Home Bibles 2 ಸಮುವೇಲ 3:35 · ಕನ್ನಡ ಬೈಬಲ್
2 ಸಮುವೇಲ 3:35 · ಕನ್ನಡ ಬೈಬಲ್

ಇನ್ನೂ ಹೊತ್ತಿರು ವಾಗಲೇ ಜನರೆಲ್ಲರು ಬಂದು-- ಊಟಮಾಡು ಎಂದು ದಾವೀದನಿಗೆ ಹೇಳಿದಾಗ ದಾವೀದನು--ಸೂರ್ಯನು ಅಸ್ತಮಿಸುವದಕ್ಕಿಂತ ಮುಂಚೆ ನಾನು ರೊಟ್ಟಿಯನ್ನಾ ದರೂ ಮತ್ತೇನಾದರೂ ರುಚಿ ನೋಡಿದರೆ ದೇವರು ನನಗೆ ಹಾಗೇ ಮಾಡಲಿ, ಅಧಿಕವಾಗಿಯೂ ಮಾಡ ಲೆಂದು ಆಣೆಇಟ್ಟು ಹೇಳಿದನು.

Cross references

ನ್ಯಾಯಾಧಿಪತಿಗಳು 20:23

ಅದಕ್ಕೆ ಕರ್ತನು--ಅವನ ಮೇಲೆ ಹೋಗಿರಿ ಅಂದನು). ಎರಡನೇ ದಿನದಲ್ಲಿ ಇಸ್ರಾಯೇಲ್‌ ಮನು ಷ್ಯರು ಬೆನ್ಯಾವಿಾನನ ಮಕ್ಕಳ ಬಳಿಗೆ ಬಂದರು.

ನ್ಯಾಯಾಧಿಪತಿಗಳು 20:26

ಆಗ ಇಸ್ರಾಯೇಲ್‌ ಮಕ್ಕಳೆಲ್ಲರೂ ಸಮಸ್ತ ಜನರೂ ಹೊರಟು ದೇವರ ಮನೆಗೆ ಬಂದು ಅತ್ತು ಅಲ್ಲಿ ಕರ್ತನ ಮುಂದೆ ಕುಳಿತುಕೊಂಡು ಆ ಸಾಯಂಕಾಲದ ವರೆಗೆ ಉಪವಾಸವಾಗಿದ್ದು ಕರ್ತ ನಿಗೆ ದಹನಬಲಿಗಳನ್ನೂ ಸಮಾಧಾನದಬಲಿಗಳನ್ನೂ ಕರ್ತನ ಮುಂದೆ ಅರ್ಪಿಸಿದರು. ಯಾಕಂದರೆ ಆ ದಿವಸಗಳಲ್ಲಿ ದೇವರ ಒಡಂಬಡಿಕೆಯ ಮಂಜೂಷವು ಅಲ್ಲಿದ್ದದರಿಂದಲೂ

ರೂತ 1:17

ನೀನು ಎಲ್ಲಿ ಸಾಯುತ್ತೀಯೋ ಅಲ್ಲಿಯೇ ನಾನು ಸತ್ತುಹೂಣಲ್ಪಡುವೆನು. ಮರಣವು ಮಾತ್ರ ನಮ್ಮನ್ನು ಅಗಲಿಸದ ಹೊರತು ನಾನು ಅಗಲಿದರೆ ಕರ್ತನು ನನಗೆ ಬೇಕಾದದ್ದನ್ನು ಮಾಡಲಿ ಅಂದಳು.

1 ಸಮುವೇಲ 3:17

ಅದಕ್ಕವನು--ಇಗೋ, ಇದ್ದೇನೆ ಅಂದನು. ಏಲಿ ಯು ಅವನಿಗೆ--ಕರ್ತನು ನಿನಗೆ ಹೇಳಿದ ಮಾತೇನು? ನನಗೆ ಅದನ್ನು ಮರೆಮಾಡಬೇಡ. ಕರ್ತನು ನಿನಗೆ ಹೇಳಿದ ಸಕಲ ವಾರ್ತೆಗಳಲ್ಲಿ ನೀನು ಯಾವದನ್ನಾದರೂ ನನಗೆ ಮರೆಮಾಡಿದರೆ ದೇವರು ನಿನಗೆ ಅದಕ್ಕಿಂತ ಅಧಿಕವಾಗಿ ಮಾಡಲಿ ಅಂದನು.

2 ಸಮುವೇಲ 1:12

ಸೌಲನೂ ಅವನ ಮಗನಾದ ಯೋನಾತಾನನೂ ಇಸ್ರಾಯೇಲಿನ ಮನೆಯವರೂ ಕರ್ತನ ಜನರೂ ಕತ್ತಿಯಿಂದ ಬಿದ್ದ ಕಾರಣ ಅವರಿ ಗೋಸ್ಕರ ಗೋಳಾಡಿ ಅತ್ತು ಸಾಯಂಕಾಲದ ವರೆಗೂ ಉಪವಾಸವಾಗಿದ್ದರು.

2 ಸಮುವೇಲ 3:9

ನಾನು ಸೌಲನ ಮನೆಯಿಂದ ರಾಜ್ಯವನ್ನು ತಪ್ಪಿಸಿ ಕರ್ತನು ದಾವೀದನಿಗೆ ಆಣೆ ಇಟ್ಟ ಪ್ರಕಾರವೇ ದಾವೀದನ ಸಿಂಹಾಸನವನ್ನು ದಾನಿನಿಂದ ಬೇರ್ಷೆಬದ ವರೆಗೂ ಇರುವ ಇಸ್ರಾಯೇಲಿನ ಮೇಲೆಯೂ ಯೆಹೂದದ ಮೇಲೆಯೂ ಸ್ಥಿರಪಡಿಸುವ ಹಾಗೆ

2 ಸಮುವೇಲ 12:17

ಅವನನ್ನು ಎಬ್ಬಿಸುವದಕ್ಕೆ ಅವನ ಮನೆಯ ಹಿರಿಯರು ಅವನ ಬಳಿಗೆ ಬಂದರು; ಆದರೆ ಅವನಿಗೆ ಮನಸ್ಸಿಲ್ಲದೆ ಇತ್ತು. ಅವರ ಸಂಗಡ ಭೋಜನ ಮಾಡದೆ ಹೋದನು.

1 ದಿನವೃತ್ತಾಂತ 10:12

ಅವರಲ್ಲಿರುವ ಸಮಸ್ತ ಪರಾಕ್ರಮಶಾಲಿಗಳು ಎದ್ದು ಸೌಲನ ಶರೀರವನ್ನೂ ಅವನ ಕುಮಾರರ ಶರೀರಗಳನ್ನು ತಕ್ಕೊಂಡು ಯಾಬೇಷಿಗೆ ತಂದು ಯಾಬೇಷಿನಲ್ಲಿರುವ ಒಂದು ಏಲಾ ಮರದ ಕೆಳಗೆ ಅವರ ಎಲುಬುಗಳನ್ನು ಹೂಣಿಟ್ಟು ಏಳುದಿವಸ ಉಪವಾಸ ಮಾಡಿದರು.

ಯೆರೆಮಿಯ 16:7

ಯಾವನು ಕರ್ತನಲ್ಲಿ ಭರವಸವಿಟ್ಟಿರುವನೋ ಯಾವನಿಗೆ ಕರ್ತನು ನಿರೀಕ್ಷೆ ಯಾಗಿದ್ದಾನೋ ಆ ಮನುಷ್ಯನು ಧನ್ಯನು.

ಯೆಹೆಜ್ಕೇಲ 24:17

ವ್ಯಸನದಿಂದ ಸತ್ತವರಿಗಾಗಿ ಅರಚಬೇಡ, ಗೋಳಾಡ ಬೇಡ ನೀನು ರುಮಾಲನ್ನು ಕಟ್ಟಿಕೊಂಡು ಕಾಲುಗಳಿಗೆ ಜೋಡುಗಳನ್ನು ಮೆಟ್ಟಿಕೋ; ತುಟಿಗಳನ್ನು ಮುಚ್ಚಿಕೊಳ್ಳ ಬೇಡ; ಮನುಷ್ಯರ ರೊಟ್ಟಿಯನ್ನು ತಿನ್ನಬೇಡ.

ಯೆಹೆಜ್ಕೇಲ 24:22

ನಾನು ಮಾಡಿದ ಹಾಗೆ ನೀವು ಮಾಡುವಿರಿ; ನಿಮ್ಮ ತುಟಿಗಳನ್ನು ಮುಚ್ಚಿಕೊಳ್ಳ ಬಾರದು ಅವರ ರೊಟ್ಟಿಯನ್ನೂ ತಿನ್ನಬಾರದು.

Interlinear

Choose Theme