Home Bibles 2 ಸಮುವೇಲ 6:18 · ಕನ್ನಡ ಬೈಬಲ್
2 ಸಮುವೇಲ 6:18 · ಕನ್ನಡ ಬೈಬಲ್

ದಾವೀದನು ದಹನಬಲಿಗಳನ್ನೂ ಸಮಾಧಾನದಬಲಿಗಳನ್ನೂ ಅರ್ಪಿಸಿ ತೀರಿಸಿದ ತರುವಾಯ ಸೈನ್ಯಗಳ ಕರ್ತನ ಹೆಸರಿನಲ್ಲಿ ಜನರನ್ನು ಆಶೀರ್ವದಿಸಿ ಜನರಿಗೆಲ್ಲಾ ಅಂದರೆ ಇಸ್ರಾಯೇಲಿನ ಸಮೂಹಕ್ಕೆಲ್ಲಾ

Cross references

ಆದಿಕಾಂಡ 14:19

ಇವನು ಅಬ್ರಾಮನನ್ನು ಆಶೀರ್ವದಿಸಿ--ಅಬ್ರಾಮನು ಆಕಾಶವನ್ನು ಭೂಮಿ ಯನ್ನು ಹೊಂದಿರುವ ಮಹೋನ್ನತನಾದ ದೇವರಿಂದ ಆಶೀರ್ವದಿಸಲ್ಪಡಲಿ.

ನಿರ್ಗಮಕಾಂಡ 39:43

ಮೋಶೆಯು ಆ ಕೆಲಸವನ್ನೆಲ್ಲಾ ನೋಡಿದಾಗ ಇಗೋ, ಕರ್ತನು ಆಜ್ಞಾಪಿಸಿದ ಪ್ರಕಾರವೇ ಅವರು ಅದನ್ನು ಮಾಡಿದ್ದರು. ಆಗ ಮೋಶೆಯು ಅವರನ್ನು ಆಶೀರ್ವದಿಸಿದನು.

ಲೇವ್ಯಕಾಂಡ 9:22

ಆರೋನನು ಜನರ ಕಡೆಗೆ ತನ್ನ ಕೈಗಳನ್ನು ಎತ್ತಿ ಅವರನ್ನು ಆಶೀರ್ವದಿಸಿ ಪಾಪದ ಬಲಿಯನ್ನೂ ದಹನಬಲಿಯನ್ನೂ ಸಮಾಧಾನದ ಬಲಿಗಳನ್ನೂ ಸಮರ್ಪಿಸಿದ ಮೇಲೆ ಇಳಿದು ಬಂದನು.

ಯೆಹೋಶುವ 22:6

ಯೆಹೋಶುವನು ಅವರನ್ನು ಆಶೀರ್ವದಿಸಿ ಕಳುಹಿಸಿದ ಮೇಲೆ ಅವರು ತಮ್ಮ ಡೇರೆಗಳಿಗೆ ಹೋದರು.

1 ಅರಸುಗಳು 8:14

ಅರಸನು ತನ್ನ ಮುಖವನ್ನು ತಿರುಗಿಸಿ ಇಸ್ರಾಯೇ ಲಿನ ಸಭೆಯನ್ನೆಲ್ಲಾ ಆಶೀರ್ವದಿಸಿದನು. (ಇಸ್ರಾ ಯೇಲಿನ ಸಭೆಯೆಲ್ಲಾ ನಿಂತಿರುವಾಗ)

1 ಅರಸುಗಳು 8:55

ಆಗ ಅವನು ಮಹಾ ಶಬ್ದದಿಂದ ಇಸ್ರಾಯೇಲಿನ ಸಮಸ್ತ ಸಭೆಯನ್ನು ಆಶೀರ್ವದಿಸಿ--ತನ್ನ ಜನರಾದ ಇಸ್ರಾಯೇಲ್ಯರಿಗೆ ತಾನು ಮಾತು ಕೊಟ್ಟ ಎಲ್ಲಾದರ ಪ್ರಕಾರ ವಿಶ್ರಾಂತಿಯನ್ನು ಕೊಟ್ಟ ಕರ್ತನು ಸ್ತುತಿಸ ಲ್ಪಡಲಿ.

1 ದಿನವೃತ್ತಾಂತ 16:2

ದಾವೀದನು ದಹನ ಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿ ತೀರಿಸಿದ ತರುವಾಯ ಅವನು ಕರ್ತನ ಹೆಸರಿನಲ್ಲಿ ಜನರನ್ನು ಆಶೀರ್ವದಿಸಿ

2 ದಿನವೃತ್ತಾಂತ 6:3

ಅರಸನು ಇಸ್ರಾಯೇಲಿನ ಸಭೆಯವರ ಕಡೆಗೆ ತಿರುಗಿಕೊಂಡು ಆಶೀರ್ವದಿಸಿದಾಗ ಇಸ್ರಾಯೇಲಿನ ಸಭೆಯು ನಿಂತಿತ್ತು.

2 ದಿನವೃತ್ತಾಂತ 30:18

ಯಾಕಂದರೆ ಜನರಲ್ಲಿ ಅನೇಕರು--ಎಫ್ರಾ ಯಾಮ್‌, ಮನಸ್ಸೆ, ಇಸ್ಸಾಕಾರ್‌, ಜೆಬುಲೂನ್‌ ಇವ ರಲ್ಲಿ ಅನೇಕರು ತಮ್ಮನ್ನು ಶುದ್ಧ ಮಾಡಿಕೊಳ್ಳದೆ, ಬರೆಯಲ್ಪಟ್ಟ ಪ್ರಕಾರವಲ್ಲದೆ ಪಸ್ಕವನ್ನು ಉಂಡರು.

2 ದಿನವೃತ್ತಾಂತ 30:27

ಆಗ ಲೇವಿಯರಾದ ಯಾಜಕರೂ ಎದ್ದು ಜನರನ್ನು ಆಶೀರ್ವದಿಸಿದರು. ಅವರ ಶಬ್ದವು ಕೇಳಲ್ಪಟ್ಟಿತು. ಅವರ ಪ್ರಾರ್ಥನೆಯು ಆತನ ಪರಿಶುದ್ಧವಾದ ನಿವಾಸಸ್ಥಾನಕ್ಕೆ ಅಂದರೆ ಪರಲೋಕಕ್ಕೆ ಮುಟ್ಟಿತು.

2 ದಿನವೃತ್ತಾಂತ 31:8

ಹಿಜ್ಕೀಯನೂ ಪ್ರಧಾನರೂ ಬಂದು ರಾಶಿಗಳನ್ನು ನೋಡಿದಾಗ ಅವರು ಕರ್ತನನ್ನೂ ಆತನ ಜನವಾದ ಇಸ್ರಾಯೇ ಲನ್ನೂ ಸ್ತುತಿಸಿದರು.

ಕೀರ್ತನೆಗಳು 129:8

ಹಾದು ಹೋಗು ವವರು -- ಕರ್ತನ ಆಶೀರ್ವಾದವು ನಿಮ್ಮ ಮೇಲೆ ಇರಲಿ, ಕರ್ತನ ಹೆಸರಿನಲ್ಲಿ ನಿಮ್ಮನ್ನು ಆಶೀರ್ವ ದಿಸುತ್ತೇವೆ ಎಂದು ಹೇಳುವುದಿಲ್ಲ.

ಅಪೋಸ್ತಲರ ಕೃತ್ಯಗಳು 3:26

ನಿಮ್ಮಲ್ಲಿ ಪ್ರತಿಯೊಬ್ಬನನ್ನು ಅವನವನ ದ್ರೋಹಗಳಿಂದ ತಿರು ಗಿಸಿ ಆಶೀರ್ವದಿಸುವದಕ್ಕಾಗಿ ದೇವರು ತನ್ನ ಮಗನಾದ ಯೇಸುವನ್ನು ಎಬ್ಬಿಸಿ ಮೊದಲು ಆತನನ್ನು ನಿಮ್ಮ ಬಳಿಗೆ ಕಳುಹಿಸಿದನು ಎಂದು ಹೇಳಿದನು.

ಹೆಬ್ರಿಯರಿಗೆ 7:1

ಈ ಮೆಲ್ಕಿಜೆದೇಕನು ಸಾಲೇಮಿನ ಅರಸನೂ ಮಹೋನ್ನತನಾದ ದೇವರ ಯಾಜಕನೂ ಆಗಿದ್ದು ರಾಜರನ್ನು ಸಂಹರಿಸಿ ಹಿಂತಿರುಗಿ ಬರುತ್ತಿದ್ದ ಅಬ್ರಹಾಮನನ್ನು ಎದುರುಗೊಂಡು ಅವನನ್ನು ಆಶಿರ್ವದಿಸಿದನು.

Interlinear

Choose Theme