Home Bibles 2 ಸಮುವೇಲ 7:10 · ಕನ್ನಡ ಬೈಬಲ್
2 ಸಮುವೇಲ 7:10 · ಕನ್ನಡ ಬೈಬಲ್

ಇದಲ್ಲದೆ ನಾನು ನನ್ನ ಜನರಾದ ಇಸ್ರಾಯೇಲ್ಯರಿಗೆ ಒಂದು ಸ್ಥಳವನ್ನು ಏರ್ಪಡಿಸಿ ಅವರು ಇನ್ನು ಮೇಲೆ ಚಲಿಸದೆ ಸ್ವಸ್ಥಳದಲ್ಲಿ ವಾಸವಾಗಿರುವ ಹಾಗೆ ಅವರನ್ನು ನೆಡು ವೆನು. ಪೂರ್ವದ ಹಾಗೆಯೂ ನಾನು ನನ್ನ ಜನವಾದ ಇಸ್ರಾಯೇಲಿನ ಮೇಲೆ ನ್ಯಾಯಾಧಿಪತಿಗಳನ್ನು ನೇಮಿ ಸಿದ ದಿವಸದಿಂದಾದ ಹಾಗೆಯೂ ದುಷ್ಟತನದ ಮಕ್ಕಳು ಇನ್ನು ಮೇಲೆ ಅವರನ್ನು ಕುಂದಿಸದೆ ಇರುವರು.

Cross references

ನಿರ್ಗಮಕಾಂಡ 1:13

ಆದ ದರಿಂದ ಐಗುಪ್ತ್ಯರು ಇಸ್ರಾಯೇಲನ ಮಕ್ಕಳಿಂದ ಕ್ರೂರವಾಗಿ ಸೇವೆ ಮಾಡಿಸಿಕೊಂಡರು.

ನಿರ್ಗಮಕಾಂಡ 1:22

ಆದರೆ ಫರೋಹನು ತನ್ನ ಜನರಿಗೆಲ್ಲಾ--(ಇಬ್ರಿಯರಿಗೆ) ಹುಟ್ಟುವ ಗಂಡು ಮಕ್ಕಳನ್ನೆಲ್ಲಾ ನದಿಯಲ್ಲಿ ಹಾಕಬೇಕು. ಹೆಣ್ಣು ಮಕ್ಕಳ ನ್ನೆಲ್ಲಾ ಜೀವದಿಂದ ಉಳಿಸಬೇಕು ಎಂದು ಅಪ್ಪಣೆ ಕೊಟ್ಟನು.

ನಿರ್ಗಮಕಾಂಡ 15:17

ನೀನು ಅವರನ್ನು ಒಳಗೆ ಬರಮಾಡಿ ಓ ಕರ್ತನೇ, ನಿನ್ನ ಕೈಗಳು ಸ್ಥಾಪಿಸಿದ ಪರಿಶುದ್ಧ ನಿವಾಸದಲ್ಲಿಯೂ (ಓ ಕರ್ತನೇ,) ನೀನು ವಾಸಿಸುವದಕ್ಕೆ ಮಾಡಿಕೊಂಡಿರುವ ನಿನ್ನ ಸ್ವಾಸ್ಥ್ಯದ ಪರ್ವತದಲ್ಲಿಯೂ ಅವರನ್ನು ಸ್ಥಾಪಿಸುವಿ.

ನ್ಯಾಯಾಧಿಪತಿಗಳು 4:3

ಆಗ ಇಸ್ರಾಯೇಲ್‌ ಮಕ್ಕಳು ಕರ್ತನಿಗೆ ಕೂಗಿದರು. ಯಾಕಂದರೆ ಅವನಿಗೆ ಒಂಭೈನೂರು ಕಬ್ಬಿಣದ ರಥಗಳಿ ದ್ದವು; ಅವನು ಇಸ್ರಾಯೇಲ್‌ ಮಕ್ಕಳನ್ನು ಇಪ್ಪತ್ತು ವರುಷ ಬಲವಾಗಿ ಬಾಧೆಪಡಿಸಿದನು.

ನ್ಯಾಯಾಧಿಪತಿಗಳು 6:2

ಮಿದ್ಯಾನ್ಯರ ಕೈ ಇಸ್ರಾಯೇಲಿಗೆ ವಿರೋಧವಾಗಿ ಬಲವಾದದರಿಂದ ಇಸ್ರಾಯೇಲ್‌ ಮಕ್ಕಳು ಮಿದ್ಯಾನ್ಯರ ನಿಮಿತ್ತ ತಮಗೆ ಪರ್ವತಗಳಲ್ಲಿ ಇರುವ ಗುಹೆಗಳನ್ನೂ ಗವಿಗಳನ್ನೂ ಬಲವಾದ ಸ್ಥಾನಗಳನ್ನೂ ಮಾಡಿಕೊಂಡರು.

1 ಸಮುವೇಲ 13:17

ಆಗ ಫಿಲಿಷ್ಟಿ ಯರ ಪಾಳೆಯದಿಂದ ಸುಲುಕೊಳ್ಳುವವರು ಮೂರು ಗುಂಪಾಗಿ ಹೊರಟರು; ಒಂದು ಗುಂಪು ಒಫ್ರದ ಮಾರ್ಗವಾಗಿ ಶುವಲ್‌ ದೇಶದ ಕಡೆಗೆ ಹೋಯಿತು;

2 ಅರಸುಗಳು 21:8

ಕರ್ತನು --ನಾನು ಅವರಿಗೆ ಆಜ್ಞಾಪಿಸಿದ ಎಲ್ಲಾದರ ಪ್ರಕಾರವೂ ನನ್ನ ಸೇವಕನಾದ ಮೋಶೆಯು ಅವರಿಗೆ ಆಜ್ಞಾಪಿಸಿದ ಎಲ್ಲಾ ನ್ಯಾಯಪ್ರಮಾಣದ ಪ್ರಕಾರವೂ ಮಾಡಿ ಅವುಗಳನ್ನು ಅವರು ಕೈಕೊಂಡರೆ ನಾನು ಅವರ ತಂದೆಗಳಿಗೆ ಕೊಟ್ಟ ದೇಶದೊಳಗಿಂದ ಅವರ ಪಾದಗಳು ಇನ್ನು ಕದಲುವಂತೆ ಮಾಡುವದಿಲ್ಲವೆಂದು ಹೇಳಿದನು.

1 ದಿನವೃತ್ತಾಂತ 17:9

ಇದಲ್ಲದೆ ನಾನು ನನ್ನ ಜನರಾದ ಇಸ್ರಾಯೇಲ್ಯರಿಗೆ ಒಂದು ಸ್ಥಳವನ್ನು ನೇಮಿಸಿ ಅವರು ಇನ್ನು ಮೇಲೆ ಚದರದೆ ಸ್ವಸ್ಥಳದಲ್ಲಿ ವಾಸಮಾಡುವ ಹಾಗೆ ಅವರನ್ನು ನೆಡುವೆನು. ಪೂರ್ವದ ಹಾಗೆಯೂ ನನ್ನ ಜನರಾದ ಇಸ್ರಾಯೇ ಲಿನ ಮೇಲೆ ನ್ಯಾಯಾಧಿಪತಿಗಳನ್ನು ನೇಮಿಸಿದ ದಿವಸ ದಿಂದಾದ ಹಾಗೆಯೂ ದುಷ್ಟತನದ ಮಕ್ಕಳು ಇನ್ನು ಮೇಲೆ ಅವರನ್ನು ಕುಂದಿಸದೆ ಇರುವರು.

ಕೀರ್ತನೆಗಳು 44:4

ಓ ದೇವರೇ, ನೀನೇ ನನ್ನ ಅರಸನು; ಯಾಕೋಬ ನಿಗೆ ಬಿಡುಗಡೆಗಳನ್ನು ಆಜ್ಞಾಪಿಸು.

ಕೀರ್ತನೆಗಳು 80:8

ನೀನು ದ್ರಾಕ್ಷೇಗಿಡವನ್ನು ಐಗುಪ್ತದಿಂದ ತಂದಿ; ಜನಾಂಗಗಳನ್ನು ಹೊರಡಿಸಿ ಅದನ್ನು ನೆಟ್ಟಿ.

ಕೀರ್ತನೆಗಳು 80:9

ಅದರ ಮುಂದೆ ಸ್ಥಳ ಸಿದ್ಧಮಾಡಿದಿ; ಆಗ ಅದು ಬೇರೂರಿ ದೇಶವನ್ನು ತುಂಬಿತು.

ಕೀರ್ತನೆಗಳು 89:22

ಶತ್ರುವು ಅವನನ್ನು ಬಲಾತ್ಕಾರ ಮಾಡನು; ಯಾವ ದುಷ್ಟನೂ ಅವನನ್ನು ಹಿಂಸೆ ಪಡಿಸನು.

ಯೆಶಾಯ 5:2

ಅವನು ಅದಕ್ಕೆ ಬೇಲಿ ಹಾಕಿ, ಅದರೊಳಗಿಂದ ಕಲ್ಲುಗಳನ್ನು ಆರಿಸಿ ತೆಗೆದು ಹಾಕಿ ಒಳ್ಳೇ ದ್ರಾಕ್ಷೆಯನ್ನು ನೆಟ್ಟು, ಅದರ ಮಧ್ಯದಲ್ಲಿ ಒಂದು ಬುರುಜನ್ನು ಕಟ್ಟಿ, ದ್ರಾಕ್ಷೇ ತೊಟ್ಟಿಯನ್ನು ಕೊರೆಯಿಸಿ, ತೋಟವು ಒಳ್ಳೆ ದ್ರಾಕ್ಷೇ ಹಣ್ಣನ್ನು ಕೊಡುವದೆಂದು ಎದುರು ನೋಡು ತ್ತಿರಲು, ಅದು ಕಾಡುಹಣ್ಣನ್ನು ಬಿಟ್ಟಿತು.

ಯೆಶಾಯ 5:7

ಸೈನ್ಯಗಳ ಕರ್ತನ ದ್ರಾಕ್ಷೇ ತೋಟವು ಇಸ್ರಾಯೇಲಿನ ಮನೆಯೇ, ಯೆಹೂದದ ಜನವೋ, ಆತನ ಇಷ್ಟದ ಗಿಡವೇ. ಆತನು ನ್ಯಾಯವನ್ನು ನಿರೀ ಕ್ಷಿಸಲು, ಇಗೋ, ಹಿಂಸೆಯೇ; ನೀತಿಯನ್ನು ನಿರೀಕ್ಷಿಸಲು ಗೋಳಾಟವೇ ಸಿಕ್ಕೀತು.

ಯೆಶಾಯ 60:18

ಬಲಾತ್ಕಾರವೂ ನಿನ್ನ ದೇಶದೊಳಗೆ ಹಾಳಾದದ್ದೂ ನಾಶವೂ ನಿನ್ನ ಮೇರೆ ಗಳಲ್ಲಿ ಕೇಳಲ್ಪಡುವದಿಲ್ಲ; ನಿನ್ನ ಗೋಡೆಗಳಿಗೆ ರಕ್ಷಣೆ ಎಂದೂ ನಿನ್ನ ಬಾಗಿಲುಗಳಿಗೆ ಸ್ತೋತ್ರವೆಂದೂ ಹೆಸರಿ ಡುವಿ.

ಯೆಶಾಯ 60:21

ನಿನ್ನ ಜನರೆಲ್ಲರು ನೀತಿವಂತರಾಗಿರುವರು, ದೇಶವನ್ನು ಸದಾ ಕಾಲಕ್ಕೆ ಸ್ವಾಧೀನ ಮಾಡಿಕೊಳ್ಳುವರು; ನಾನು ಮಹಿಮೆ ಹೊಂದುವದಕ್ಕೋಸ್ಕರ ನಾನು ನೆಟ್ಟ ಕೊಂಬೆಯೂ ನನ್ನ ಕೈ ಸೃಷ್ಟಿಯೂ ದೇಶವನ್ನು ಸದಾ ಅನುಭವಿಸುವರು.ಚಿಕ್ಕವನಿಂದ ಸಾವಿರವಾಗುವರು. ಅಲ್ಪನಿಂದ ಬಲ ವಾದ ಜನಾಂಗವಾಗುವದು; ಕರ್ತನೆಂಬ ನಾನು ಕ್ಲುಪ್ತಕಾಲದಲ್ಲಿ ಇದನ್ನು ಬಹು ಬೇಗನೆ ಉಂಟು ಮಾಡುವೆನು.

ಯೆರೆಮಿಯ 18:9

ಅವರು ತಮ್ಮ ಕುಮಾರರ ಕುಮಾರ್ತೆಯರ ಮಾಂಸವನ್ನೂ ತಿನ್ನುವಂತೆ ಮಾಡುವೆನು; ಮುತ್ತಿಗೆಯಲ್ಲಿ ಸಹ ಅವರ ಶತ್ರುಗಳೂ ಅವರ ಪ್ರಾಣವನ್ನು ಹುಡುಕುವವರೂ ಅವರಿಗೆ ಮಾಡುವ ಇಕ್ಕಟ್ಟಿನಲ್ಲಿಯೂ ಅವರು ತಮ್ಮ ತಮ್ಮ ಸ್ನೇಹಿತರ ಮಾಂಸವನ್ನು ತಿನ್ನುವರು.

ಯೆರೆಮಿಯ 24:6

ಬೇರೆ ದೇವರುಗಳನ್ನು ಸೇವಿಸುವದಕ್ಕೂ ಆರಾಧಿಸುವದಕ್ಕೂ ಹಿಂಬಾಲಿಸಬೇಡಿರಿ; ನಿಮ್ಮ ಕೈ ಕೆಲಸಗಳಿಂದ ನನಗೆ ಕೋಪವನ್ನು ಎಬ್ಬಿಸಬೇಡಿರಿ; ಆಗ ನಿಮಗೆ ಯಾವ ಕೇಡೂ ಮಾಡೆನು.

ಯೆಹೆಜ್ಕೇಲ 28:24

ಇಸ್ರಾಯೇಲ್‌ ವಂಶದವರಿಗೆ ಚುಚ್ಚುವ ದತ್ತೂರಿ ಸುತ್ತಲೂ ಹೀನೈಸುವ ನೋಯಿಸುವ ಮುಳ್ಳು ಇನ್ನಿರದು; ನಾನೇ ದೇವರಾದ ಕರ್ತನೆಂದು ಅವರಿಗೆ ತಿಳಿಯುವದು.

ಯೆಹೆಜ್ಕೇಲ 37:25

ನನ್ನ ಸೇವಕನಾದ ಯಾಕೋಬನಿಗೆ ನಾನು ಕೊಟ್ಟ ದೇಶದಲ್ಲಿ ನಿಮ್ಮ ತಂದೆಗಳು(ಪಿತೃಗಳು) ವಾಸಮಾಡಿದ ಆ ದೇಶದಲ್ಲಿಯೂ ಅವರೂ ಅವರ ಮಕ್ಕಳೂ ಮತ್ತು ಅವರ ಮಕ್ಕಳ ಮಕ್ಕಳೂ ಎಂದೆಂದಿಗೂ ಅಲ್ಲಿಯೇ ವಾಸಮಾಡುವರು; ನನ್ನ ಸೇವಕನಾದ ದಾವೀದನು ಎಂದೆಂದಿಗೂ ಅವರಿಗೆ ಪ್ರಧಾನನಾಗಿರುವನು.

ಹೊಶೇಯ 2:18

ಆ ದಿನದಲ್ಲಿ ಅವರಿ ಗೋಸ್ಕರ ಅಡವಿಯ ಮೃಗಗಳ ಸಂಗಡಲೂ ಆಕಾಶದ ಪಕ್ಷಿಗಳ ಸಂಗಡಲೂ ಭೂಮಿಯ ಕ್ರಿಮಿಗಳ ಸಂಗಡಲೂ ಒಡಂಬಡಿಕೆ ಮಾಡುವೆನು. ನಾನು ಬಿಲ್ಲನ್ನೂ ಕತ್ತಿ ಯನ್ನೂ ಯುದ್ಧವನ್ನೂ ದೇಶದೊಳಗಿಂದ ಮುರಿದು ಹಾಕಿ ಅವರನ್ನು ನಿರ್ಭಯವಾಗಿ ಮಲಗುವಂತೆ ಮಾಡುವೆನು.

ಆಮೋಸ 9:15

ನಾನು ಅವರನ್ನು ಅವರ ದೇಶದಲ್ಲಿ ನೆಡುವೆನು; ನಾನು ಅವರಿಗೆ ಕೊಟ್ಟಿರುವ ದೇಶದಿಂದ ಅವರು ಇನ್ನು ಮೇಲೆ ಕಿತ್ತು ಹಾಕಲ್ಪಡರೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ.

ಪ್ರಕಟನೆ 21:4

ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು. ಇನ್ನು ಮರಣ ವಿರುವದಿಲ್ಲ. ಇನ್ನು ದುಃಖವಾಗಲಿ ಗೋಳಾಟವಾಗಲಿ ನೋವಾಗಲಿ ಇರುವದೇ ಇಲ್ಲ. ಮೊದಲಿದ್ದವುಗಳೆಲ್ಲಾ ಇಲ್ಲದೆ ಹೋದವು ಎಂದು ಹೇಳಿತು.

Interlinear

Choose Theme