Home Bibles ☰ Books 2 ಸಮುವೇಲ 8:15 · ಕನ್ನಡ ಬೈಬಲ್
2 ಸಮುವೇಲ 8:15 · ಕನ್ನಡ ಬೈಬಲ್

ಹೀಗೆಯೇ ದಾವೀದನು ಎಲ್ಲಾ ಇಸ್ರಾಯೇಲಿನ ಮೇಲೆ ಆಳಿ ತನ್ನ ಎಲ್ಲಾ ಜನರಿಗೂ ನೀತಿ ನ್ಯಾಯಗಳನ್ನು ನಡಿಸುತ್ತಾ ಬಂದನು.

Cross references

1 ಸಮುವೇಲ 14:47

ಹೀಗೆ ಸೌಲನು ಇಸ್ರಾಯೇಲಿನ ಮೇಲೆ ದೊರೆ ತನ ತಕ್ಕೊಂಡು ಸುತ್ತಲಿರುವ ತನ್ನ ಸಮಸ್ತ ಶತ್ರುಗ ಳಾದ ಮೋವಾಬ್ಯರ ಮೇಲೆಯೂ ಅಮ್ಮೋನನ ಮಕ್ಕಳ ಮೇಲೆಯೂ ಎದೋಮ್ಯರ ಮೇಲೆಯೂ ಚೋಬದ ಅರಸುಗಳ ಮೇಲೆಯೂ ಫಿಲಿಷ್ಟಿಯರ ಮೇಲೆಯೂ ಯುದ್ಧಮಾಡಿದನು. ಯಾರ ಮೇಲೆ ತಿರುಗಿದನೋ ಅವರನ್ನು ಪೀಡಿಸಿದನು.

2 ಸಮುವೇಲ 3:12

ಆಗ ಅಬ್ನೇರನು ತನ್ನ ಪರವಾಗಿ ದಾವೀದನ ಬಳಿಗೆ ದೂತರನ್ನು ಕಳು ಹಿಸಿ--ದೇಶವು ಯಾರದು? ಇದಲ್ಲದೆ--ನೀನು ನನ್ನ ಸಂಗಡ ಒಡಂಬಡಿಕೆಯನ್ನು ಮಾಡು; ಆಗ ಇಗೋ, ಇಸ್ರಾಯೇಲ್ಯರನ್ನೆಲ್ಲಾ ನಿನ್ನ ಬಳಿಗೆ ಬರಮಾಡುವ ಹಾಗೆ ನನ್ನ ಕೈ ನಿನ್ನ ಸಂಗಡ ಇರುವದೆಂದು ಹೇಳಿರಿ ಅಂದನು.

2 ಸಮುವೇಲ 5:5

ಅವನು ಹೆಬ್ರೋನಿನಲ್ಲಿ ಯೆಹೂದ ಜನರ ಮೇಲೆ ಏಳುವರೆ ವರುಷ ಆಳಿದನು. ಯೆರೂಸಲೇಮಿನಲ್ಲಿ ಎಲ್ಲಾ ಇಸ್ರಾಯೇಲ್ಯರ ಮೇಲೆಯೂ ಎಲ್ಲಾ ಯೆಹೂ ದದ ಜನರ ಮೇಲೆಯೂ ಮೂವತ್ತುಮೂರು ವರುಷ ಆಳಿದನು.

2 ಸಮುವೇಲ 15:3

ಅದಕ್ಕವನು--ನಿನ್ನ ಸೇವಕನು ಇಸ್ರಾಯೇಲ್‌ ಗೋತ್ರಗಳಲ್ಲಿ ಒಬ್ಬನೆಂದು ಹೇಳಿದರೆ ಅಬ್ಷಾಲೋ ಮನು ಅವನಿಗೆ--ನೋಡು, ನಿನ್ನ ಕಾರ್ಯಗಳು ಒಳ್ಳೆಯವೂ ಯುಕ್ತವೂ ಆದವುಗಳು; ಆದರೆ ಅರಸನ ಬಳಿಯಲ್ಲಿ ನಿನ್ನನ್ನು ವಿಚಾರಿಸುವದಕ್ಕೆ ಯಾವನೂ ಇಲ್ಲ.

2 ಸಮುವೇಲ 20:23

ಯೋವಾಬನು ಇಸ್ರಾಯೇಲ್ಯರ ಮುಖ್ಯ ಸೇನಾ ಪತಿಯಾಗಿದ್ದನು; ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯರ ಮೇಲೆಯೂ ಪೆಲೇತ್ಯರ ಮೇಲೆಯೂ ಅಧಿಪತಿಯಾಗಿದ್ದನು;

2 ಸಮುವೇಲ 23:3

ಇಸ್ರಾಯೇಲಿನ ದೇವರು ಹೇಳಿದ್ದು; ಇಸ್ರಾಯೇಲಿನ ಬಂಡೆ ನನ್ನ ಸಂಗಡ ಮಾತನಾಡಿದ್ದು--ಮನುಷ್ಯರ ಮೇಲೆ ಆಳುವ ವನು ನೀತಿವಂತನಾಗಿರತಕ್ಕದ್ದು; ಅವನು ದೇವರ ಭಯ ದಲ್ಲಿ ಆಳುವನು.

1 ಅರಸುಗಳು 4:1

ಹೀಗೆ ಅರಸನಾದ ಸೊಲೊಮೋನನು ಸಮಸ್ತ ಇಸ್ರಾಯೇಲಿನ ಮೇಲೆ ಅರಸ ನಾಗಿದ್ದನು.

1 ಅರಸುಗಳು 10:9

ನಿನ್ನನ್ನು ಇಸ್ರಾಯೇಲಿನ ಸಿಂಹಾಸನದ ಮೇಲೆ ಕೂಡ್ರಿಸುವ ಹಾಗೆ ನಿನ್ನಲ್ಲಿ ಇಷ್ಟಪಟ್ಟ ನಿನ್ನ ದೇವರಾದ ಕರ್ತನು ಸ್ತುತಿಸಲ್ಪಡಲಿ. ಕರ್ತನು ಯುಗಯುಗಕ್ಕೂ ಇಸ್ರಾಯೇಲನ್ನು ಪ್ರೀತಿ ಮಾಡಿದ್ದರಿಂದ ನ್ಯಾಯವನ್ನೂ ನೀತಿಯನ್ನೂ ನಡಿಸಲು ಆತನು ನಿನ್ನನ್ನು ಅರಸನಾಗ ಮಾಡಿದನು ಅಂದಳು.

1 ದಿನವೃತ್ತಾಂತ 18:14

ಹೀಗೆಯೇ ದಾವೀದನು ಸಮಸ್ತ ಇಸ್ರಾಯೇಲಿನ ಮೇಲೆ ಆಳುತ್ತಾ, ತನ್ನ ಸಮಸ್ತ ಜನರಿಗೆ ನ್ಯಾಯವನ್ನೂ ನೀತಿಯನ್ನೂ ನಡಿಸಿದನು.

ಕೀರ್ತನೆಗಳು 45:6

ಓ ದೇವರೇ, ನಿನ್ನ ಸಿಂಹಾಸ ನವು ಎಂದೆಂದಿಗೂ ಇರುವದು; ನಿನ್ನ ರಾಜ್ಯದಂಡವು ನ್ಯಾಯದಂಡವಾಗಿದೆ.

ಕೀರ್ತನೆಗಳು 72:2

ನಿನ್ನ ಜನರಿಗೆ ನೀತಿಯಿಂದಲೂ ದೀನರಿಗೆ ನ್ಯಾಯದಿಂದಲೂ ಆತನು ತೀರ್ಪು ಮಾಡು ವನು.

ಕೀರ್ತನೆಗಳು 75:2

ನಾನು ಸಭೆಯನ್ನು ಅಂಗೀಕರಿಸು ವಾಗ ಸರಿಯಾಗಿ ನ್ಯಾಯತೀರಿಸುವೆನು;

Interlinear

Choose Theme