ನೀನು ಎಲ್ಲಿ ಹೋದರೂ ಅಲ್ಲಿ ನಿನ್ನ ಕೂಡ ಇದ್ದು ನಿನ್ನ ಶತ್ರುಗಳೆಲ್ಲರನ್ನು ನಿನ್ನ ಮುಂದೆ ಕಡಿದುಬಿಟ್ಟು ಭೂಮಿಯಲ್ಲಿರುವ ದೊಡ್ಡವರ ಹೆಸರಿನ ಹಾಗೆ ದೊಡ್ಡ ಹೆಸರನ್ನು ನಿನಗೆ ಉಂಟುಮಾಡಿದೆನು.
Cross references
ನಾನು ನಿನ್ನನ್ನು ದೊಡ್ಡ ಜನಾಂಗವಾಗ ಮಾಡಿ ನಿನ್ನನ್ನು ಆಶೀರ್ವದಿಸಿ ನಿನ್ನ ಹೆಸರನ್ನು ದೊಡ್ಡ ದಾಗಿ ಮಾಡುವೆನು, ನೀನು ಆಶೀರ್ವಾದವಾಗಿರುವಿ.
ಹೀಗೆಯೇ ಕರ್ತನು ಯೆಹೋಶುವನ ಸಂಗಡ ಇದ್ದನು; ಅವನ ಕೀರ್ತಿ ದೇಶದಲ್ಲೆಲ್ಲಾ ಇತ್ತು.
ದರಿದ್ರನನ್ನು ಭೂಮಿಯ ಧೂಳಿನಿಂದ ಎತ್ತುವಾ ತನೂ ಭಿಕ್ಷುಕನನ್ನು ತಿಪ್ಪೆಗುಂಡಿಯಿಂದ ತೆಗೆದು ಉನ್ನತ ಮಾಡುವಾತನೂ ಆಗಿದ್ದಾನೆ. ಅವರನ್ನು ಪ್ರಧಾ ನರ ಮಧ್ಯದಲ್ಲಿ ಕೂಡ್ರಿಸುತ್ತಾನೆ; ಘನತೆಯ ಸಿಂಹಾ ಸನವನ್ನು ಬಾಧ್ಯವಾಗಿ ಕೊಡುತ್ತಾನೆ. ಯಾಕಂದರೆ ಭೂಮಿಯ ಆಧಾರಸ್ತಂಭಗಳು ಕರ್ತನದಾಗಿವೆ, ಭೂಲೋಕವನ್ನು ಅವುಗಳ ಮೇಲೆ ಇಟ್ಟಿದ್ದಾನೆ.
ದಾವೀದನು ತನ್ನ ಸಕಲ ಮಾರ್ಗಗಳಲ್ಲಿ ಬುದ್ಧಿಯುಳ್ಳವನಾಗಿ ವರ್ತಿಸಿದನು.
ಆಗ ಫಿಲಿಷ್ಟಿಯರ ಪ್ರಧಾನರು ಹೊರಟರು, ಅವರು ಹೊರಟ ತರುವಾಯ ದಾವೀದನು ಸೌಲನ ಸಮಸ್ತ ಸೇವಕ ರಿಗಿಂತ ಹೆಚ್ಚು ಬುದ್ಧಿಯಿಂದ ನಡಕೊಂಡನು. ಆದದ ರಿಂದ ಅವನ ಹೆಸರು ಬಹಳ ಪ್ರಸಿದ್ಧವಾಗಿತ್ತು.
ಹೀಗೆ ಆ ದಿನ ಸೌಲನೂ ಅವನ ಮೂವರು ಮಕ್ಕಳೂ ಅವನ ಆಯುಧ ಹಿಡಿಯುವವನೂ ಎಲ್ಲಾ ಜನರೂ ಸತ್ತರು.
ಹೀಗೆ ಯೇ ದಾವೀದನು ದಿನದಿನಕ್ಕೆ ದೊಡ್ಡವನಾಗುತ್ತಾ ಇದ್ದನು; ಸೈನ್ಯಗಳ ದೇವರಾದ ಕರ್ತನು ಅವನ ಸಂಗಡ ಇದ್ದನು.
ತರುವಾಯ ಕಾವಲುದಂಡುಗಳನ್ನು ದಾವೀದನು ದಮಸ್ಕಕ್ಕೆ ಹೊಂದಿದ ಅರಾಮ್ಯದ ಠಾಣ ಗಳಲ್ಲಿ ಇಟ್ಟನು. ಹಾಗೆಯೇ ಅರಾಮ್ಯರು ದಾವೀದ ನಿಗೆ ದಾಸರಾಗಿ ಕಪ್ಪಗಳನ್ನು ತಂದರು; ದಾವೀದನು ಹೋದ ಸ್ಥಳಗಳಲ್ಲೆಲ್ಲಾ ಕರ್ತನು ಅವನನ್ನು ಕಾಪಾಡಿ ದನು.
ಎದೋಮಿ ನಲ್ಲಿ ಕಾವಲುದಂಡುಗಳನ್ನು ಇಟ್ಟನು. ಎಲ್ಲಾ ಎದೋಮಿ ನಲ್ಲಿ ಅವನು ಕಾವಲುದಂಡುಗಳನ್ನು ಇಟ್ಟದ್ದರಿಂದ ಎದೋಮ್ಯರೆಲ್ಲರೂ ದಾವೀದನಿಗೆ ದಾಸರಾದರು. ದಾವೀದನು ಹೋದಲ್ಲೆಲ್ಲಾ ಕರ್ತನು ಅವನನ್ನು ಕಾಪಾಡಿದನು.
ಕರ್ತನು ದಾವೀದನನ್ನು ಅವನ ಎಲ್ಲಾ ಶತ್ರುಗಳ ಕೈಯೊಳಗಿಂದಲೂ ಸೌಲನ ಕೈಯೊಳಗಿಂದಲೂ ಬಿಡಿಸಿದ ದಿವಸದಲ್ಲಿ ಅವನು ಕರ್ತನನ್ನು ಕುರಿತು ಈ ಹಾಡಿನ ಮಾತುಗಳನ್ನು ಹೇಳಿದನು. ಏನಂದರೆ--
ನಿನ್ನಿಂದ ಸೈನ್ಯದ ಮೇಲೆ ಬಿದ್ದೆನು; ನನ್ನ ದೇವರಿಂದ ಗೋಡೆ ನೆಗೆದನು.
ನನ್ನ ಕಾಲುಗಳನ್ನು ಜಿಂಕೆಗಳ ಹಾಗೆ ಮಾಡಿ ನನ್ನನ್ನು ಉನ್ನತ ಸ್ಥಳಗಳ ಮೇಲೆ ನಿಲ್ಲಿಸುತ್ತಾನೆ.
ನನ್ನ ಶತ್ರುಗಳನ್ನು ಹಿಂದಟ್ಟಿ ಅವರನ್ನು ನಾಶಮಾಡಿದೆನು; ಅವರನ್ನು ಸಂಹರಿಸಿಬಿಡುವ ವರೆಗೂ ನಾನು ಹಿಂತಿರು ಗಲಿಲ್ಲ.
ಆಗ ನಾನು ಅವರನ್ನು ನೆಲದ ಧೂಳಿನ ಹಾಗೆ ಪುಡಿಪುಡಿಮಾಡಿದೆನು; ಬೀದಿಯ ಕೆಸರಿನ ಹಾಗೆ ಅವರನ್ನು ತುಳಿದು ಚದರುವಂತೆ ಮಾಡಿದೆನು.
ನೀನು ಎಲ್ಲಿಗೆ ಹೋದರೂ ಅಲ್ಲಿ ನಿನ್ನ ಸಂಗಡ ಇದ್ದು ನಿನ್ನ ಶತ್ರುಗಳೆಲ್ಲರನ್ನು ನಿನ್ನ ಮುಂದೆ ಸಂಹರಿಸಿ ಭೂಮಿಯಲ್ಲಿರುವ ದೊಡ್ಡವರ ಹೆಸರಿನ ಹಾಗೆ ಹೆಸರನ್ನು ನಿನಗೆ ಉಂಟುಮಾಡಿದೆನು.
ನನ್ನ ಶತ್ರುಗಳನ್ನು ಹಿಂದಟ್ಟಿ ಹಿಡಿದಿ ದ್ದೇನೆ; ಅವರನ್ನು ಸಂಹರಿಸಿಬಿಡುವ ವರೆಗೆ ನಾನು ಹಿಂತಿರುಗಲಿಲ್ಲ.
ನೀನು ಎಂದೆಂದಿಗೂ ಅವನನ್ನು ಅಧಿಕವಾಗಿ ಆಶೀರ್ವಾದ ಮಾಡಿದ್ದೀ. ನಿನ್ನ ಮುಖದ ಮುಂದೆ ಅವನನ್ನು ಅಧಿಕ ವಾಗಿ ಸಂತೋಷಪಡುವಂತೆ ಮಾಡಿದ್ದೀ.
ದೇವರ ಪಟ್ಟಣವೇ, ನಿನ್ನ ವಿಷಯವಾಗಿ ಘನವುಳ್ಳವುಗಳು ಹೇಳಲ್ಪಟ್ಟಿವೆ.
ಇದ ಲ್ಲದೆ ಅವನ ಮುಂದೆ ವೈರಿಗಳನ್ನು ಹೊಡೆದು ಬಿಡು ವೆನು; ಅವನ ಹಗೆಯವರನ್ನು ಸಂಕಟಪಡಿಸುವೆನು.
ಅಧಿಪತಿಗಳ ಸಂಗಡವೂ ತನ್ನ ಜನರ ಅಧಿಪತಿಗಳ ಸಂಗಡವೂ ಕುಳ್ಳಿರಿಸುವದಕ್ಕೆ,
ಬಲಿಷ್ಠ ರನ್ನು ಅವರ ಸ್ಥಾನಗಳಿಂದ ಕೆಳಗೆ ದೊಬ್ಬಿ ದೀನರನ್ನು ಮೇಲಕ್ಕೆ ಎತ್ತಿದ್ದಾನೆ.