ಆದರೆ ದಮಸ್ಕದಲ್ಲಿರುವ ಅರಾಮ್ಯರು ಚೋಬದ ಅರಸನಾದ ಹದದೆಜೆರನಿಗೆ ಸಹಾಯಮಾಡುವದಕ್ಕೆ ಬಂದಾಗ ದಾವೀದನು ಅರಾಮ್ಯರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ಕೊಂದು ಹಾಕಿದನು.
Cross references
ಇದಲ್ಲದೆ ಚೋಬದ ಅರಸನಾಗಿರುವ ರೆಹೋಬನ ಮಗನಾದ ಹದದೆಜೆರನು ತನ್ನ ಮೇರೆಯನ್ನು ಕಟ್ಟಿ ಕೊಳ್ಳುವದಕ್ಕೆ ಹೋದಾಗ
ಇದಲ್ಲದೆ ದೇವರು ಮತ್ತೊಬ್ಬ ಶತ್ರುವನ್ನು ಅವನ ಮೇಲೆ ಎಬ್ಬಿಸಿದನು. ಅವನು ಯಾರಂದರೆ ಚೋಬದ ಅರಸನಾದ ತನ್ನ ಯಜಮಾನನಾಗಿರುವ ಹದದೇಜರ ನನ್ನು ಬಿಟ್ಟು ಓಡಿಹೋದ ಎಲ್ಯದಾವನ ಮಗನಾದ ರೆಜೋನನು.
ದಮಸ್ಕದ ಅರಾಮ್ಯರು ಚೋಬದ ಅರಸನಾದ ಹದರೆಜರನಿಗೆ ಸಹಾಯ ಕೊಡಲು ಬಂದಾಗ ದಾವೀದನು ಅರಾಮ್ಯರಲ್ಲಿ ಇಪ್ಪತ್ತೆರಡು ಸಾವಿರ ಮಂದಿಯನ್ನು ಸಂಹರಿಸಿಬಿಟ್ಟನು.
ದೇವರು ತನ್ನ ಕೋಪವನ್ನು ಹಿಂತೆಗೆಯ ದಿದ್ದರೆ ಸೊಕ್ಕಿನ ಸಹಾಯಕರು ಆತನ ಕೆಳಗೆ ಬೊಗ್ಗಿ ಕೊಳ್ಳುತ್ತಾರೆ.
ಅವರು--ಬನ್ನಿರಿ, ಅವ ರನ್ನು ಜನಾಂಗವಾಗಿರದ ಹಾಗೆ ನಾವು ಅವರನ್ನು ನಿರ್ಮೂಲ ಮಾಡೋಣ; ಇಸ್ರಾಯೇಲಿನ ಹೆಸರು ಇನ್ನು ಜ್ಞಾಪಕಕ್ಕೆ ಬಾರದಿರಲಿ ಅನ್ನುತ್ತಾರೆ.
ದಮಸ್ಕವು ಸಿರಿ ಯಾದ ತಲೆಯಾಗಿದೆ ಮತ್ತು ದಮಸ್ಕದ ತಲೆಯು ರೆಚೀನ; ಅರುವತ್ತೈದು ವರುಷಗಳೊಳಗೆ ಎಫ್ರಾಯಾ ಮ್ಯರು ಭಂಗಪಟ್ಟು ಜನಾಂಗವೆನಿಸಿಕೊಳ್ಳರು.
ಓ ಪ್ರಜೆಗಳೇ, ನೀವು ಕೂಡಿಕೊಳ್ಳಿರಿ; ನೀವು ಒಡೆದು ಚೂರುಚೂರಾಗುವಿರಿ; ಎಲ್ಲಾ ದೂರ ದೇಶದ ವರೇ, ಕಿವಿಗೊಡಿರಿ, ನಡುಕಟ್ಟಿಕೊಳ್ಳಿರಿ ನೀವು ಒಡೆದು ಚೂರು ಚೂರಾಗುವಿರಿ; ನಡುಕಟ್ಟಿಕೊಳ್ಳಿರಿ ನೀವು ಒಡೆದು ಚೂರು ಚೂರಾಗುವಿರಿ.
ಐಗು ಪ್ತ್ಯರು ಮನುಷ್ಯಮಾತ್ರದವರೇ, ದೇವರಲ್ಲ; ಅವರ ಅಶ್ವಗಳು ಆತ್ಮವಲ್ಲ, ಮಾಂಸಮಯವೇ; ಹೀಗಿರುವದ ರಿಂದ ಕರ್ತನು ತನ್ನ ಕೈಚಾಚುವಾಗ ಸಹಾಯ ಮಾಡಿ ದವನು ಮತ್ತು ಸಹಾಯಪಡೆದವನೂ ಬಿದ್ದುಹೋಗು ವನು, ಅಂತೂ ಎಲ್ಲರೂ ಒಟ್ಟಿಗೆ ಲಯವಾಗುವರು.