ನಾನು ನಿಮ್ಮ ಸಂಗಡ ಇದ್ದಾಗ ಈ ಸಂಗತಿಗಳನ್ನು ನಿಮಗೆ ಹೇಳಿದ್ದು ಜ್ಞಾಪಕವಿಲ್ಲವೋ?
Cross references
ಐದು ರೊಟ್ಟಿಗಳನ್ನು ಐದು ಸಾವಿರ ಜನರಿಗೆ ಹಂಚಿದಾಗ ಎಷ್ಟು ಪುಟ್ಟಿಗಳನ್ನು ತುಂಬಿದಿರೆಂದು ನೀವು ಇನ್ನೂ ಗ್ರಹಿಸಲಿಲ್ಲವೋ? ಇಲ್ಲವೆ ನಿಮಗೆ ನೆನಪಿಲ್ಲವೋ?
ಕಣ್ಣುಗಳಿದ್ದೂ ನೀವು ನೋಡುವದಿಲ್ಲವೋ? ಕಿವಿಗಳಿದ್ದೂ ನೀವು ಕೆಳುವ ದಿಲ್ಲವೋ? ಮತ್ತು ನೀವು ಜ್ಞಾಪಕಮಾಡಿಕೊಳ್ಳುವದಿ ಲ್ಲವೋ?
ಆತನು ಇಲ್ಲಿಲ್ಲ, ಎದ್ದಿದ್ದಾನೆ; ಆತನು ಇನ್ನೂ ಗಲಿಲಾಯ ದಲ್ಲಿದ್ದಾಗಲೇ--
ಆದರೆ ಸಮಯ ಬಂದಾಗ ಇವುಗಳ ವಿಷಯವಾಗಿ ನಾನು ನಿಮಗೆ ಹೇಳಿದ್ದೇನೆಂದು ನೀವು ಜ್ಞಾಪಕಮಾಡಿಕೊಳ್ಳುವಂತೆ ಇವುಗಳನ್ನು ನಿಮಗೆ ಹೇಳಿದ್ದೇನೆ. ನಾನು ನಿಮ್ಮ ಸಂಗಡಲೇ ಇದ್ದದರಿಂದ ಪ್ರಾರಂಭದಲ್ಲಿ ಇವುಗಳನ್ನು ನಿಮಗೆ ಹೇಳಲಿಲ್ಲ.
ಆದಕಾರಣ ನಾನು ಕಣ್ಣೀರಿನಿಂದ ಮೂರು ವರುಷ ಹಗಲಿರುಳು ಎಡೆಬಿಡದೆ ಪ್ರತಿಯೊಬ್ಬ ನನ್ನು ಎಚ್ಚರಿಸಿದೆನೆಂದು ನೀವು ಜ್ಞಾಪಕ ಮಾಡಿಕೊಂಡು ಎಚ್ಚರವಾಗಿರಿ.
ಅಸೂಯೆ ಗಳು ಕೊಲೆಗಳು ಕುಡುಕತನ ದುಂದೌತನ ಈ ಮೊದಲಾದವುಗಳೇ; ಇಂಥ ಕೃತ್ಯಗಳನ್ನು ನಡಿಸುವವರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂದು ನಾನು ನಿಮಗೆ ಮುಂಚೆಯೇ ಹೇಳಿದಂತೆ ಈಗಲೂ ಹೇಳುತ್ತೇನೆ.
ತಂದೆಯು ತನ್ನ ಮಕ್ಕಳಿಗೆ ಹೇಗೋ ಹಾಗೆಯೇ ನಾವು ನಿಮ್ಮಲ್ಲಿ ಪ್ರತಿಯೊಬ್ಬನಿಗೆ ಬುದ್ದಿ ಹೇಳುತ್ತಾ ಆದರಿಸುತ್ತಾ ಬಂದೆವು.
ಇದಲ್ಲದೆ ನಾವು ನಿಮ್ಮ ಸಂಗಡ ಇದ್ದಾಗ ಕೆಲಸ ಮಾಡಲೊ ಲ್ಲದವನು ಊಟ ಮಾಡಬಾರದೆಂದು ನಿಮಗೆ ಆಜ್ಞಾಪಿಸಿದೆವಷ್ಟೆ.
ಹೇಗಿದ್ದರೂ ನೀವು ನನ್ನ ಮರಣಾನಂತರದಲ್ಲಿ ಇವುಗಳನ್ನು ಯಾವಾಗಲೂ ಜ್ಞಾಪಕಮಾಡಿಕೊಳ್ಳುವದು ಸಾಧ್ಯವಾಗುವಂತೆ ಪ್ರಯಾಸಪಡುವೆನು.