Home Bibles 2 ಸಮುವೇಲ 7:12 · ಕನ್ನಡ ಬೈಬಲ್
2 ಸಮುವೇಲ 7:12 · ಕನ್ನಡ ಬೈಬಲ್

ಇದಲ್ಲದೆ ಕರ್ತನು ನಿನಗೆ ತಿಳಿಸುವದೇನಂದರೆ, ನಾನು ನಿನಗೆ ಮನೆಯನ್ನು ಕಟ್ಟುವೆನು. ನಿನ್ನ ದಿವಸಗಳು ಪೂರ್ತಿ ಯಾಗಿ ನೀನು ನಿನ್ನ ಪಿತೃಗಳ ಸಂಗಡ ಮಲಗಿಕೊಂಡಿ ರುವಾಗ ನಿನ್ನ ಕರುಳುಗಳಿಂದ ಹೊರಡುವ ನಿನ್ನ ಸಂತತಿಯನ್ನು ನಿನ್ನ ತರುವಾಯ ಎಬ್ಬಿಸಿ ನಾನು ಅವನ ರಾಜ್ಯವನ್ನು ಸ್ಥಿರಮಾಡುವೆನು.

Cross references

ಆದಿಕಾಂಡ 15:4

ಇಗೋ, ಕರ್ತನ ವಾಕ್ಯವು ಅವನಿಗೆ ಉಂಟಾಗಿ--ಇವನು ನಿನಗೆ ಬಾಧ್ಯನಾಗುವ ದಿಲ್ಲ. ನಿನ್ನಿಂದ ಹುಟ್ಟಿದವನೇ ನಿನಗೆ ಬಾಧ್ಯನಾಗುವನು ಅಂದನು.

ದ್ವಿತೀಯೋಪದೇಶಕಾಂಡ 31:16

ಆಗ ಕರ್ತನು ಮೋಶೆಗೆ--ನೀನು ನಿನ್ನ ಪಿತೃಗಳ ಸಂಗಡ ಮಲಗುವಿ; ಈ ಜನರು ಎದ್ದು ತಾವು ಪ್ರವೇಶಿಸುವ ದೇಶದ ಅನ್ಯದೇವರುಗಳನ್ನು ಅನುಸರಿಸಿ ಜಾರತ್ವಮಾಡಿ ನನ್ನನ್ನು ಬಿಟ್ಟು ನಾನು ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ವಿಾರುವರು.

2 ಸಮುವೇಲ 22:51

ಆತನು ತನ್ನ ಅರಸನಿಗೆ ರಕ್ಷಣೆಯ ಗೋಪುರವಾಗಿದ್ದಾನೆ; ತನ್ನ ಅಭಿಷಕ್ತನಾದ ದಾವೀದ ನಿಗೂ ಅವನ ಸಂತತಿಗೂ ಕೃಪೆಯನ್ನು ಯುಗಯುಗಕ್ಕೂ ಅನುಗ್ರಹಿಸುತ್ತಾನೆ.

1 ಅರಸುಗಳು 1:21

ಇಲ್ಲದಿದ್ದರೆ ಅರಸನಾದ ನನ್ನ ಒಡೆಯನು ತನ್ನ ಪಿತೃಗಳ ಸಂಗಡ ಮಲಗಿಕೊಂಡಿರುವಾಗ ನಾನೂ ನನ್ನ ಮಗನಾದ ಸೊಲೊಮೋನನೂ ಅಪರಾಧಿಗಳಾಗಿ ಎಣಿಸಲ್ಪಟ್ಟೇವು ಅಂದಳು.

1 ಅರಸುಗಳು 2:1

ದಾವೀದನ ಸಾಯುವ ಕಾಲವು ಸವಿಾಪಿಸಿದ್ದರಿಂದ ಅವನು ತನ್ನ ಮಗನಾದ ಸೊಲೊಮೋನನಿಗೆ ಆಜ್ಞಾಪಿಸಿದ್ದೇನಂದರೆ

1 ಅರಸುಗಳು 2:10

ಹೀಗೆಯೇ ದಾವೀದನು ತನ್ನ ಪಿತೃಗಳ ಸಂಗಡ ಮಲಗಿಕೊಂಡನು; ಅವನು ದಾವೀದನ ಪಟ್ಟಣದಲ್ಲಿ ಹೂಣಲ್ಪಟ್ಟನು.

1 ಅರಸುಗಳು 8:20

ಈಗ ಕರ್ತನು ತಾನು ಹೇಳಿದ ವಾಕ್ಯ ವನ್ನು ಪೂರೈಸಿದ್ದಾನೆ. ನಾನು ನನ್ನ ತಂದೆಯಾದ ದಾವೀದನಿಗೆ ಬದಲಾಗಿ ಎದ್ದು, ಕರ್ತನು ಮಾತು ಕೊಟ್ಟ ಪ್ರಕಾರ ಇಸ್ರಾಯೇಲಿನ ಸಿಂಹಾಸನದ ಮೇಲೆ ಕುಳಿತುಕೊಂಡು ಇಸ್ರಾಯೇಲಿನ ದೇವರಾದ ಕರ್ತನ ನಾಮಕ್ಕೆ ಮಂದಿರವನ್ನು ಕಟ್ಟಿಸಿದ್ದೇನೆ.

1 ದಿನವೃತ್ತಾಂತ 17:11

ನಿನ್ನ ದಿವಸಗಳು ತೀರಿದ ಮೇಲೆ ನೀನು ನಿನ್ನ ಪಿತೃಗಳ ಬಳಿಗೆ ಸೇರಿದಾಗ ಆಗುವದೇ ನಂದರೆ, ನಾನು ನಿನ್ನ ತರುವಾಯ ನಿನ್ನ ಪುತ್ರರಿಂದಾ ಗುವ ನಿನ್ನ ಸಂತತಿಯನ್ನು ಎಬ್ಬಿಸಿ ಅವನಿಗೆ ರಾಜ್ಯವನ್ನು ಸ್ಥಿರಮಾಡುವೆನು.

2 ದಿನವೃತ್ತಾಂತ 6:9

ಆದರೆ ನೀನು ಆಲಯವನ್ನು ಕಟ್ಟಿಸಬೇಡ; ನಿನ್ನಿಂದ ಹುಟ್ಟುವ ಮಗನೇ ನನ್ನ ಹೆಸರಿ ಗೋಸ್ಕರ ಆಲಯವನ್ನು ಕಟ್ಟಿಸುವನು ಅಂದನು.

2 ದಿನವೃತ್ತಾಂತ 6:15

ನೀನು ನಿನ್ನ ಸೇವಕನಾದಂಥ ನನ್ನ ತಂದೆಯಾದ ದಾವೀದನಿಗೋಸ್ಕರ ಕೊಟ್ಟ ಮಾತನ್ನು ನೆರವೇರಿಸಿ ನಿನ್ನ ಬಾಯಿಂದ ಹೇಳಿದ್ದನ್ನು ಇಂದು ನಿನ್ನ ಕೈಯಿಂದ ಮಾಡಿ ತೀರಿಸಿದಿ.

ಕೀರ್ತನೆಗಳು 89:29

ಅವನ ಸಂತತಿ ಯನ್ನು ಸಹ ಎಂದೆಂದಿಗೂ ಅವನ ಸಿಂಹಾಸನವನ್ನು ಆಕಾಶದ ದಿವಸಗಳ ಹಾಗೆಯೂ ಮಾಡುವೆನು.

ಕೀರ್ತನೆಗಳು 132:11

ಕರ್ತನು ದಾವೀದನಿಗೆ ಸತ್ಯದ ಆಣೆ ಇಟ್ಟಿದ್ದಾನೆ; ಅದರಿಂದ ತಿರುಗಿಕೊಳ್ಳನು; ಅದು--ನಿನ್ನ ಸಂತಾನ ವನ್ನು ನಿನ್ನ ಸಿಂಹಾಸನದ ಮೇಲೆ ಇರಿಸು ವದು.

ಯೆಶಾಯ 9:7

ಅದನ್ನು ನೇಮಿಸುವದಕ್ಕೂ ಇಂದಿನಿಂದ ಎಂದೆಂದಿಗೂ ನೀತಿ ನ್ಯಾಯಗಳೊಂದಿಗೆ ಅದನ್ನು ಸ್ಥಾಪಿಸುವದಕ್ಕೂ ದಾವೀದನ ಸಿಂಹಾಸನ ಕ್ಕಾಗಲಿ ಅವನ ರಾಜ್ಯಕ್ಕಾಗಲಿ ಅವನ ಪರಿಪಾಲ ನೆಯ ಮತ್ತು ಶಾಂತಿಯ ಅಭಿವೃದ್ಧಿಗಾಗಲಿ ಅಂತ್ಯವೇ ಇಲ್ಲ; ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ನೆರವೇರಿ ಸುವದು.

ಯೆಶಾಯ 11:1

ಇಷಯನ ಬುಡದಿಂದ ಒಂದು ಕೊಂಬೆ ಒಡೆಯುವದು ಅದರ ಬೇರಿನಿಂದ ಕೊಂಬೆ ಯು ಬೆಳೆಯುವದು.

ಯೆಶಾಯ 11:10

ಆ ದಿನದಲ್ಲಿ ಹುಡುಕುವ ಅನ್ಯಜನರಿಗೆ ಇಷ ಯನ ಬೇರು ಒಂದು ಗುರುತಾಗಿ ನಿಲ್ಲುವದು; ಅವನ ವಿಶ್ರಾಂತಿ ವೈಭವವುಳ್ಳದ್ದಾಗಿರುವದು.

ಯೆರೆಮಿಯ 33:17

ಆದದರಿಂದ ಕರ್ತನು ಹೀಗೆ ಹೇಳುತ್ತಾನೆ--ಪ್ರತಿಯೊಬ್ಬನು ತನ್ನ ಸಹೋದರನಿಗೂ ಪ್ರತಿ ಮನುಷ್ಯನು ತನ್ನ ನೆರೆಯವನಿಗೂ ಬಿಡುಗಡೆಯನ್ನು ಸಾರುವದರಲ್ಲಿ ನೀವು ನನಗೆ ಕಿವಿಗೊಡಲಿಲ್ಲ. ಇಗೋ, ನಾನು ಕತ್ತಿ, ಬರ, ಜಾಡ್ಯ ಇವುಗಳಿಗಾಗಿ ನಿಮಗೆ ಬಿಡುಗಡೆಯನ್ನು ಸಾರುತ್ತೇನೆ ಎಂದು ಕರ್ತನು ಹೇಳುತ್ತಾನೆ. ಭೂಮಿಯ ಎಲ್ಲಾ ರಾಜ್ಯಗಳಿಗೆ ನಿಮ್ಮನ್ನು ತೆಗೆದು ಹಾಕುವಂತೆ ಮಾಡುವೆನು.

ದಾನಿಯೇಲ 12:2

ಭೂಮಿಯ ಧೂಳಿನೊಳಗೆ ನಿದ್ರೆಮಾಡುವವ ರಲ್ಲಿ ಅನೇಕರು ಎಚ್ಚತ್ತು ಕೆಲವರು ನಿತ್ಯಜೀವವನ್ನೂ ಕೆಲವರು ನಿತ್ಯ ನಾಚಿಕೆಗಳನ್ನೂ ಅನುಭವಿಸುವರು.

ಮತ್ತಾಯ 22:42

ಕ್ರಿಸ್ತನ ವಿಷಯ ವಾಗಿ ನೀವು ಏನು ನೆನಸುತ್ತೀರಿ? ಆತನು ಯಾರ ಮಗನು ಎಂದು ಕೇಳಿದ್ದಕ್ಕೆ ಅವರು ಆತನಿಗೆ--ದಾವೀದನಕುಮಾರನು ಅಂದರು.

ಅಪೋಸ್ತಲರ ಕೃತ್ಯಗಳು 2:30

ದಾವೀದನು ಪ್ರವಾದಿಯಾಗಿದ್ದದರಿಂದ ಶರೀರದ ಪ್ರಕಾರ ತನ್ನ ಸಂತಾನದವರಲ್ಲಿ ದೇವರು ಕ್ರಿಸ್ತನನ್ನು ಎಬ್ಬಿಸಿ ತನ್ನ ಸಿಂಹಾಸನದ ಮೇಲೆ ಕೂತುಕೊಳ್ಳುವಂತೆ ಮಾಡುವನೆಂದು ಆಣೆಯಿಟ್ಟು ಪ್ರಮಾಣ ಪೂರ್ವಕ ವಾಗಿ ತನಗೆ ಹೇಳಿದ್ದನ್ನು ಅವನು ಬಲ್ಲವನಾಗಿದ್ದನು.

ಅಪೋಸ್ತಲರ ಕೃತ್ಯಗಳು 13:36

ದಾವೀದನು ದೇವರ ಚಿತ್ತಕ್ಕನು ಸಾರವಾಗಿ ತನ್ನ ಸ್ವಂತ ಸಂತತಿಯವರಿಗೆ ಸೇವೆ ಮಾಡಿದ ನಂತರ ಅವನು ನಿದ್ರೆಹೋಗಿ ತನ್ನ ಪಿತೃಗಳ ಬಳಿಯಲಿ ಸೇರಿ ಕೊಳೆಯುವ ಅವಸ್ಥೆಯನ್ನು ನೋಡಿದನು.

1 ಕೊರಿಂಥದವರಿಗೆ 15:51

ಇಗೋ, ಮರ್ಮವಾಗಿದ್ದ ಒಂದು ಸಂಗತಿಯನ್ನು ನಿಮಗೆ ತಿಳಿಸುತ್ತೇನೆ-- ನಾವೆಲ್ಲರೂ ನಿದ್ರೆಹೋಗುವದಿಲ್ಲ, ಆದರೆ ನಾವೆ ಲ್ಲರೂ ಮಾರ್ಪಡುವೆವು.

1 ತೆಸಲೋನಿಕದವರಿಗೆ 4:14

ಯೇಸು ಸತ್ತು ತಿರಿಗಿ ಎದ್ದನೆಂದು ನಾವು ನಂಬಿದ ಮೇಲೆ ಅದರಂತೆ ಯೇಸುವಿನ ಲ್ಲಿದ್ದುಕೊಂಡು ನಿದ್ರೆಹೋಗುವವರನ್ನು ಸಹ ದೇವರು ಆತನೊಡನೆ ಕರೆದುಕೊಂಡು ಬರುವನೆಂದು ನಂಬ ಬೇಕಲ್ಲವೇ.

Interlinear

Choose Theme