ಆಗ ಚೀಬನು ಅರಸನಿಗೆ--ಅರಸನಾದ ನನ್ನ ಒಡೆಯನು ತನ್ನ ದಾಸನಿಗೆ ಆಜ್ಞಾಪಿಸಿದ್ದನ್ನೆಲ್ಲಾ ನಿನ್ನ ದಾಸನು ಹಾಗೆಯೇ ಮಾಡುವನು ಅಂದನು. ಅರಸನ ಕುಮಾರ ರಲ್ಲಿ ಒಬ್ಬನ ಹಾಗೆ ಮೆಫೀಬೋಶೆತನು ಭೋಜನ ಮಾಡುವನೆಂದು ಅರಸನು ಹೇಳಿದನು.
Cross references
ಆಗ ಅರಸನ ಸೇವಕರು ಅರಸನಿಗೆಇಗೋ, ಅರಸನಾದ ನಮ್ಮ ಒಡೆಯನು ನಮಗೆ ಏನೇನು ಆಜ್ಞಾಪಿಸುವನೋ ಅದನ್ನು ಮಾಡುವದಕ್ಕೆ ನಿನ್ನ ಸೇವಕರು ಸಿದ್ಧರಾಗಿದ್ದೇವೆ ಅಂದರು.
ದಾವೀದನು ಬೆಟ್ಟದ ತುದಿಯಿಂದ ಸ್ವಲ್ಪ ದೂರಹೋದಾಗ ಇಗೋ, ಮೆಫೀಬೋ ಶೆತನ ಸೇವಕನಾದ ಚೀಬನು ತಡಿಹಾಕಿದ ಎರಡು ಕತ್ತೆಗಳನ್ನು ಹೊಡಕೊಂಡು ಬಂದು ಅವನನ್ನು ಎದುರು ಗೊಂಡನು; ಅವುಗಳ ಮೇಲೆ ಇನ್ನೂರು ರೊಟ್ಟಿ ಗಳೂ ಒಣಗಿದ ನೂರು ದ್ರಾಕ್ಷೇ ಗೊಂಚಲುಗಳೂ ವಸಂತಕಾಲದ ನೂರು ಹಣ್ಣುಗಳೂ ಒಂದು ಬುದ್ದಲಿ ದ್ರಾಕ್ಷಾರಸವೂ ಇದ್ದವು.
ಅವನ ಸಂಗಡ ಸಾವಿರ ಮಂದಿ ಬೆನ್ಯಾವಿಾನ್ಯರಿದ್ದರು. ಸೌಲನ ಮನೆಯ ಸೇವಕ ನಾದ ಚೀಬನೂ ಅವನ ಸಂಗಡ ತನ್ನ ಹದಿನೈದು ಮಂದಿ ಕುಮಾರರೂ ತನ್ನ ಇಪ್ಪತ್ತು ಮಂದಿ ಸೇವಕರೂ ಯೊರ್ದನನ್ನು ದಾಟಿ ಅರಸನಿಗೆ ಎದುರಾಗಿ ಬಂದರು.
ಅದಕ್ಕವನು--ಅರಸನಾದ ನನ್ನ ಒಡೆಯನೇ, ನನ್ನ ಸೇವಕನು ನನ್ನನ್ನು ಮೋಸ ಮಾಡಿದನು. ಯಾಕಂದರೆ ನಿನ್ನ ಸೇವಕನು ಕುಂಟನಾಗಿರುವದರಿಂದ ಒಂದು ಕತ್ತೆಯ ಮೇಲೆ ತಡಿಯನ್ನು ಹಾಕು ಅದರ ಮೇಲೇರಿ ಅರಸನ ಸಂಗಡ ಹೋಗುವೆನೆಂದು ನಿನ್ನ ಸೇವಕನಾದ ನಾನು ಅವನಿಗೆ ಹೇಳಿದೆನು.