ಸೌಲನ ಮನೆಗೂ ದಾವೀದನ ಮನೆಗೂ ಯುದ್ಧವುನಡೆಯುತ್ತಿರುವಾಗ ಏನಾಯಿತಂದರೆ, ಅಬ್ನೇ ರನು ಸೌಲನ ಮನೆಗಾಗಿ ತನ್ನನ್ನು ಬಲಪಡಿಸಿ ಕೊಂಡನು.
Cross references
ಅಹೀಮಾಚನ ಕುಮಾರ್ತೆಯಾದ ಅಹೀನೋವಮಳು ಸೌಲನ ಹೆಂಡತಿಯಾಗಿದ್ದಳು. ಸೌಲನ ಚಿಕ್ಕಪ್ಪನಾದ ನೇರನ ಮಗನಾದ ಅಬ್ನೇರನೆಂಬವನು ಅವನ ಸೈನ್ಯಾಧಿಪತಿ ಯಾಗಿದ್ದನು.
ಆದರೆ ಸೌಲನ ಸೈನ್ಯಾಧಿಪತಿಯಾದ ನೇರನ ಮಗ ನಾಗಿರುವ ಅಬ್ನೇರನು ಸೌಲನ ಮಗನಾದ ಈಷ್ಬೋ ಶೆತನನ್ನು ಮಹನಯಿಮಿಗೆ ಕರಕೊಂಡು ಹೋಗಿ
ಸೌಲನ ಮನೆಗೂ ದಾವೀದನ ಮನೆಗೂ ಬಹು ದಿವಸಗಳು ಯುದ್ಧವುನಡೆಯಿತು. ದಾವೀದನು ಬಲವಾಗುತ್ತಾ ಬಂದನು. ಸೌಲನ ಮನೆ ಯವರು ಬಲಹೀನರಾಗುತ್ತಾ ಹೋದರು.
ಆಗ ಯೇಹುವೂ ರೆಕಾಬನ ಮಗನಾದ ಯೆಹೋನಾದಾಬನೂ ಬಾಳನ ಮನೆಯಲ್ಲಿ ಪ್ರವೇಶಿಸಿ ದರು. ಅವರು ಬಾಳನನ್ನು ಆರಾಧಿಸುವವರ ಹೊರತು ಅವರ ಸಂಗಡ ಕರ್ತನ ಸೇವಕರಲ್ಲಿ ಒಬ್ಬನಾದರೂ ಇರದ ಹಾಗೆ ಶೋಧಿಸಿ ನೋಡಿರಿ ಎಂದು ಬಾಳನನ್ನು ಆರಾಧಿಸುವವರಿಗೆ ಹೇಳಿದರು.
ನೀನು ಹೋದರೆ ಹೋಗು ಅದನ್ನು ಮಾಡು; ಯುದ್ಧಕ್ಕೆ ಬಲಗೊಳ್ಳು. ದೇವರು ಶತ್ರುವಿನ ಮುಂದೆ ನಿನ್ನನ್ನು ಬೀಳಮಾಡುವನು; ಯಾಕಂದರೆ ಸಹಾಯ ಕೊಡುವದಕ್ಕೂ ಬೀಳಮಾಡುವದಕ್ಕೂ ದೇವರಿಗೆ ಶಕ್ತಿ ಉಂಟು ಅಂದನು.
ಕರ್ತನಿಗೆ ವಿರೋಧವಾಗಿ ಯಾವ ಜ್ಞಾನವೂ ವಿವೇಕವೂ ಆಲೋಚನೆಯೂ ಇಲ್ಲ.ಯುದ್ಧದ ದಿನಕ್ಕಾಗಿ ಕುದುರೆಯು ಸಿದ್ಧವಾಗಿರುತ್ತದೆ; ಭದ್ರತೆಯು ಕರ್ತನಿಂದಲೇ.
ಓ ಪ್ರಜೆಗಳೇ, ನೀವು ಕೂಡಿಕೊಳ್ಳಿರಿ; ನೀವು ಒಡೆದು ಚೂರುಚೂರಾಗುವಿರಿ; ಎಲ್ಲಾ ದೂರ ದೇಶದ ವರೇ, ಕಿವಿಗೊಡಿರಿ, ನಡುಕಟ್ಟಿಕೊಳ್ಳಿರಿ ನೀವು ಒಡೆದು ಚೂರು ಚೂರಾಗುವಿರಿ; ನಡುಕಟ್ಟಿಕೊಳ್ಳಿರಿ ನೀವು ಒಡೆದು ಚೂರು ಚೂರಾಗುವಿರಿ.
ಜನಾಂಗಗಳಲ್ಲಿ ಇದನ್ನು ಘೋಷಿಸಿರಿ; ಯುದ್ಧವನ್ನು ಸಿದ್ಧಮಾಡಿರಿ, ಶೂರರನ್ನು ಎಬ್ಬಿಸಿರಿ; ಯುದ್ಧಸ್ಥರೆಲ್ಲರು ಸವಿಾಪಕ್ಕೆ ಬರಲಿ.
ನನ್ನ ಸಂಗಡ ಇರದ ವನು ನನಗೆ ವಿರೋಧವಾಗಿದ್ದಾನೆ; ಮತ್ತು ನನ್ನ ಸಂಗಡ ಕೂಡಿಸದವನು ಚದರಿಸುವವನಾಗಿದ್ದಾನೆ ಎಂದು ಹೇಳಿದನು.