಯದಲ್ಲಿ ಹೇಳಿದ್ದಾನೆ ಅಂದನು.

Cross references

1 ಸಮುವೇಲ 9:16

ನಾಳೆ ಇಷ್ಟು ಹೊತ್ತಿಗೆ ಬೆನ್ಯಾ ವಿಾನನ ದೇಶದವನಾದ ಒಬ್ಬ ಮನುಷ್ಯನನ್ನು ನಿನ್ನ ಬಳಿಗೆ ಕಳುಹಿಸುವೆನು; ನೀನು ಅವನನ್ನು ನನ್ನ ಜನರಾದ ಇಸ್ರಾಯೇಲಿನ ಮೇಲೆ ನಾಯಕನಾಗಿರಲು ಅಭಿಷೇಕಿಸ ಬೇಕು; ಅವನು ನನ್ನ ಜನರನ್ನು ಫಿಲಿಷ್ಟಿಯರ ಕೈಯಿಂದ ತಪ್ಪಿಸಿ ರಕ್ಷಿಸುವನು; ನನ್ನ ಜನರ ಕೂಗು ನನ್ನ ಬಳಿಗೆ ಬಂದದರಿಂದ ಅವರನ್ನು ನೋಡಿದ್ದೇನೆ ಎಂಬದು.

1 ಸಮುವೇಲ 13:14

ಆದರೆ ಈಗ ನಿನ್ನ ರಾಜ್ಯವು ನಿಲ್ಲಲಾರದು. ಕರ್ತನು ನಿನಗೆ ಆಜ್ಞಾಪಿಸಿ ದ್ದನ್ನು ನೀನು ಕೈಕೊಳ್ಳದೆ ಹೋದದರಿಂದ ಆತನು ತನ್ನ ಹೃದಯಕ್ಕೆ ಅನುಸರಣೆಯಾದ ಒಬ್ಬ ಮನುಷ್ಯ ನನ್ನು ಹುಡುಕಿ ಅವನನ್ನು ತನ್ನ ಜನರ ಮೇಲೆ ನಾಯಕನನ್ನಾಗಿ ನೇಮಿಸಿದ್ದಾನೆ ಅಂದನು.

1 ಸಮುವೇಲ 15:28

ಆಗ ಸಮುವೇಲನು ಅವನಿಗೆನಿನ್ನ ಬಳಿಯಿಂದ ಇಸ್ರಾಯೇಲಿನ ರಾಜ್ಯವನ್ನು ಕರ್ತನು ಈ ಹೊತ್ತು ಕಿತ್ತು ನಿನಗಿಂತ ಒಳ್ಳೆಯವನಾಗಿರುವ ನಿನ್ನ ನೆರೆಯವನಿಗೆ ಅದನ್ನು ಕೊಟ್ಟನು.

1 ಸಮುವೇಲ 16:1

ಕರ್ತನು ಸಮುವೇಲನಿಗೆ--ಇಸ್ರಾಯೇ ಲಿನ ಅರಸನಾಗಿರದ ಹಾಗೆ ನಾನು ತಿರಸ್ಕರಿಸಿದ ಸೌಲನಿಗೋಸ್ಕರ ನೀನು ಎಷ್ಟರ ವರೆಗೆ ದುಃಖವುಳ್ಳವನಾಗಿರುವಿ? ನೀನು ನಿನ್ನ ಕೊಂಬನ್ನು ತೈಲದಿಂದ ತುಂಬಿಸಿಕೊಂಡು ಬಾ, ಬೇತ್ಲೆಹೇಮಿನ ವನಾದ ಇಷಯನ ಬಳಿಗೆ ನಿನ್ನನ್ನು ಕಳುಹಿಸುವೆನು; ಯಾಕಂದರೆ ನಾನು ಅವನ ಮಕ್ಕಳಲ್ಲಿ ಒಬ್ಬನನ್ನು ಅರಸನನ್ನಾಗಿ ಆದುಕೊಂಡೆನು ಅಂದನು.

1 ಸಮುವೇಲ 16:12

ಆಗ ಇಷಯನು ಅವನನ್ನು ಕರೇಕಳುಹಿಸಿದನು. ಅವನು ಕೆಂಪಾದ ಮೈಬಣ್ಣದವನಾಗಿಯೂ ಸುಂದರ ಮುಖವುಳ್ಳವ ನಾಗಿಯೂ ನೋಟಕ್ಕೆ ಚೆಲುವಿಕೆಯುಳ್ಳವನಾಗಿಯೂ ಇದ್ದನು. ಆಗ ಕರ್ತನು ಸಮುವೇಲನಿಗೆ--ನೀನೆದ್ದು ಇವನನ್ನು ಅಭಿಷೇಕಿಸು; ಇವನೇ ಅವನು ಅಂದನು.

2 ಸಮುವೇಲ 3:9

ನಾನು ಸೌಲನ ಮನೆಯಿಂದ ರಾಜ್ಯವನ್ನು ತಪ್ಪಿಸಿ ಕರ್ತನು ದಾವೀದನಿಗೆ ಆಣೆ ಇಟ್ಟ ಪ್ರಕಾರವೇ ದಾವೀದನ ಸಿಂಹಾಸನವನ್ನು ದಾನಿನಿಂದ ಬೇರ್ಷೆಬದ ವರೆಗೂ ಇರುವ ಇಸ್ರಾಯೇಲಿನ ಮೇಲೆಯೂ ಯೆಹೂದದ ಮೇಲೆಯೂ ಸ್ಥಿರಪಡಿಸುವ ಹಾಗೆ

ಕೀರ್ತನೆಗಳು 89:3

ನಾನು ಆದು ಕೊಂಡವನೊಂದಿಗೆ ಒಡಂಬಡಿಕೆ ಮಾಡಿದ್ದೇನೆ; ನನ್ನ ಸೇವಕನಾದ ದಾವೀದನಿಗೆ ಆಣೆ ಇಟ್ಟು ಹೇಳಿದ್ದೇ ನಂದರೆ--

ಕೀರ್ತನೆಗಳು 89:19

ಆಗ ದರ್ಶನದಲ್ಲಿ ನಿನ್ನ ಪರಿಶುದ್ಧನ ಸಂಗಡ ಮಾತಾಡಿ ಹೇಳಿದ್ದೇನಂದರೆ --ಪರಾಕ್ರಮಶಾಲಿಯ ಮೇಲೆ ಸಹಾಯವನ್ನು ಇಟ್ಟಿ ದ್ದೇನೆ. ಆಯಲ್ಪಟ್ಟವನನ್ನು ಜನರೊಳಗಿಂದ ಉನ್ನತಕ್ಕೇರಿ ಸಿದ್ದೇನೆ.

ಕೀರ್ತನೆಗಳು 132:17

ಅಲ್ಲಿ ದಾವೀದನಿಗೆ ಕೊಂಬನ್ನು ಮೊಳಿಸುವೆನು; ನನ್ನ ಅಭಿಷಿಕ್ತನಿಗೆ ದೀಪವನ್ನು ಸಿದ್ಧಮಾಡಿದ್ದೇನೆ.ಅವನ ಶತ್ರುಗಳಿಗೆ ನಾಚಿಕೆಯನ್ನು ಹೊದಿಸುವೆನು; ಆದರೆ ಅವನ ಮೇಲೆ ಅವನ ಕಿರೀಟವು ಶೋಭಿಸುವದು ಎಂದು ಹೇಳಿದ್ದಾನೆ.

ಯೋಹಾನ 12:42

ಆದಾಗ್ಯೂ ಮುಖ್ಯಾಧಿಕಾರಿಗಳಲ್ಲಿ ಅನೇಕರು ಆತನ ಮೇಲೆ ನಂಬಿಕೆಯಿಟ್ಟರು. ಆದರೆ ಫರಿಸಾಯರ ನಿಮಿತ್ತ ತಾವು ಸಭಾಮಂದಿರದಿಂದ ಬಹಿಷ್ಕರಿಸಲ್ಪಡಬಾರದೆಂದು ಅವರು ಆತನನ್ನು ಒಪ್ಪಿ ಕೊಳ್ಳಲಿಲ್ಲ.

Interlinear

Choose Theme