Home Bibles 2 ತಿಮೋಥೆಯ 1:4 · ಕನ್ನಡ ಬೈಬಲ್
2 ತಿಮೋಥೆಯ 1:4 · ಕನ್ನಡ ಬೈಬಲ್

ನಾನು ನಿನ್ನ ಕಣ್ಣೀರನ್ನು ನೆನಪಿಗೆ ತಂದು ನಿನ್ನನ್ನು ನೋಡಿ ಸಂತೋಷಭರಿತನಾಗಬೇಕೆಂದು ಬಹಳವಾಗಿ ಅಪೇಕ್ಷಿಸುತ್ತೇನೆ;

Cross references

ಕೀರ್ತನೆಗಳು 126:5

ಕಣ್ಣೀರಿ ನಿಂದ ಬಿತ್ತುವವರು ಉತ್ಸಾಹದಲ್ಲಿ ಕೊಯ್ಯುವರು. ಅಮೂಲ್ಯವಾದ ಬೀಜವನ್ನು ಹೊತ್ತುಕೊಂಡು ಅಳುತ್ತಾ ಹೋಗುವವನುತನ್ನ ಸಿವುಡುಗಳನ್ನು ತರುವವನಾಗಿ, ನಿಸ್ಸಂದೇಹವಾಗಿ ಉತ್ಸಾಹ ಧ್ವನಿಯಿಂದ ತಿರುಗಿ ಬರುವನು.

ಯೆಶಾಯ 61:3

ಚೀಯೋ ನಿನಲ್ಲಿ ದುಃಖಿಸುವವರಿಗೆ ಬೂದಿಗೆ ಬದಲಾಗಿ ಸೌಂದರ್ಯವನ್ನೂ ದುಃಖಕ್ಕೆ ಬದಲಾಗಿ ಆನಂದ ತೈಲವನ್ನೂ ಕುಂದಿದ ಆತ್ಮಕ್ಕೆ ಬದಲಾಗಿ ಸ್ತೋತ್ರದ ವಸ್ತ್ರವನ್ನೂ ಕೊಡುವದಕ್ಕೆ ನನ್ನನ್ನು ನೇಮಿಸಿದ್ದಾನೆ. ಆಗ ಅವರಿಗೆ ನೀತಿವೃಕ್ಷಗಳೆಂದೂ ಕರ್ತನು ತಾನು ಮಹಿಮೆ ಹೊಂದುವದಕ್ಕೋಸ್ಕರ ನೆಟ್ಟ ಗಿಡಗಳೆಂದೂ ಹೆಸರಾಗುವದು.

ಯೆರೆಮಿಯ 31:13

ಅವರ ಮುಂದೆ ನಾನು ಬಾರೂಕನಿಗೆ ಅಪ್ಪಣೆ ಕೊಟ್ಟದ್ದೇ ನಂದರೆ--

ಯೋಹಾನ 16:22

ಆದದರಿಂದ ಈಗ ನಿಮಗೆ ದುಃಖವುಂಟು; ಆದರೆ ನಾನು ನಿಮ್ಮನ್ನು ತಿರಿಗಿ ನೋಡುವೆನು; ಆಗ ನಿಮ್ಮ ಹೃದಯವು ಉಲ್ಲಾಸಿಸುವದು; ನಿಮ್ಮ ಆನಂದವನ್ನು ನಿಮ್ಮಿಂದ ಯಾರೂ ತೆಗೆಯುವದಿಲ್ಲ.

ಯೋಹಾನ 16:24

ನೀವು ಇದುವರೆಗೆ ನನ್ನ ಹೆಸರಿನಲ್ಲಿ ಏನೂ ಬೇಡಿಕೊಳ್ಳಲಿಲ್ಲ; ಬೇಡಿಕೊಳ್ಳಿರಿ, ನಿಮಗೆ ದೊರೆಯುವದು; ಆಗ ನಿಮ್ಮ ಆನಂದವು ಪರಿಪೂರ್ಣವಾಗುವದು.

ಅಪೋಸ್ತಲರ ಕೃತ್ಯಗಳು 20:19

ನಾನು ಬಹು ನಮ್ರತೆಯಿಂದಲೂ ಕಣ್ಣೀರಿನಿಂದಲೂ ಕರ್ತನ ಸೇವೆ ಮಾಡುತ್ತಿದ್ದೆನು. ಇದರಲ್ಲಿ ಯೆಹೂದ್ಯರು ಹೊಂಚುಹಾಕಿದ್ದರಿಂದ ಸಂಕಷ್ಟಗಳು ಸಂಭವಿಸಿದವು.

ಅಪೋಸ್ತಲರ ಕೃತ್ಯಗಳು 20:31

ಆದಕಾರಣ ನಾನು ಕಣ್ಣೀರಿನಿಂದ ಮೂರು ವರುಷ ಹಗಲಿರುಳು ಎಡೆಬಿಡದೆ ಪ್ರತಿಯೊಬ್ಬ ನನ್ನು ಎಚ್ಚರಿಸಿದೆನೆಂದು ನೀವು ಜ್ಞಾಪಕ ಮಾಡಿಕೊಂಡು ಎಚ್ಚರವಾಗಿರಿ.

ಅಪೋಸ್ತಲರ ಕೃತ್ಯಗಳು 20:37

ಆಗ ಅವರೆಲ್ಲರೂ ಬಹಳವಾಗಿ ಅತ್ತು ಪೌಲನ ಕೊರಳನ್ನು ತಬ್ಬಿಕೊಂಡು ಅವನಿಗೆ ಮುದ್ದಿಟ್ಟರು.ತನ್ನ ಮುಖವನ್ನು ಅವರು ಇನ್ನು ನೋಡುವದಿಲ್ಲವೆಂದು ಹೇಳಿದ ಮಾತುಗಳಿಗೆ ಅವರು ಬಹಳವಾಗಿ ವ್ಯಥೆಪಟ್ಟರು. ತರುವಾಯ ಅವರು ಅವನನ್ನು ಹಡಗಿನ ವರೆಗೆ ಸಾಗ ಕಳುಹಿಸಿದರು.

ರೋಮಾಪುರದವರಿಗೆ 1:11

ನೀವು ಸ್ಥಿರಗೊಳ್ಳುವಂತೆ ನನ್ನ ಮುಖಾಂತರ ನಿಮಗೆ ಯಾವದಾದರೂ ಆತ್ಮೀಕದಾನ ದೊರೆಯಲಿ ಎಂದು ನಾನು ನಿಮ್ಮನ್ನು ನೋಡಲು ಹಂಬಲಿಸುತ್ತೇನೆ.

ರೋಮಾಪುರದವರಿಗೆ 15:30

ಸಹೋದರರೇ, ನೀವು ನನಗೋಸ್ಕರ ದೇವರ ಮುಂದೆ ಮಾಡುವ ಪ್ರಾರ್ಥನೆಗಳಲ್ಲಿ ನನ್ನೊಂದಿಗೆ ಹೋರಾಟದಿಂದ ವಿಜ್ಞಾಪಿಸಿಕೊಳ್ಳಬೇಕೆಂದು ಕರ್ತ ನಾದ ಯೇಸು ಕ್ರಿಸ್ತನ ನಿಮಿತ್ತವಾಗಿಯೂ ಪವಿತ್ರಾತ್ಮನ ಪ್ರೀತಿಯ ನಿಮಿತ್ತವಾಗಿಯೂ ನಿಮ್ಮನ್ನು ಬೇಡಿ ಕೊಳ್ಳುತ್ತೇನೆ.

ಫಿಲಿಪ್ಪಿಯವರಿಗೆ 1:8

ಯೇಸು ಕ್ರಿಸ್ತನಿಗಿರುವಂಥ ಕನಿಕರದಿಂದ ನಿಮ್ಮೆಲ್ಲರಿ ಗೋಸ್ಕರ ನಾನು ಎಷ್ಟೋ ಹಂಬಲಿಸುತ್ತೇನೆ; ಇದಕ್ಕೆ ದೇವರೇ ನನ್ನ ಸಾಕ್ಷಿ.

ಫಿಲಿಪ್ಪಿಯವರಿಗೆ 2:26

ಅವನು ನಿಮ್ಮೆಲ್ಲರನ್ನು ಕುರಿತು ಹಂಬಲಿಸುತ್ತಿದ್ದನು, ತಾನು ಅಸ್ವಸ್ಥನಾಗಿದ್ದ ವರ್ತಮಾನವನ್ನು ನೀವು ಕೇಳಿದ್ದರಿಂದ ತುಂಬಾ ವ್ಯಸನಪಟ್ಟನು.

1 ತೆಸಲೋನಿಕದವರಿಗೆ 2:17

ಸಹೋದರರೇ, ನಾವಂತೂ ದೇಹದಲ್ಲಿ ಮಾತ್ರ ನಿಮ್ಮನ್ನು ಸ್ವಲ್ಪ ಕಾಲ ಅಗಲಿದರು ಹೃದಯದಲ್ಲಿ ಅಗಲದೆ ನಿಮ್ಮ ಮುಖವನ್ನು ನೋಡುವದಕ್ಕೆ ಅತ್ಯಾಶೆಯಿಂದ ಬಹಳ ಪ್ರಯತ್ನ ಮಾಡಿದೆವು.

2 ತಿಮೋಥೆಯ 4:9

ನನ್ನ ಬಳಿಗೆ ಬೇಗ ಬರುವದಕ್ಕೆ ನೀನು ಪ್ರಯತ್ನ ಮಾಡು;

2 ತಿಮೋಥೆಯ 4:21

ಚಳಿಗಾಲಕ್ಕೆ ಮುಂಚೆಯೇ ಬರುವದಕ್ಕೆ ಪ್ರಯತ್ನ ಮಾಡು. ಯುಬೂ ಲನೂ ಪೂದೆಯನೂ ಲೀನನೂ ಕ್ಲೌದ್ಯಳೂ ಎಲ್ಲಾ ಸಹೋದರರೂ ನಿನಗೆ ವಂದನೆ ಹೇಳುತ್ತಾರೆ.ಕರ್ತನಾದ ಯೇಸು ಕ್ರಿಸ್ತನು ನಿನ್ನ ಆತ್ಮದ ಸಂಗಡ ಇರಲಿ. ಕೃಪೆಯು ನಿಮ್ಮೊಂದಿಗಿರಲಿ. ಆಮೆನ್‌.

1 ಯೋಹಾನ 1:4

ನಿಮ್ಮ ಸಂತೋಷವು ಪರಿಪೂರ್ಣ ವಾಗಬೇಕೆಂದು ನಾವು ಇವುಗಳನ್ನು ಬರೆಯುತ್ತೇವೆ.

ಪ್ರಕಟನೆ 7:17

ಸಿಂಹಾಸನದ ಮಧ್ಯದಲ್ಲಿರುವ ಕುರಿಮರಿಯಾದಾತನು ಅವರನ್ನು ಮೇಯಿಸಿ ಜೀವ ಜಲದ ಒರತೆಗಳ ಬಳಿಗೆ ನಡಿಸುತ್ತಾನೆ; ಮತ್ತು ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು ಎಂದು ಹೇಳಿದನು.

ಪ್ರಕಟನೆ 21:4

ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು. ಇನ್ನು ಮರಣ ವಿರುವದಿಲ್ಲ. ಇನ್ನು ದುಃಖವಾಗಲಿ ಗೋಳಾಟವಾಗಲಿ ನೋವಾಗಲಿ ಇರುವದೇ ಇಲ್ಲ. ಮೊದಲಿದ್ದವುಗಳೆಲ್ಲಾ ಇಲ್ಲದೆ ಹೋದವು ಎಂದು ಹೇಳಿತು.

Interlinear

Choose Theme