ಹೀಗೆಯೇ ಮೆಫೀಬೋಶೆತನು ಅರಸನ ಪಂಕ್ತಿಯಲ್ಲಿ ನಿತ್ಯವೂ ಭೋಜನ ಮಾಡುತ್ತಿದದ್ದರಿಂದ ಯೆರೂ ಸಲೇಮಿನಲ್ಲೇ ವಾಸವಾಗಿದ್ದನು. ಅವನ ಎರಡು ಕಾಲು ಕುಂಟಾಗಿದ್ದವು.
Cross references
ಆದರೆ ಸೌಲನ ಮಗನಾದ ಯೋನಾತಾನನಿಗೆ ಕಾಲು ಕುಂಟಾದ ಒಬ್ಬ ಮಗನಿದ್ದನು. ಇಜ್ರೇಲಿನಿಂದ ಸೌಲನೂ ಯೋನಾತಾನನೂ ಸತ್ತರೆಂಬ ವರ್ತಮಾನ ಬಂದಾಗ ಅವನು ಐದು ವರುಷದವನಾಗಿದ್ದನು. ಆಗ ಅವನ ದಾದಿಯು ಅವನನ್ನು ಎತ್ತಿಕೊಂಡು ಓಡಿ ಹೋದಳು. ಅವಳು ತ್ವರೆಯಾಗಿ ಓಡಿದಾಗ ಏನಾಯಿ ತಂದರೆ, ಅವನು ಬಿದ್ದು ಕುಂಟನಾದನು. ಅವನ ಹೆಸರು ಮೆಫೀಬೋಶೆತನು.
ಅರಸನು ಅವನಿಗೆ--ನಾನು ಅವನಿಗೆ ದೇವರ ದಯೆತೋರಿಸುವ ಹಾಗೆ ಸೌಲನ ಮನೆಯವರಲ್ಲಿ ಇನ್ನೂ ಯಾವನಾ ದರೂ ಇದ್ದಾನೋ ಅಂದನು. ಆಗ ಚೀಬನು ಅರಸ ನಿಗೆ--ಯೋನಾತಾನನಿಗೆ ಎರಡು ಕಾಲುಕುಂಟಾದ ಒಬ್ಬ ಮಗನಿದ್ದಾನೆ ಅಂದನು.
ದಾವೀ ದನು--ಮೆಫೀಬೋಶೆತನೇ ಅಂದನು. ಅವನು--ಇಗೋ, ನಿನ್ನ ದಾಸನು ಅಂದನು. ಆಗ ದಾವೀದನು ಅವನಿಗೆ -- ಭಯಪಡಬೇಡ, ನಿನ್ನ ತಂದೆಯಾದ ಯೋನಾತಾನನ ನಿಮಿತ್ತ ನಾನು ನಿನಗೆ ಖಂಡಿತವಾಗಿ ದಯೆತೋರಿಸುವೆನು. ನಿನ್ನ ತಂದೆಯಾದ ಸೌಲನ ಭೂಮಿಯನ್ನೆಲ್ಲಾ ನಿನಗೆ ತಿರಿಗಿ ಕೊಡುವೆನು ನೀನು ನನ್ನ ಮೇಜಿನಲ್ಲಿ ನಿತ್ಯವೂ ಭೋಜನ ಮಾಡುವಿ ಅಂದನು.
ಆದದರಿಂದ ನೀನೂ ನಿನ್ನ ಕುಮಾರರೂ ನಿನ್ನ ದಾಸರೂ ನಿನ್ನ ಯಜಮಾನನ ಮಗನಿಗೆ ಆಹಾರ ಒದಗಿಸುವ ಹಾಗೆ ಅವನಿಗೋಸ್ಕರ ಭೂಮಿಯನ್ನು ವ್ಯವಸಾಯಮಾಡಿ ಅದರ ಫಲವನ್ನು ತರಬೇಕು. ಆದರೆ ನಿನ್ನ ಯಜಮಾನನ ಮಗನಾದ ಮೆಫೀಬೋಶೆ ತನು ನಿತ್ಯವೂ ನನ್ನ ಮೇಜಿನಲ್ಲಿ ಊಟ ಮಾಡುವನು ಅಂದನು. ಈ ಚೀಬನಿಗೆ ಹದಿನೈದು ಮಂದಿ ಕುಮಾ ರರೂ ಇಪ್ಪತ್ತು ಮಂದಿ ದಾಸರೂ ಇದ್ದರು.
ಅವನು ಅರಸನಾದ ನನ್ನ ಒಡೆಯನಿಗೆ ನಿನ್ನ ಸೇವಕನ ಮೇಲೆ ಚಾಡಿಯನ್ನು ಹೇಳಿದನು. ಆದರೆ ಅರಸನಾದ ನನ್ನ ಒಡೆಯನು ದೇವದೂತನ ಹಾಗೆಯೇ ಇದ್ದಾನೆ.