ದಾವೀದನೂ ಇಸ್ರಾಯೇಲ್ ಮನೆ ಯವರೆಲ್ಲರೂ ತುರಾಯಿ ಮರದಿಂದ ಮಾಡಲ್ಪಟ್ಟ ಸಕಲ ವಾದ್ಯಗಳಾದ ಕಿನ್ನರಿಗಳನ್ನೂ ವೀಣೆಗಳನ್ನೂ ದಮ್ಮಡಿಗಳನ್ನೂ ಸ್ವರಮಂಡಲಗಳನ್ನೂ ತಾಳಗಳನ್ನೂ ಕರ್ತನ ಮುಂದೆ ಬಾರಿಸಿಕೊಂಡು ಹೋದರು.
Cross references
ತರುವಾಯ ಫಿಲಿಷ್ಟಿಯರ ಠಾಣವಿರುವ ದೇವರ ಗುಡ್ಡಕ್ಕೆ ಹೋಗುವಿ. ಅಲ್ಲಿಂದ ನೀನು ಪಟ್ಟಣದಲ್ಲಿ ಪ್ರವೇಶಿಸುವಾಗ ನಿನಗೆದುರಾಗಿ ವೀಣೆ, ದಮ್ಮಡಿ, ಪಿಳ್ಳಂಗೋವಿ, ಕಿನ್ನರಿಗಳನ್ನು ತಮ್ಮ ಮುಂದೆ ಇಟ್ಟುಕೊಂಡವರಾಗಿ ಮೇಲಿನಿಂದ ಇಳಿದು ಬರುವ ಪ್ರವಾದಿಗಳ ಗುಂಪು ಬರುವದು. ಅವರು ಪ್ರವಾದಿಸುವರು.
ಕಿನ್ನರಿಯನ್ನು ಬಾರಿಸಲು ನಿಪುಣನಾದ ಒಬ್ಬನನ್ನು ಹುಡುಕುವ ಹಾಗೆ ನಮ್ಮ ಒಡೆಯನಾದ ನೀನು ನಿನ್ನ ಸನ್ನಿಧಿಯಲ್ಲಿರುವ ನಿನ್ನ ಸೇವಕರಿಗೆ ಹೇಳ ಬೇಕು. ದೇವರಿಂದ ದುರಾತ್ಮವು ನಿನ್ನ ಮೇಲೆ ಬಂದಿರು ವಾಗ ಅವನು ತನ್ನ ಕೈಯಿಂದ ಅದನ್ನು ಬಾರಿಸಿದರೆ ನಿನಗೆ ಒಳ್ಳೆಯದಾಗಿರುವದು ಅಂದರು.
ಆದರೆ ದಾವೀದನು ಫಿಲಿಷ್ಟಿಯನನ್ನು ಸಂಹರಿಸಿ ಜನರ ಸಹಿತವಾಗಿ ಬರುವಾಗ ಇಸ್ರಾಯೇಲ್ಯರ ಎಲ್ಲಾ ಪಟ್ಟಣಗಳಿಂದ ಸ್ತ್ರೀಯರು ಸಂತೋಷದಿಂದ ಹೊರಟು ದಮ್ಮಡಿಗಳಿಂದಲೂ ಸಂಗೀತವಾದ್ಯಗಳಿಂದಲೂ ಹಾಡುತ್ತಾ ನಾಟ್ಯವಾಡುತ್ತಾ ಅರಸನಾದ ಸೌಲನನ್ನು ಎದುರುಗೊಳ್ಳಲು ಬಂದರು.
ಆದರೆ ಈಗ ವಾದ್ಯ ಬಾರಿಸುವವನನ್ನು ನನ್ನ ಬಳಿಗೆ ಕರಕೊಂಡು ಬಾ ಅಂದನು. ಆಗ ವಾದ್ಯ ಬಾರಿಸುವ ವನು ಬಾರಿಸಿದಾಗ ಕರ್ತನ ಕೈ ಅವನ ಮೇಲೆ ಬಂತು.
ಆಗ ದಾವೀದನೂ ಸಮಸ್ತ ಇಸ್ರಾ ಯೇಲ್ಯರೂ ತಮ್ಮ ಸಮಸ್ತ ಕಿನ್ನರಿ ವೀಣೆ ದಮ್ಮಡಿ ತಾಳ ತುತೂರಿಗಳಿಂದ ಬಲದಿಂದ ದೇವರ ಮುಂದೆ ಹಾಡುಗಳನ್ನೂ ಹಾಡಿದರು.
ಉಜ್ಜೀಯೇಲನ ಕುಮಾರ ರಲ್ಲಿ ಮುಖ್ಯಸ್ಥನಾದ ಅವ್ಮೆಾನಾದಾಬನೂ ಅವನ ಸಹೋದರರಾದ ನೂರ ಹನ್ನೆರಡು ಮಂದಿಯೂ.
ವೀಣೆಗ ಳಿಂದಲೂ ಕಿನ್ನರಿಗಳಿಂದಲೂ ತುತೂರಿಗಳಿಂದಲೂ ಯೆರೂಸಲೇಮಿನಲ್ಲಿ ಪ್ರವೇಶಿಸಿ ಕರ್ತನ ಆಲಯಕ್ಕೆ ಬಂದರು.
ದೇವರು ಮಹಾಧ್ವನಿಯಿಂದ, ಕರ್ತನು ತುತೂ ರಿಯ ಶಬ್ದದಿಂದ, ಮೇಲೆ ಹೋಗಿದ್ದಾನೆ.
ಹಾಡು ವವರು ಮುಂದಾಗಿಯೂ ಬಾರಿಸುವವರು ಹಿಂದಾ ಗಿಯೂ ಹೋದರು, ಅವರಲ್ಲಿ ದಮ್ಮಡಿ ಬಾರಿಸುವ ಕನ್ಯೆಯರು ಇದ್ದರು.
ತುತೂರಿಯ ಶಬ್ದ ದಿಂದ ಆತನನ್ನು ಸ್ತುತಿಸಿರಿ. ವೀಣೆಯಿಂದಲೂ ಕಿನ್ನರಿಯಿಂದಲೂ ಆತನನ್ನು ಸ್ತುತಿಸಿರಿ.
ನೀವು ಕೊಂಬು, ಪಿಳ್ಳಂಗೋವಿ, ತಂಬೂರಿ, ವೀಣೆ, ಕಿನ್ನರಿ, ನಾದಸ್ವರ ಮೊದಲಾದ ವಾದ್ಯಗಳ ಶಬ್ದವನ್ನು ಕೇಳುವಾಗ ಅರಸನಾದ ನೆಬೂಕ ದ್ನೆಚ್ಚರನು ನಿಲ್ಲಿಸಿದ್ದ ಬಂಗಾರದ ಪ್ರತಿಮೆಯ ಮುಂದೆ ಅಡ್ಡಬಿದ್ದು ಆರಾಧಿಸಬೇಕು.
ಆದದರಿಂದ ಆ ಸಮಯದಲ್ಲಿ ಜನರೆಲ್ಲರು ಕೊಂಬು, ಕೊಳಲು, ತಂಬೂರಿ, ವೀಣೆ, ಕಿನ್ನರಿ ನಾದಸ್ವರ ಮೊದಲಾದವುಗಳ ಶಬ್ದವನ್ನು ಕೇಳುವಾಗ ಎಲ್ಲಾ ಪ್ರಜೆಗಳು ಜನಾಂಗಗಳು, ಭಾಷೆಯವರು ಅಡ್ಡಬಿದ್ದು ಅರಸನಾದ ನೆಬೂಕದ್ನೆ ಚ್ಚರನು ನಿಲ್ಲಿಸಿದ ಪ್ರತಿಮೆಯನ್ನು ಆರಾಧಿಸಿದರು.
ಓ ಅರಸನೇ, ನೀನು ಪ್ರತಿಯೊಬ್ಬ ಮನುಷ್ಯನು ಕೊಂಬು, ಕೊಳಲು, ತಂಬೂರಿ, ವೀಣೆ, ಕಿನ್ನರಿ ಮತ್ತು ನಾದಸ್ವರ ಎಲ್ಲಾ ವಿಧವಾದ ವಾದ್ಯಗಳ ಶಬ್ದವನ್ನು ಕೇಳಿ ಅಡ್ಡಬಿದ್ದು ಬಂಗಾರದ ಪ್ರತಿಮೆಯನ್ನು ಆರಾಧಿಸಬೇಕೆಂದೂ
ಈಗ ನೀವು ಸಿದ್ಧ ವಾಗಿದ್ದು ಕೊಂಬು, ಕೊಳಲು, ತಂಬೂರಿ, ವೀಣೆ, ಕಿನ್ನರಿ, ನಾದಸ್ವರ ಎಲ್ಲಾ ವಿಧವಾದ ವಾದ್ಯಗಳ ಶಬ್ದವನ್ನು ಕೇಳುವ ಸಮಯದಲ್ಲಿ ನಾನು ಮಾಡಿಸಿದ ಪ್ರತಿಮೆ ಯನ್ನು ಆರಾಧಿಸಿದರೆ ಸರಿ; ಆದರೆ ನೀವು ಆರಾಧಿಸ ದಿದ್ದರೆ ಅದೇ ಗಳಿಗೆಯಲ್ಲಿ ಉರಿಯುವ ಬೆಂಕಿಯ ಆವಿಗೆಯ ಮಧ್ಯದಲ್ಲಿ ಹಾಕಲ್ಪಡುವಿರಿ. ನನ್ನ ಕೈಯಿಂದ ನಿಮ್ಮನ್ನು ಬಿಡಿಸುವ ಆ ದೇವರು ಯಾರು ಎಂದು ಹೇಳಿದನು.
ನಿಮ್ಮ ಹಾಡುಗಳ ಬೊಬ್ಬೆಗಳನ್ನು ನನ್ನಿಂದ ತೊಲಗಿಸಿರಿ; ನಿಮ್ಮ ವೀಣೆಗಳ ಮಧುರ ಸ್ವರವನ್ನು ನಾನು ಕೇಳುವದಿಲ್ಲ.