Home Bibles 2 ಸಮುವೇಲ 7:1 · ಕನ್ನಡ ಬೈಬಲ್
2 ಸಮುವೇಲ 7:1 · ಕನ್ನಡ ಬೈಬಲ್

ಕರ್ತನು ಅರಸನಿಗೆ ಅವನ ಸುತ್ತಲಿದ್ದ ಎಲ್ಲಾ ಶತ್ರುಗಳಿಂದ ತಪ್ಪಿಸಿ ವಿಶ್ರಾಂತಿ ಯನ್ನು ಕೊಟ್ಟ ತರುವಾಯ ಅರಸನು ತನ್ನ ಮನೆ ಯಲ್ಲಿ ಕುಳಿತುಕೊಂಡಿದ್ದಾಗ ಏನಾಯಿತಂದರೆ,

Cross references

ಯೆಹೋಶುವ 21:44

ಕರ್ತನು ಅವರ ತಂದೆಗಳಿಗೆ ಆಣೆ ಇಟ್ಟ ಪ್ರಕಾರವೆಲ್ಲಾ ಅವರ ಸುತ್ತಲೂ ಅವರಿಗೆ ವಿಶ್ರಾಂತಿ ಕೊಟ್ಟನು; ಅವರ ಎಲ್ಲಾ ಶತ್ರುಗಳಲ್ಲಿ ಒಬ್ಬನಾದರೂ ಅವರ ಮುಂದೆ ನಿಲ್ಲಲಿಲ್ಲ; ಅವರ ಶತ್ರುಗಳನ್ನೆಲ್ಲಾ ಕರ್ತನು ಅವರ ಕೈಗಳಿಗೆ ಒಪ್ಪಿಸಿದನು.ಕರ್ತನು ಇಸ್ರಾಯೇಲ್‌ ಮನೆಗೆ ಹೇಳಿದ ಒಳ್ಳೇ ವಿಷಯಗಳಲ್ಲಿ ಒಂದಾದರೂ ಬಿದ್ದು ಹೋಗಲಿಲ್ಲ; ಎಲ್ಲಾ ನೆರವೇರಿದವು.

ಯೆಹೋಶುವ 23:1

ಕರ್ತನು ಇಸ್ರಾಯೇಲನ್ನು ಸುತ್ತಲಿರುವ ಎಲ್ಲಾ ಶತ್ರುಗಳಿಂದ ತಪ್ಪಿಸಿ ವಿಶ್ರಾಂತಿ ಕೊಟ್ಟ ಬಹಳ ದಿನಗಳ ತರುವಾಯ ಯೆಹೋಶುವನ ದಿನಗಳು ತುಂಬಿ ವೃದ್ಧನಾದನು.

2 ಸಮುವೇಲ 5:11

ಆಗ ತೂರಿನ ಅರಸನಾದ ಹೀರಾ ಮನು ದಾವೀದನ ಬಳಿಗೆ ದೂತರನ್ನೂ ದೇವದಾರು ಮರಗಳನ್ನೂ ಬಡಿಗೆಯವರನ್ನೂ ಶಿಲ್ಪಿಗಳನ್ನೂ ಕಳು ಹಿಸಿದನು. ಅವರು ದಾವೀದನಿಗೆ ಮನೆಯನ್ನು ಕಟ್ಟಿ ದರು.

1 ಅರಸುಗಳು 5:4

ಆದರೆ ಈಗ ನನ್ನ ದೇವರಾದ ಕರ್ತನು ಶತ್ರುವಿನಿಂದ ತಗಲುವ ಕೇಡು ಒಂದಾದರೂ ಇಲ್ಲದ ಹಾಗೆ ಸಮಸ್ತ ದಿಕ್ಕುಗಳಲ್ಲಿ ನನಗೆ ಸಮಾಧಾನವನ್ನು ಕೊಟ್ಟಿದ್ದಾನೆ.

1 ದಿನವೃತ್ತಾಂತ 17:1

ದಾವೀದನು ತನ್ನ ಮನೆಯಲ್ಲಿ ಕುಳಿತಿರುವಾಗ ಏನಾಯಿತಂದರೆ,ದಾವೀದನು ಪ್ರವಾದಿಯಾದ ನಾತಾನನಿಗೆ--ಇಗೋ, ನಾನು ದೇವದಾರು ಮನೆಯಲ್ಲಿ ವಾಸವಾಗಿದ್ದೇನೆ; ಆದರೆ ದೇವರ ಒಡಂಬಡಿಕೆಯ ಮಂಜೂಷವು ತೆರೆಗಳಲ್ಲಿ ಇರುತ್ತದೆ ಅಂದನು.

1 ದಿನವೃತ್ತಾಂತ 22:6

ಆಗ ತನ್ನ ಮಗನಾದ ಸೊಲೊಮೋನನನ್ನು ಕರೇ ಕಳುಹಿಸಿ ಇಸ್ರಾಯೇಲಿನ ದೇವರಾದ ಕರ್ತನಿಗೆ ಮನೆ ಯನ್ನು ಕಟ್ಟಿಸಲು ಅವನಿಗೆ ಆಜ್ಞಾಪಿಸಿದನು.

1 ದಿನವೃತ್ತಾಂತ 22:7

ದಾವೀ ದನು ಹೇಳಿದ್ದೇನಂದರೆ--ನನ್ನ ಮಗನೇ, ನಾನು ನನ್ನ ದೇವರಾದ ಕರ್ತನ ನಾಮಕ್ಕೆ ಮನೆಯನ್ನು ಕಟ್ಟಿಸ ಬೇಕೆಂಬದು ನನ್ನ ಹೃದಯದಲ್ಲಿ ಇತ್ತು.

1 ದಿನವೃತ್ತಾಂತ 28:2

ಆಗ ಅರಸನಾದ ದಾವೀದನು ಎದ್ದು ನಿಂತು ಹೇಳಿದ್ದೇನಂದರೆ--ನನ್ನ ಸಹೋದರರೇ, ನನ್ನ ಜನರೇ, ನನ್ನ ಮಾತು ಕೇಳಿರಿ, ಕರ್ತನ ಒಡಂಬಡಿ ಕೆಯ ಮಂಜೂಷದ ನಿಮಿತ್ತವಾಗಿಯೂ ನಮ್ಮ ದೇವರ ಪಾದಪೀಠದ ನಿಮಿತ್ತವಾಗಿಯೂ ವಿಶ್ರಾಂತಿಯಾದ ಮನೆಯನ್ನು ನಾನು ಕಟ್ಟಿಸಲು ಮನಸ್ಸಾಗಿದ್ದು ಕಟ್ಟುವಿ ಕೆಯ ನಿಮಿತ್ತ ಸಿದ್ಧಮಾಡಿದೆನು.

2 ದಿನವೃತ್ತಾಂತ 14:6

ಇದಲ್ಲದೆ ಅವನು ಯೆಹೂದದಲ್ಲಿ ಕೋಟೆ ಗಳುಳ್ಳ ಪಟ್ಟಣಗಳನ್ನು ಕಟ್ಟಿಸಿದನು. ದೇಶವು ಶಾಂತವಾ ಗಿತ್ತು. ಕರ್ತನು ಅವನಿಗೆ ವಿಶ್ರಾಂತಿ ಕೊಟ್ಟದ್ದರಿಂದ ಆ ವರುಷಗಳಲ್ಲಿ ಅವನಿಗೆ ಯುದ್ಧವಿರಲಿಲ್ಲ.

2 ದಿನವೃತ್ತಾಂತ 20:30

ಆದದರಿಂದ ಯೆಹೋಷಾಫಾಟನ ರಾಜ್ಯವು ಶಾಂತವಾಗಿತ್ತು; ಅವನ ದೇವರು ಸುತ್ತಲೂ ಅವನಿಗೆ ವಿಶ್ರಾಂತಿ ಕೊಟ್ಟನು.

ಕೀರ್ತನೆಗಳು 18:1

ನನ್ನ ಬಲವಾಗಿರುವ ಓ ಕರ್ತನೇ, ನಾನು ನಿನ್ನನ್ನು ಪ್ರೀತಿಸುತ್ತೇನೆ.

ಕೀರ್ತನೆಗಳು 132:5

ನನ್ನ ಕಣ್ಣುಗಳಿಗೆ ನಿದ್ದೆಯನ್ನೂ ನನ್ನ ರೆಪ್ಪೆ ಗಳಿಗೆ ತೂಕಡಿಕೆಯನ್ನೂ ಕೊಡೆನು ಎಂಬದು.

ಸಾಮೇತಿಗಳು 16:7

ಮನುಷ್ಯನ ಮಾರ್ಗಗಳು ಕರ್ತನನ್ನು ಮೆಚ್ಚಿಸಿದಾಗ ಅವನ ಶತ್ರುಗಳನ್ನು ಸಹ ಅವನೊಂದಿಗೆ ಸಮಾಧಾನ ದಲ್ಲಿರುವಂತೆ ಆತನು ಮಾಡುತ್ತಾನೆ.

ದಾನಿಯೇಲ 4:29

ಹನ್ನೆರಡು ತಿಂಗಳಾದ ಮೇಲೆ ಅವನು ಬಾಬೆಲಿನ ರಾಜ್ಯದ ಅರಮನೆಯಲ್ಲಿ ತಿರುಗಾಡಿದನು.

ಮತ್ತಾಯ 25:16

ತರುವಾಯ ಐದು ತಲಾಂತುಗಳನ್ನು ಹೊಂದಿದ ವನು ಹೋಗಿ ಅವುಗಳಿಂದ ವ್ಯಾಪಾರಮಾಡಿ ಬೇರೆ ಐದು ತಲಾಂತುಗಳನ್ನು ಸಂಪಾದಿಸಿದನು.

ಲೂಕ 1:74

ನಾವು ನಮ್ಮ ಶತ್ರುಗಳ ಕೈಯಿಂದ ಬಿಡಿಸಲ್ಪಟ್ಟು ಭಯವಿಲ್ಲದವರಾಗಿ

Interlinear

Choose Theme