ಆದರೆ ದಾವೀದನು ವಿಾಕಳಿಗೆ--ನಿನ್ನ ತಂದೆಗಿಂತಲೂ ಅವನ ಮನೆಯವರೆಲ್ಲರಿಗಿಂತಲೂ ನನ್ನನ್ನು ಕರ್ತನು ತನ್ನ ಜನರಾದ ಇಸ್ರಾಯೇಲಿನ ಮೇಲೆ ನಾಯಕನಾಗಿ ನೇಮಿಸುವೆನು ಎಂದು ಆದುಕೊಂಡ ಕರ್ತನ ಸಮ್ಮು ಖದ ಮುಂದೆಯೇ ಆಯಿತು.
Cross references
ಆದರೆ ಈಗ ನಿನ್ನ ರಾಜ್ಯವು ನಿಲ್ಲಲಾರದು. ಕರ್ತನು ನಿನಗೆ ಆಜ್ಞಾಪಿಸಿ ದ್ದನ್ನು ನೀನು ಕೈಕೊಳ್ಳದೆ ಹೋದದರಿಂದ ಆತನು ತನ್ನ ಹೃದಯಕ್ಕೆ ಅನುಸರಣೆಯಾದ ಒಬ್ಬ ಮನುಷ್ಯ ನನ್ನು ಹುಡುಕಿ ಅವನನ್ನು ತನ್ನ ಜನರ ಮೇಲೆ ನಾಯಕನನ್ನಾಗಿ ನೇಮಿಸಿದ್ದಾನೆ ಅಂದನು.
ಆಗ ಸಮುವೇಲನು ಅವನಿಗೆನಿನ್ನ ಬಳಿಯಿಂದ ಇಸ್ರಾಯೇಲಿನ ರಾಜ್ಯವನ್ನು ಕರ್ತನು ಈ ಹೊತ್ತು ಕಿತ್ತು ನಿನಗಿಂತ ಒಳ್ಳೆಯವನಾಗಿರುವ ನಿನ್ನ ನೆರೆಯವನಿಗೆ ಅದನ್ನು ಕೊಟ್ಟನು.
ಕರ್ತನು ಸಮುವೇಲನಿಗೆ--ಇಸ್ರಾಯೇ ಲಿನ ಅರಸನಾಗಿರದ ಹಾಗೆ ನಾನು ತಿರಸ್ಕರಿಸಿದ ಸೌಲನಿಗೋಸ್ಕರ ನೀನು ಎಷ್ಟರ ವರೆಗೆ ದುಃಖವುಳ್ಳವನಾಗಿರುವಿ? ನೀನು ನಿನ್ನ ಕೊಂಬನ್ನು ತೈಲದಿಂದ ತುಂಬಿಸಿಕೊಂಡು ಬಾ, ಬೇತ್ಲೆಹೇಮಿನ ವನಾದ ಇಷಯನ ಬಳಿಗೆ ನಿನ್ನನ್ನು ಕಳುಹಿಸುವೆನು; ಯಾಕಂದರೆ ನಾನು ಅವನ ಮಕ್ಕಳಲ್ಲಿ ಒಬ್ಬನನ್ನು ಅರಸನನ್ನಾಗಿ ಆದುಕೊಂಡೆನು ಅಂದನು.
ಆಗ ಇಷಯನು ಅವನನ್ನು ಕರೇಕಳುಹಿಸಿದನು. ಅವನು ಕೆಂಪಾದ ಮೈಬಣ್ಣದವನಾಗಿಯೂ ಸುಂದರ ಮುಖವುಳ್ಳವ ನಾಗಿಯೂ ನೋಟಕ್ಕೆ ಚೆಲುವಿಕೆಯುಳ್ಳವನಾಗಿಯೂ ಇದ್ದನು. ಆಗ ಕರ್ತನು ಸಮುವೇಲನಿಗೆ--ನೀನೆದ್ದು ಇವನನ್ನು ಅಭಿಷೇಕಿಸು; ಇವನೇ ಅವನು ಅಂದನು.
ಇದಲ್ಲದೆ ಪೂರ್ವದಲ್ಲಿ ಸೌಲನು ನಮ್ಮ ಮೇಲೆ ಅರಸನಾಗಿದ್ದಾಗ ನೀನು ಇಸ್ರಾಯೇಲನ್ನು ಹೊರಗೆ ನಡಿಸುವವನಾಗಿಯೂ ಒಳಗೆ ತರುವವನಾಗಿಯೂ ಆಗಿದ್ದಿ. ಆದದರಿಂದ ಕರ್ತನು ನಿನಗೆ--ನೀನು ನನ್ನ ಜನರಾದ ಇಸ್ರಾಯೇ ಲನ್ನು ಮೇಯಿಸುವಿ; ಇಸ್ರಾಯೇಲಿನ ಮೇಲೆ ನಾಯಕನಾಗಿರುವಿ ಎಂದು ಹೇಳಿದನು ಅಂದರು.
ದಾವೀದನೂ ಇಸ್ರಾಯೇಲ್ ಮನೆ ಯವರೆಲ್ಲರೂ ತುರಾಯಿ ಮರದಿಂದ ಮಾಡಲ್ಪಟ್ಟ ಸಕಲ ವಾದ್ಯಗಳಾದ ಕಿನ್ನರಿಗಳನ್ನೂ ವೀಣೆಗಳನ್ನೂ ದಮ್ಮಡಿಗಳನ್ನೂ ಸ್ವರಮಂಡಲಗಳನ್ನೂ ತಾಳಗಳನ್ನೂ ಕರ್ತನ ಮುಂದೆ ಬಾರಿಸಿಕೊಂಡು ಹೋದರು.
ಇದಲ್ಲದೆ ದಾವೀ ದನು ನಾರಿನ ಎಫೋದನ್ನು ಧರಿಸಿಕೊಂಡು ತನ್ನ ಪೂರ್ಣ ಬಲದಿಂದ ಕರ್ತನ ಮುಂದೆ ನಾಟ್ಯವಾ ಡಿದನು.
ಆದರೆ ಕರ್ತನ ಮಂಜೂಷವು ದಾವೀದನ ಪಟ್ಟಣದಲ್ಲಿ ಪ್ರವೇಶಿಸುವಾಗ ಸೌಲನ ಮಗಳಾದ ವಿಾಕಲಳು ಕಿಟಿಕಿಯಿಂದ ನೋಡಿ ಅರಸನಾದ ದಾವೀ ದನು ಕರ್ತನ ಮುಂದೆ ಜಿಗಿಯುತ್ತಾ ನಾಟ್ಯವಾಡು ವದನ್ನು ಕಂಡು ತನ್ನ ಹೃದಯದಲ್ಲಿ ಅವನನ್ನು ತಿರಸ್ಕ ರಿಸಿದಳು.
ಕರ್ತನ ಒಡಂಬಡಿಕೆಯ ಮಂಜೂ ಷವು ದಾವೀದನ ಪಟ್ಟಣದಲ್ಲಿ ಸೇರಿದಾಗ ಏನಾಯಿ ತಂದರೆ, ಸೌಲನ ಮಗಳಾದ ವಿಾಕಳು ಕುಣಿಯುತ್ತಾ ಆಡುತ್ತಾ ಇರುವ ಅರಸನಾದ ದಾವೀದನನ್ನು ಕಿಟಿಕಿ ಯಿಂದ ನೋಡಿ ತನ್ನ ಹೃದಯದಲ್ಲಿ ಅವನನ್ನು ಹೀನೈಸಿದಳು.
ಇದಲ್ಲದೆ ತನ್ನ ಸೇವಕನಾದ ದಾವೀದನನ್ನು ಆದುಕೊಂಡು, ಕುರಿ ಹಟ್ಟಿಗಳಿಂದ ಅವನನ್ನು ತೆಗೆದು,
ಆಗ ದರ್ಶನದಲ್ಲಿ ನಿನ್ನ ಪರಿಶುದ್ಧನ ಸಂಗಡ ಮಾತಾಡಿ ಹೇಳಿದ್ದೇನಂದರೆ --ಪರಾಕ್ರಮಶಾಲಿಯ ಮೇಲೆ ಸಹಾಯವನ್ನು ಇಟ್ಟಿ ದ್ದೇನೆ. ಆಯಲ್ಪಟ್ಟವನನ್ನು ಜನರೊಳಗಿಂದ ಉನ್ನತಕ್ಕೇರಿ ಸಿದ್ದೇನೆ.
ತರುವಾಯ ಆತನು ಅವನನ್ನು ತೆಗೆದು ಹಾಕಿ ದಾವೀದನು ಅವರ ಅರಸನಾಗಿರುವಂತೆ ಎಬ್ಬಿಸಿದನು; ಇದಲ್ಲದೆ ಆತನು ಅವನ ವಿಷಯದಲ್ಲಿ ಸಾಕ್ಷಿ ಕೊಟ್ಟು--ನಾನು ಇಷಯನ ಮಗನಾದ ದಾವೀದನನ್ನು ಕಂಡುಕೊಂಡೆನು, ಅವನು ನನ್ನ ಹೃದಯವು ಒಪ್ಪುವ ಮನುಷ್ಯನು ಮತ್ತು ಅವನು ನನ್ನ ಚಿ
ಆದದರಿಂದ ನೀವು ತಿಂದರೂ ಕುಡಿದರೂ ಏನು ಮಾಡಿದರೂ ಎಲ್ಲವನ್ನು ದೇವರ ಮಹಿಮೆಗಾಗಿ ಮಾಡಿರಿ.