Home Bibles 2 ಸಮುವೇಲ 5:1 · ಕನ್ನಡ ಬೈಬಲ್
2 ಸಮುವೇಲ 5:1 · ಕನ್ನಡ ಬೈಬಲ್

ಇದಾದ ಮೇಲೆ ಇಸ್ರಾಯೇಲ್‌ ಗೋತ್ರ ಗಳೆಲ್ಲಾ ಹೆಬ್ರೋನಿನಲ್ಲಿದ್ದ ದಾವೀದನ ಬಳಿಗೆ ಬಂದು--ಇಗೋ, ನಾವು ನಿನ್ನ ಎಲುಬೂ ನಿನ್ನ ಮಾಂಸವೂ ಆಗಿದ್ದೇವೆ.

Cross references

ಆದಿಕಾಂಡ 29:14

ಆಗ ಲಾಬಾನನು ಅವನಿಗೆ--ನಿಶ್ಚಯವಾಗಿ ನೀನು ನನ್ನ ಎಲುಬೂ ಮಾಂಸವೂ ಆಗಿದ್ದೀ ಅಂದನು. ಇದಲ್ಲದೆ ಯಾಕೋಬನು ಅವನ ಸಂಗಡ ಒಂದು ತಿಂಗಳು ವಾಸವಾಗಿದ್ದನು.

ದ್ವಿತೀಯೋಪದೇಶಕಾಂಡ 17:15

ಹೇಗಾ ದರೂ ನಿನ್ನ ದೇವರಾದ ಕರ್ತನು ಆದುಕೊಳ್ಳು ವವನನ್ನು ನಿನಗೆ ಅರಸನನ್ನಾಗಿ ಇಟ್ಟು ಕೊಳ್ಳಬೇಕು; ನಿನ್ನ ಸಹೋದರರಲ್ಲಿಂದ ಒಬ್ಬನನ್ನು ನಿನಗೆ ಅರಸನ ನ್ನಾಗಿ ಇಟ್ಟುಕೊಳ್ಳಬೇಕು; ನಿನ್ನ ಸಹೋದರನಲ್ಲದ ಅನ್ಯನಾದ ಮನುಷ್ಯನನ್ನು ನಿನ್ನ ಮೇಲೆ ಇಟ್ಟು ಕೊಳ್ಳಬಾರದು.

ನ್ಯಾಯಾಧಿಪತಿಗಳು 9:2

ನೀವು ದಯಮಾಡಿ ಶೆಕೆಮಿನ ಜನರೆಲ್ಲರು ಕೇಳುವ ಹಾಗೆ ಮಾತನಾಡ ಬೇಕಾದದ್ದೇನಂದರೆ -- ಯೆರುಬ್ಬಾಳನ ಮಕ್ಕಳಾದ ಎಪ್ಪತ್ತು ಮಂದಿಯು ನಿಮ್ಮನ್ನು ಆಳುವದು ಒಳ್ಳೇದೋ? ಒಬ್ಬನು ಆಳುವದು ಒಳ್ಳೇದೋ? ನಾನು ನಿಮ್ಮ ಎಲುಬೂ ನಿಮ್ಮ ಮಾಂಸವೂ ಆಗಿದ್ದೇನೆಂದು ಜ್ಞಾಪಕ ಮಾಡಿಕೊಳ್ಳಿರಿ ಅಂದನು.

2 ಸಮುವೇಲ 2:32

ಅವರು ಅಸಾಹೇಲನನ್ನು ಎತ್ತಿ ಕೊಂಡು ಬೇತ್ಲೆಹೇಮಿನಲ್ಲಿರುವ ಅವನ ತಂದೆಯ ಸಮಾಧಿಯಲ್ಲಿ ಹೂಣಿಟ್ಟರು. ಯೋವಾಬನೂ ಅವನ ಜನರೂ ರಾತ್ರಿಯೆಲ್ಲಾ ನಡೆದು ಉದಯವಾದಾಗ ಹೆಬ್ರೋನಿಗೆ ಬಂದರು.

2 ಸಮುವೇಲ 19:13

ಇದಲ್ಲದೆ ನೀವು ಅಮಾಸನಿಗೆ--ನೀನು ನನ್ನ ಎಲುಬೂ ನನ್ನ ಮಾಂಸವೂ ಅಲ್ಲವೋ? ನೀನು ಯೋವಾಬನಿಗೆ ಬದಲಾಗಿ ಯಾವಾಗಲೂ ನನ್ನ ಮುಂದೆ ಸೈನ್ಯದ ಪ್ರಧಾನನಾಗಿರದೆ ಹೋದರೆ ದೇವರು ನನಗೆ ಹಾಗೆಯೇ ಮಾಡಲಿ ಎಂದು ಹೇಳಿರಿ ಅಂದನು.

2 ಸಮುವೇಲ 19:14

ಹಾಗೆಯೇ ಅವನು ಸಕಲ ಯೆಹೂದ ಜನರ ಹೃದಯವನ್ನು ಒಬ್ಬನ ಹೃದಯದ ಹಾಗೆ ಬೊಗ್ಗಿಸಿ ದ್ದರಿಂದ ಅವರು ಅರಸನಿಗೆ--ನೀನೂ ನಿನ್ನ ಎಲ್ಲಾ ಸೇವಕರೂ ತಿರಿಗಿ ಬನ್ನಿರಿ ಎಂದು ಹೇಳಿ ಕಳುಹಿಸಿದರು.

1 ದಿನವೃತ್ತಾಂತ 11:1

ಇಸ್ರಾಯೇಲ್ಯರೆಲ್ಲರು ಹೆಬ್ರೋನಿನಲ್ಲಿದ್ದ ದಾವೀದನ ಬಳಿಗೆ ಕೂಡಿಬಂದು ಹೇಳಿ ದ್ದೇನಂದರೆ--ಇಗೋ, ನಾವು ನಿನ್ನ ಎಲುಬೂ ನಿನ್ನ ಮಾಂಸವೂ ಆಗಿದ್ದೇವೆ.

1 ದಿನವೃತ್ತಾಂತ 12:23

ಕರ್ತನ ವಾಕ್ಯದ ಪ್ರಕಾರ ಸೌಲನ ರಾಜ್ಯವನ್ನು ದಾವೀದನ ಕಡೆಗೆ ತಿರುಗಿಸುವದಕ್ಕೆ ಹೆಬ್ರೋನಿನಲ್ಲಿದ್ದ ದಾವೀದನ ಬಳಿಗೆ ಯುದ್ಧಕ್ಕೆ ಆಯುಧಗಳನ್ನು ಧರಿಸಿ ಕೊಂಡು ಬಂದ ದಂಡುಗಳ ಲೆಕ್ಕವೇನಂದರೆ --

1 ದಿನವೃತ್ತಾಂತ 12:24

ಖೇಡ್ಯವನ್ನೂ ಭಲ್ಲೆಯನ್ನೂ ಹಿಡುಕೊಂಡು ಯುದ್ಧಕ್ಕೆ ಸಿದ್ಧರಾದ ಯೆಹೂದನ ಮಕ್ಕಳು ಆರು ಸಾವಿರದ ಎಂಟುನೂರು ಮಂದಿ.

ಎಫೆಸದವರಿಗೆ 5:30

ನಾವು ಆತನ ದೇಹದ ಅಂಗಗಳೂ ಮಾಂಸವೂ ಎಲುಬುಗಳೂ ಆಗಿದ್ದೇವೆ.

ಹೆಬ್ರಿಯರಿಗೆ 2:14

ಇದಲ್ಲದೆ ಮಕ್ಕಳು ರಕ್ತಮಾಂಸಗಳಲ್ಲಿ ಪಾಲುಗಾರರಾದದರಿಂದ ಆತನು ಸಹ ಅವರಂತೆಯೇ ಆದನು; ತನ್ನ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ನಾಶ ಮಾಡುವದಕ್ಕೂ

Interlinear

Choose Theme