ಆಗ ದಾವೀದನು ಬೇರೋತಿನ ಮಗನಾ ಗಿರುವ ರಿಮ್ಮೋನನ ಮಕ್ಕಳಾದ ರೇಕಾಬಿಗೂ ಅವನ ಸಹೋದರನಾದ ಬಾಣನಿಗೂ ಪ್ರತ್ಯುತ್ತರವಾಗಿ--ಎಲ್ಲಾ ಇಕ್ಕಟ್ಟಿನಿಂದ ನನ್ನ ಪ್ರಾಣವನ್ನು ವಿಮೋಚಿಸಿದ ಕರ್ತನ ಜೀವದಾಣೆ, ತನ್ನ ಕಣ್ಣಿಗೆ ಸುವರ್ತಮಾನವನ್ನು ತಂದವನು ಎಂದು ಕಾಣಿಸಿಕೊಂಡವನಾಗಿ ನಾನು ತನ್ನ ವರ್ತಮಾನಕ್ಕೋಸ್ಕರ ಬಹುಮಾನವನ್ನು ಕೊಡು ವೆನೆಂದು ನೆನಸಿ
Cross references
ಎಲ್ಲಾ ಕೇಡಿನಿಂದ ನನ್ನನ್ನು ತಪ್ಪಿಸಿದ ದೂತನು ಈ ಹುಡುಗರನ್ನು ಆಶೀರ್ವದಿಸಲಿ. ನನ್ನ ಹೆಸರಿನಿಂದ ನನ್ನ ತಂದೆಗಳಾದ ಅಬ್ರಹಾಮ್ ಇಸಾಕ್ ಅವರ ಹೆಸರಿನಿಂದ ಅವರು ಕರೆಯಲ್ಪಡಲಿ. ಅವರು ಭೂಮಧ್ಯದಲ್ಲಿ ಸಮೂಹವಾಗಿ ಹೆಚ್ಚಲಿ ಅಂದನು.
ಇಗೋ, ಈ ದಿನ ನಿನ್ನ ಪ್ರಾಣವು ನನ್ನ ದೃಷ್ಟಿಗೆ ಹೇಗೆ ದೊಡ್ಡದಾಗಿತ್ತೋ ಹಾಗೆಯೇ ನನ್ನ ಪ್ರಾಣವು ಕರ್ತನ ದೃಷ್ಟಿಗೆ ದೊಡ್ಡದಾಗಿರಲಿ. ಆತನು ನನ್ನನ್ನು ಎಲ್ಲಾ ಸಂಕಟದಿಂದ ತಪ್ಪಿಸಿಬಿಡಲಿ ಅಂದನು.ಆಗ ಸೌಲನು ದಾವೀದನಿಗೆ--ನನ್ನ ಮಗನಾದ ದಾವೀದನೇ, ನೀನು ಆಶೀರ್ವದಿಸಲ್ಪ ಡುವಿ; ನೀನು ಮಹತ್ಕಾರ್ಯಗಳನ್ನು ಮಾಡುವಿ, ಗೆದ್ದೇ ಗೆಲ್ಲುವಿ ಅಂದನು. ಹಾಗೆಯೇ ದಾವೀದನು ತನ್ನ ದಾರಿಹಿಡಿದು ಹೋದನು; ಸೌಲನು ತನ್ನ ಸ್ಥಳಕ್ಕೆ ಹಿಂತಿರುಗಿ ಹೋದನು.
ನಿನ್ನ ಮಗನಾದ ಸೊಲೊಮೋನನು ನನ್ನ ತರುವಾಯ ಆಳುವನೆಂದೂ
ಸತ್ಯದ ದೇವರಾದ ಓ ಕರ್ತನೇ, ನನ್ನ ಆತ್ಮವನ್ನು ನಿನ್ನ ಕೈಗೆ ಒಪ್ಪಿಸುತ್ತೇನೆ; ನೀನು ನನ್ನನ್ನು ವಿಮೋಚನೆ ಮಾಡಿದ್ದೀ.
ಈ ಬಡವನು ಮೊರೆ ಯಿಡಲು; ಕರ್ತನು ಅದನ್ನು ಕೇಳಿ ಅವನ ಎಲ್ಲಾ ಇಕ್ಕಟ್ಟುಗಳೊಳಗಿಂದ ಅವನನ್ನು ರಕ್ಷಿಸಿದನು.
ನೀತಿವಂತರು ಕೂಗು ತ್ತಾರೆ; ಆಗ ಕರ್ತನು ಕೇಳಿ ಅವರ ಎಲ್ಲಾ ಇಕ್ಕಟ್ಟುಗಳೊಳಗಿಂದ ಅವರನ್ನು ಬಿಡಿಸುತ್ತಾನೆ.
ಕರ್ತನು ತನ್ನ ಸೇವಕರ ಪ್ರಾಣವನ್ನು ವಿಮೋಚಿಸುತ್ತಾನೆ; ಆತನಲ್ಲಿ ಭರವಸವಿಡುವವರು ಹಾಳಾಗುವದಿಲ್ಲ.
ನಾನು ನಿನ್ನನ್ನು ಕೀರ್ತಿಸುವಾಗ ನನ್ನ ತುಟಿಗಳೂ ನೀನು ವಿಮೋಚಿಸಿದ ನನ್ನ ಪ್ರಾಣವೂ ಉತ್ಸಾಹ ಧ್ವನಿಗೈಯುವವು.ನನ್ನ ನಾಲಿಗೆಯು ಸಹ ದಿನವೆಲ್ಲಾ ನಿನ್ನ ನೀತಿಯನ್ನು ಮಾತನಾಡುವದು; ನನಗೆ ಕೇಡನ್ನು ಹುಡುಕುವವರು ನಾಚಿಕೊಂಡು ಲಜ್ಜೆಪಡುತ್ತಾರೆ.
ನಿನ್ನ ಜೀವವನ್ನು ನಾಶದೊಳಗಿಂದ ವಿಮೋ ಚಿಸಿ ಪ್ರೀತಿ ಕೃಪೆಯನ್ನೂ ಅಂತಃಕರಣಗಳನ್ನೂ ನಿನಗೆ ಕಿರೀಟವಾಗಿ ಇಟ್ಟು
ವೈರಿಯ ಕೈಯೊಳಗಿಂದ ಅವರನ್ನು ರಕ್ಷಿಸಿ, ಶತ್ರು ವಿನ ಕೈಯಿಂದ ಅವರನ್ನು ಬಿಡುಗಡೆ ಮಾಡಿದನು.
ಕರ್ತನು ವಿಮೋಚಿಸಿ ದವರು ಹಾಗೆಯೇ ಹೇಳಲಿ; ಆತನು ವೈರಿಯ ಕೈಯಿಂದ ಬಿಡುಗಡೆ ಮಾಡಿ,
ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸಾರಲ್ಪಡುವದು ಸಂಪೂರ್ಣವಾಗಿ ಗ್ರಹಿಕೆ ಯಾಗುವಂತೆಯೂ ಅನ್ಯಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು; ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು.