ಎರಸ್ತನು ಕೊರಿಂಥದಲ್ಲಿ ನಿಂತನು. ಆದರೆ ತ್ರೊಫಿಮನು ಅಸೌಖ್ಯವಾಗಿದ್ದದರಿಂದ ಅವ ನನ್ನು ನಾನು ಮಿಲೇತದಲ್ಲಿ ಬಿಟ್ಟೆನು.
Cross references
ಹೀಗೆ ಅವನು ತನಗೆ ಉಪಚಾರ ಮಾಡುವವರಲ್ಲಿ ಇಬ್ಬರಾದ ತಿಮೊಥೆಯನನ್ನೂ ಎರಸ್ತನನ್ನೂ ಮಕೆ ದೋನ್ಯಕ್ಕೆ ಕಳುಹಿಸಿ ತಾನಾದರೋ ಆಸ್ಯದಲ್ಲಿ ಕೆಲವು ಕಾಲ ನಿಂತನು.
ಬೆರೋಯದ ವನಾದ ಸೋಪತ್ರನೂ ಥೆಸಲೋನಿಕದವರಲ್ಲಿ ಅರಿಸ್ತಾರ್ಕನೂ ಸೆಕುಂದನೂ ದೆರ್ಬೆಯ ಗಾಯನೂ ತಿಮೊಥೆಯನೂ ಆಸ್ಯದ ತುಖಿಕನೂ ತ್ರೊಫಿಮನೂ ಪೌಲನ ಜೊತೆಯಲ್ಲಿ ಆಸ್ಯಕ್ಕೆ ಹೋದರು.
ಅಲ್ಲಿಂದ ಹೊರಟು ಮರುದಿನ ಖೀಯೊಸ್ ದ್ವೀಪಕ್ಕೆದುರಾಗಿ ಬಂದು ಅದರ ಮರುದಿನ ಸಾಮೊಸಿಗೆ ಬಂದು ತ್ರೋಗುಲ್ಯದಲ್ಲಿ ಇದ್ದು ಅದರ ಮರುದಿನ ನಾವು ಮಿಲೇತಕ್ಕೆ ಸೇರಿದೆವು.
ಅವನು ಮಿಲೇತದಿಂದ ಎಫೆಸಕ್ಕೆ ಹೇಳಿಕಳುಹಿಸಿ ಅಲ್ಲಿಯ ಸಭೆಯ ಹಿರಿಯರನ್ನು ಕರೆಸಿದನು. ಅವರು ಅವನ ಬಳಿಗೆ ಬಂದಾಗ ಅವರಿಗೆ ಅವನು ಹೇಳಿದ್ದೇ ನಂದರೆ--
(ಮುಂಚೆ ಎಫೆಸದವನಾದ ತ್ರೊಫಿಮನನ್ನು ಪೌಲನೊಂದಿಗೆ ಆ ಪಟ್ಟಣದಲ್ಲಿ ಅವರು ಕಂಡಿದ್ದರಿಂದ ಅವನನ್ನು ದೇವಾಲಯದೊಳಗೆ ಪೌಲನು ಕರೆದುಕೊಂಡು ಬಂದಿದ್ದನೆಂದು ಭಾವಿಸಿದರು).
ನನಗೂ ಸಮಸ್ತ ಸಭೆಗೂ ಅತಿಥಿಸತ್ಕಾರವನ್ನು ಮಾಡುತ್ತಿರುವ ಗಾಯನು ನಿಮ್ಮನ್ನು ವಂದಿಸುತ್ತಾನೆ. ಈ ಪಟ್ಟಣದ ಖಜಾನೆಯ ಮೇಲ್ವಿಚಾರಕ ನಾಗಿರುವ ಎರಸ್ತನೂ ಸಹೋದರನಾದ ಕ್ವರ್ತನೂ ನಿಮಗೆ ವಂದನೆಗಳನ್ನು ಹೇಳುತ್ತಾರೆ.
ಅವನು ನಿಮ್ಮೆಲ್ಲರನ್ನು ಕುರಿತು ಹಂಬಲಿಸುತ್ತಿದ್ದನು, ತಾನು ಅಸ್ವಸ್ಥನಾಗಿದ್ದ ವರ್ತಮಾನವನ್ನು ನೀವು ಕೇಳಿದ್ದರಿಂದ ತುಂಬಾ ವ್ಯಸನಪಟ್ಟನು.