Home Bibles 2 ಸಮುವೇಲ 5:3 · ಕನ್ನಡ ಬೈಬಲ್
2 ಸಮುವೇಲ 5:3 · ಕನ್ನಡ ಬೈಬಲ್

ಹಾಗೆಯೇ ಇಸ್ರಾಯೇಲಿನ ಹಿರಿಯರೆಲ್ಲರೂ ಹೆಬ್ರೋನಿನಲ್ಲಿರುವ ಅರಸನ ಬಳಿಗೆ ಬಂದಾಗ ಅರಸ ನಾದ ದಾವೀದನು ಹೆಬ್ರೋನಿನಲ್ಲಿ ಕರ್ತನ ಮುಂದೆ ಅವರ ಸಂಗಡ ಒಡಂಬಡಿಕೆಯನ್ನು ಮಾಡಿದನು. ಅವರು ದಾವೀದನನ್ನು ಇಸ್ರಾಯೇಲಿನ ಮೇಲೆ ಅರಸ ನಾಗಿರಲು ಅಭಿಷೇಕಮಾಡಿದರು.

Cross references

ನಿರ್ಗಮಕಾಂಡ 3:16

ಆತನು--ನೀನು ಹೋಗಿ ಇಸ್ರಾಯೇಲ್‌ ಹಿರಿಯ ರನ್ನು ಕೂಡಿಸಿ ಅವರಿಗೆ--ನಿಮ್ಮ ಪಿತೃಗಳ ದೇವರೂ ಅಬ್ರಹಾಮನ ದೇವರೂ ಇಸಾಕನ ದೇವರೂ ಯಾಕೋಬನ ದೇವರೂ ಆಗಿರುವ ಕರ್ತನು ನನಗೆ ಕಾಣಿಸಿಕೊಂಡು--ನಿಮ್ಮನ್ನೂ ಐಗುಪ್ತದಲ್ಲಿ ನಿಮಗೆ ಮಾಡಿದ್ದನ್ನೂ ನಿಶ್ಚಯವಾಗಿ ನಾನು ನೋಡಿದ್ದೇನೆ.

ನ್ಯಾಯಾಧಿಪತಿಗಳು 11:11

ಆಗ ಯೆಫ್ತಾ ಹನು ಗಿಲ್ಯಾದಿನ ಹಿರಿಯರ ಸಂಗಡ ಹೋದನು. ಆಗ ಜನರು ಅವನನ್ನು ತಮ್ಮ ಮೇಲೆ ನಾಯಕನ ನ್ನಾಗಿಯೂ ಅಧಿಪತಿಯನ್ನಾಗಿಯೂ ಇಟ್ಟುಕೊಂಡರು. ಯೆಫ್ತಾಹನು ತನ್ನ ಮಾತುಗಳನ್ನೆಲ್ಲಾ ಮಿಚ್ಪೆಯಲ್ಲಿ ಕರ್ತನ ಮುಂದೆ ಹೇಳಿದನು.

1 ಸಮುವೇಲ 11:15

ಹಾಗೆಯೇ ಜನರೆಲ್ಲರು ಗಿಲ್ಗಾಲಿಗೆ ಹೋಗಿ ಆ ಸ್ಥಳದಲ್ಲಿ ಕರ್ತನ ಮುಂದೆ ಸೌಲನನ್ನು ಅರಸನನ್ನಾಗಿ ಮಾಡಿ ಕರ್ತನಿಗೆ ಸಮಾ ಧಾನದ ಬಲಿಗಳನ್ನು ಅರ್ಪಿಸಿದರು. ಅಲ್ಲಿ ಸೌಲನೂ ಸಮಸ್ತ ಇಸ್ರಾಯೇಲ್ಯರೂ ಬಹಳವಾಗಿ ಸಂತೋಷ ಪಟ್ಟರು.

1 ಸಮುವೇಲ 16:13

ಸಮುವೇಲನು ಎಣ್ಣೆ ಇರುವ ಕೊಂಬನ್ನು ತಕ್ಕೊಂಡು ಅವನನ್ನು ಅವನ ಸಹೋದರರ ಮಧ್ಯದಲ್ಲಿ ಅಭಿಷೇಕ ಮಾಡಿದನು. ಆ ದಿವಸದಲ್ಲೇ ಕರ್ತನ ಆತ್ಮನು ದಾವೀದನ ಮೇಲೆ ಬಂದನು. ಸಮುವೇಲನು ಎದ್ದು ರಾಮಕ್ಕೆ ಹೋದನು.

1 ಸಮುವೇಲ 23:18

ಅವರಿಬ್ಬರೂ ಕರ್ತನ ಮುಂದೆ ಒಡಂಬಡಿಕೆಯನ್ನು ಮಾಡಿಕೊಂಡರು. ದಾವೀದನು ಅರಣ್ಯದಲ್ಲೇ ಉಳಿದನು; ಆದರೆ ಯೋನಾತಾನನು ತನ್ನ ಮನೆಗೆ ಹೋದನು.

2 ಸಮುವೇಲ 2:4

ಆಗ ಯೆಹೂದ ಜನರು ಬಂದು ಅಲ್ಲಿ ದಾವೀದನನ್ನು ಯೆಹೂದನ ಮನೆಯವರ ಮೇಲೆ ಅರಸನನ್ನಾಗಿ ಅಭಿಷೇಕಿಸಿದರು.

2 ಸಮುವೇಲ 2:7

ನೀವು ಪರಾ ಕ್ರಮಶಾಲಿಗಳಾಗಿದ್ದು ನಿಮ್ಮ ಕೈಗಳು ಬಲವಾಗಿರಲಿ; ನಿಮ್ಮ ಯಜಮಾನನಾದ ಸೌಲನು ಸತ್ತುಹೋದನು; ಯೆಹೂದನ ಮನೆಯವರು ನನ್ನನ್ನು ತಮ್ಮ ಮೇಲೆ ಅರಸನನ್ನಾಗಿ ಅಭಿಷೇಕಮಾಡಿದರು ಅಂದನು.

2 ಸಮುವೇಲ 3:21

ಆಗ ಅಬ್ನೇರನು ದಾವೀದನಿಗೆಎಲ್ಲಾ ಇಸ್ರಾಯೇಲ್ಯರು ನಿನ್ನ ಸಂಗಡ ಒಡಂಬಡಿಕೆ ಯನ್ನು ಮಾಡುವ ಹಾಗೆಯೂ ನಿನ್ನ ಪ್ರಾಣವು ಇಚ್ಚಿ ಸಿದ ಹಾಗೆ ಎಲ್ಲರ ಮೇಲೆ ಆಳುವ ಹಾಗೆಯೂ ನಾನು ಎದ್ದು ಹೋಗಿ ಎಲ್ಲಾ ಇಸ್ರಾಯೇಲ್ಯರನ್ನು ಅರಸನಾದ ನನ್ನ ಒಡೆಯನ ಬಳಿಗೆ ಕೂಡಿಸಿಕೊಂಡು ಬರುವೆನು ಅಂದನು. ದಾವೀದನು ಅಬ್ನೇರನಿಗೆ ಅಪ್ಪಣೆ ಕೊಟ್ಟದ್ದರಿಂದ ಅವನು ಸಮಾಧಾನವಾಗಿ ಹೋದನು.

2 ಅರಸುಗಳು 11:17

ಯೆಹೋಯಾದಾವನು ಕರ್ತನಿಗೂ ಅರಸನಿಗೂ ಜನರಿಗೂ ಮಧ್ಯೆ ಒಡಂಬಡಿಕೆ ಮಾಡಿದನು. ಆ ಸಮಯದಲ್ಲಿ ಕರ್ತನ ಜನರಾಗಿರುವ ಹಾಗೆ ಅರಸ ನಿಗೂ ಜನರಿಗೂ ಮಧ್ಯೆ ಒಡಂಬಡಿಕೆ ಮಾಡಿದನು.

1 ದಿನವೃತ್ತಾಂತ 11:3

ಹಾಗೆಯೇ ಇಸ್ರಾ ಯೇಲಿನ ಹಿರಿಯರೆಲ್ಲರು ಹೆಬ್ರೋನಿನಲ್ಲಿದ್ದ ಅರಸನ ಬಳಿಗೆ ಬಂದರು; ದಾವೀದನು ಹೆಬ್ರೋನಿನಲ್ಲಿ ಕರ್ತನ ಮುಂದೆ ಅವರ ಸಂಗಡ ಒಡಂಬಡಿಕೆ ಮಾಡಿದನು; ಕರ್ತನು ಸಮುವೇಲನ ಮುಖಾಂತರ ಹೇಳಿದ ವಾಕ್ಯದ ಪ್ರಕಾರ ಅವರು ದಾವೀದನನ್ನು ಇಸ್ರಾಯೇಲಿನ ಮೇಲೆ ಅರಸನಾಗಿರಲು ಅಭಿಷೇಕ ಮಾಡಿದರು.

1 ದಿನವೃತ್ತಾಂತ 28:4

ಆದರೆ ಇಸ್ರಾಯೇಲಿನ ಕರ್ತನಾದ ದೇವರು ಎಂದೆಂದಿಗೂ ಇಸ್ರಾಯೇಲಿನ ಮೇಲೆ ಅರಸನಾಗಿರಲು ನನ್ನ ತಂದೆಯ ಮನೆಯ ಸಮಸ್ತರಿಂದ ನನ್ನನ್ನು ಆದುಕೊಂಡನು. ಯಾಕಂದರೆ ನಾನು ನಾಯಕನಾಗಿರಲು ಯೆಹೂದನನ್ನೂ ಯೆಹೂ ದನ ಮನೆಯಲ್ಲಿ ನನ್ನ ತಂದೆಯ ಮನೆಯನ್ನೂ ಆದು ಕೊಂಡು ನನ್ನ ತಂದೆಯ ಕುಮಾರರಲ್ಲಿ ನನ್ನನ್ನು ಸಮಸ್ತ ಇಸ್ರಾಯೇಲಿನ ಮೇಲೆ ಅರಸನಾಗ ಮಾಡಲು ಚಿತ್ತ ವುಳ್ಳವನಾಗಿದ್ದನು;

2 ದಿನವೃತ್ತಾಂತ 23:16

ಆಗ ಅವರು ಕರ್ತನ ಜನರಾಗಿರುವ ಹಾಗೆ ಯೆಹೋಯಾದನು ತನಗೂ ಸಮಸ್ತ ಜನರಿಗೂ ಅರಸ ನಿಗೂ ಒಡಂಬಡಿಕೆ ಮಾಡಿದನು.

ನೆಹೆಮ್ಯ 9:38

ಇದೆಲ್ಲಾದರ ನಿಮಿತ್ತ ನಾವು ಒಡಂಬಡಿಕೆಯನ್ನು ಸ್ಥಿರಮಾಡಿ ಬರೆಯುತ್ತೇವೆ; ನಮ್ಮ ಪ್ರಧಾನರೂ ಲೇವಿಯರೂ ಯಾಜಕರೂ ಅದಕ್ಕೆ ಮುದ್ರೆ ಹಾಕುತ್ತಾರೆ ಅಂದನು.

Interlinear

Choose Theme