ಇನ್ನು ಮುಂದೆ ನನಗೋಸ್ಕರ ನೀತಿಯ ಕಿರೀಟವು ಇಡಲ್ಪಟ್ಟಿದೆ; ಅದನ್ನು ನೀತಿಯುಳ್ಳ ನ್ಯಾಯಾ ಧಿಪತಿಯಾದ ಕರ್ತನು ಆ ದಿನದಲ್ಲಿ ನನಗೆ ಕೊಡು ವನು; ನನಗೆ ಮಾತ್ರವಲ್ಲದೆ ಆತನ ಬರೋಣವನ್ನು ಪ್ರೀತಿಸುವವರೆಲ್ಲರಿಗೆ ಸಹ ಕೊಡುವನು.
Cross references
ಆ ಪ್ರಕಾರ ಮಾಡಿ ನೀತಿವಂತರನ್ನು ದುಷ್ಟರ ಸಂಗಡ ಕೊಲ್ಲುವದು ನಿನಗೆ ದೂರವಾಗಿರಲಿ; ಹಾಗೆ ನೀತಿವಂತರನ್ನು ದುಷ್ಟರಿಗೆ ಸಮಾನಮಾಡುವದು ನಿನಗೆ ದೂರ ವಾಗಿರಲಿ; ಭೂಲೋಕಕ್ಕೆಲ್ಲಾ ನ್ಯಾಯಾಧಿಪತಿಯಾಗಿ ರುವಾತನು ನ್ಯಾಯವಾದದ್ದನ್ನು ಮಾಡದೆ ಇರುವನೇ ಅಂದನು.
ದೇವರು ನೀತಿವಂತರಿಗೆ ನ್ಯಾಯತೀರಿಸುತ್ತಾನೆ. ದೇವರು ಪ್ರತಿದಿನ ದುಷ್ಟರ ಮೇಲೆ ರೋಷವುಳ್ಳ ವನಾಗಿದ್ದಾನೆ.
ನಿನಗೆ ಭಯಪಡುವವರಿಗೋಸ್ಕರ ಮನುಷ್ಯ ಪುತ್ರರ ಮುಂದೆ ನಿನ್ನಲ್ಲಿ ಭರವಸೆ ಇಟ್ಟವರಿಗೋಸ್ಕರ ನೀನು ಇಟ್ಟಿರುವ ಒಳ್ಳೇತನವು ಎಷ್ಟೋ ದೊಡ್ಡದು.
ಆಕೆಯು ನಿನ್ನ ತಲೆಗೆ ಕೃಪೆಯ ಆಭರಣವಾಗಿರುವಳು; ಆಕೆಯು ನಿನಗೆ ಘನತೆಯ ಕಿರೀಟವನ್ನು ಒಪ್ಪಿಸುವಳು.
ನಾನು ನನ್ನ ಆಭರಣಗಳನ್ನು ಕೂಡಿಸಿಕೊಳ್ಳುವ ಆ ದಿನದಲ್ಲಿ ಅವರು ನನ್ನವರಾಗಿರುವರೆಂದೂ ಒಬ್ಬನು ತನಗೆ ಸೇವೆ ಮಾಡುವ ತನ್ನ ಮಗನನ್ನು ಕನಿಕರಿಸುವ ಪ್ರಕಾರ ಅವರನ್ನು ಕನಿಕರಿಸುವೆನೆಂದೂ ಸೈನ್ಯಗಳ ಕರ್ತನು ಹೇಳುತ್ತಾನೆ.ಆಗ ನೀವು ತಿಳುಕೊಂಡು ನೀತಿವಂತ ನಿಗೂ ದುಷ್ಟನಿಗೂ ದೇವರ ಸೇವೆಮಾಡುವವನಿಗೂ ಮಾಡದವನಿಗೂ ಇರುವ ಹೆಚ್ಚುಕಡಿಮೆಯನ್ನು ತಿಳುಕೊಳ್ಳುವಿರಿ.
ಭೂಲೋಕದಲ್ಲಿ ನಿಮಗೋಸ್ಕರ ಸಂಪತ್ತನ್ನು ಕೂಡಿಸಿಟ್ಟುಕೊಳ್ಳಬೇಡಿರಿ; ಇಲ್ಲಿ ನುಸಿಯೂ ಕಿಲುಬೂ ಅದನ್ನು ಹಾಳುಮಾಡುವದು; ಮತ್ತು ಕಳ್ಳರು ಕನ್ನಾ ಕೊರೆದು ಕದಿಯುವರು.
ಆ ದಿನದಲ್ಲಿ--ಕರ್ತನೇ, ಕರ್ತನೇ ನಿನ್ನ ಹೆಸರಿನಲ್ಲಿ ನಾವು ಪ್ರವಾದಿಸಲಿಲ್ಲವೇ? ಮತ್ತು ನಿನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸಲಿಲ್ಲವೇ? ಇದಲ್ಲದೆ ನಿನ್ನ ಹೆಸರಿನಲ್ಲಿ ಬಹಳ ಮಹತ್ಕಾರ್ಯಗಳನ್ನು ಮಾಡಲಿಲ್ಲವೇ ಎಂದು ಬಹಳ ಜನರು ನನಗೆ ಹೇಳುವರು.
ಆದರೆ ಆ ದಿನವಾಗಲೀ ಗಳಿಗೆಯಾಗಲೀ ನನ್ನ ತಂದೆಗೆ ಮಾತ್ರವೇ ಹೊರತು ಮತ್ತಾರಿಗೂ ಪರಲೋಕದ ದೂತರಿಗೂ ತಿಳಿಯದು.
ಆದರೆ ಆ ದಿನದಲ್ಲಿ ಆ ಪಟ್ಟಣಕ್ಕಿಂತಲೂ ಸೊದೋಮಿನ ಗತಿಯು ಹೆಚ್ಚಾಗಿ ತಾಳಬಹುದಾಗಿರುವದು ಎಂದು ನಾನು ನಿಮಗೆ ಹೇಳುತ್ತೇನೆ.
ಹೀಗೆ ನಿನ್ನ ಕಾಠಿಣ್ಯತೆ ಮತ್ತು ಪಶ್ಚಾತ್ತಾಪವಿಲ್ಲದ ಹೃದಯದಿಂದ ಉಗ್ರತೆಯ ದಿನಕ್ಕಾಗಿಯೂ ದೇವರ ನೀತಿಯುಳ್ಳ ನ್ಯಾಯತೀರ್ವಿಕೆಯ ಪ್ರತ್ಯಕ್ಷತೆಗಾಗಿಯೂ ದೇವರ ಕೋಪವನ್ನು ನಿನಗೋಸ್ಕರ ಕೂಡಿಸಿಟ್ಟುಕೊಳ್ಳುತ್ತಾ ಇದ್ಧೀ.
ಇದು ಮಾತ್ರವಲ್ಲದೆ ಆತ್ಮನ ಪ್ರಥಮ ಫಲವನ್ನು ಹೊಂದಿದ ನಾವು ಸಹ ದತ್ತುಪುತ್ರ ಸ್ವೀಕಾರವನ್ನು ಅಂದರೆ ದೇಹಕ್ಕೆ ಬರಬೇಕಾದ ವಿಮೋಚನೆಯನ್ನು ಎದುರುನೊಡುತ್ತಾ ನಮ್ಮೊಳಗೆ ನಾವೇ ಮೂಲ್ಗುತ್ತೇವೆ.
ಆದರೆ ಬರೆದಿರುವ ಪ್ರಕಾರ--ದೇವರು ತನ್ನನ್ನು ಪ್ರೀತಿಸು ವವರಿಗಾಗಿ ಸಿದ್ಧಮಾಡಿರುವಂಥವುಗಳನ್ನು ಕಣ್ಣು ಕಾಣಲಿಲ್ಲ, ಕಿವಿ ಕೇಳಲಿಲ್ಲ, ಇಲ್ಲವೆ ಅವು ಮನುಷ್ಯನ ಹೃದಯದಲ್ಲಿ ಸೇರಲಿಲ್ಲ.
ಪ್ರವೀಣತೆಗಾಗಿ ಹೋರಾಡುವ ಪ್ರತಿಯೊಬ್ಬನು ಎಲ್ಲಾ ವಿಷಯಗಳಲ್ಲಿ ಮಿತವಾಗಿರುತ್ತಾನೆ; ಅವರಾ ದರೋ ನಾಶವಾಗುವ ಕಿರೀಟವನ್ನು ಹೊಂದಿಕೊಳ್ಳು ವದಕ್ಕಾಗಿ ಹೋರಾಡುತ್ತಾರೆ; ನಾವಾದರೋ ನಾಶ ವಾಗದ ಕಿರೀಟಕ್ಕಾಗಿಯೇ ಹೋರಾಡುತ್ತೇವೆ.
ಪರಲೋಕದಲ್ಲಿರುವ ನಮ್ಮ ಮನೆಯನ್ನು ನಾವು ಧರಿಸಿಕೊಳ್ಳಬೇಕೆಂದು ಆಸಕ್ತಿಯಿಂದ ಅಪೇಕ್ಷಿಸುವರಾಗಿ ಇದರಲ್ಲಿ ನರಳುತ್ತೇವೆ.
ಪರಲೋಕದಲ್ಲಿ ನಿಮಗೋಸ್ಕರ ಇಡಲ್ಪಟ್ಟಿರುವ ನಿರೀಕ್ಷೆಯನ್ನು ಕುರಿತು ಸುವಾರ್ತೆಯೆಂಬ ಸತ್ಯವಾಕ್ಯದಿಂದ ನೀವು ಮೊದಲೇ ಕೇಳಿದಿರಿ.
ಇದಲ್ಲದೆ ಆತನು ಸತ್ತವರೊಳ ಗಿಂದ ಎಬ್ಬಿಸಿದಂಥ ಮತ್ತು ಪರಲೋಕದಿಂದ ಬರುವಂಥ ಆತನ ಕುಮಾರನನ್ನು ಎದುರು ನೋಡುವವರಾದಿರೆಂಬ ದನ್ನೂ ತಿಳಿಸುತ್ತಾರೆ. ಈ ಯೇಸುವು ಮುಂದೆ ಬರುವ ಕೋಪದಿಂದ ನಮ್ಮನ್ನು ತಪ್ಪಿಸಿದನು.
ಆದರೆ ಸಹೋದರರೇ, ಆ ದಿನವು ಕಳ್ಳನಂತೆ ನಿಮ್ಮ ಮೇಲೆ ಬರತಕ್ಕದ್ದಲ್ಲ; ನೀವು ಕತ್ತಲೆಯಲ್ಲಿರುವವರಲ್ಲ.
ನೀವು ಯಾವದಕ್ಕಾಗಿ ಶ್ರಮೆಪಡುತ್ತೀರೋ ದೇವರ ಆ ರಾಜ್ಯಕ್ಕೆ ನೀವು ಯೋಗ್ಯರೆಂದು ಎಣಿಸಲ್ಪಡುವಂತೆ ದೇವರ ನೀತಿಯುಳ್ಳ ತೀರ್ಪಿಗೆ ಅದು ಸ್ಪಷ್ಟವಾದ ನಿದರ್ಶನವಾಗಿದೆ.
ಮುಂದಿನ ಕಾಲಕ್ಕೆ ಒಳ್ಳೇ ಅಸ್ತಿವಾರವಾಗುವಂಥ ವುಗಳನ್ನು ತಮಗೆ ಕೂಡಿಸಿಟ್ಟುಕೊಳ್ಳಬೇಕೆಂತಲೂ ನಿತ್ಯಜೀವವನ್ನು ಹಿಡಿದುಕೊಳ್ಳುವವರಾಗಿರ ಬೇಕೆಂತಲೂ ಅವರಿಗೆ ಆಜ್ಞಾಪಿಸು.
ಇದರ ನಿಮಿತ್ತದಿಂದಲೇ ಈ ಶ್ರಮೆಗಳನ್ನು ಅನುಭವಿಸುತ್ತಾ ಇದ್ದೇನೆ; ಆದರೂ ನಾನು ನಾಚಿಕೆಪಡುವದಿಲ್ಲ; ಯಾಕಂ ದರೆ ನಾನು ನಂಬಿರುವಾತನನ್ನು ಬಲ್ಲೆನು, ನಾನು ಆತನಿಗೆ ಒಪ್ಪಿಸಿದ್ದನ್ನು ಆತನು ಆ ದಿನಕ್ಕಾಗಿ ಕಾಪಾಡು ವದಕ್ಕೆ ಶಕ್ತನಾಗಿದ್ದಾನೆಂದೂ ದೃಢವಾಗಿ ನಂಬಿದ್ದೇನೆ.
ಅವನು ಆ ದಿನದಲ್ಲಿ ಕರ್ತನ ಕರುಣೆ ಯನ್ನು ಕಂಡುಕೊಳ್ಳುವಂತೆ ಕರ್ತನು ಅವನಿಗೆ ದಯ ಪಾಲಿಸಲಿ. ಎಫೆಸದಲ್ಲಿ ನನಗೆ ಎಷ್ಟೋ ಉಪಚಾರ ಮಾಡಿದನೆಂಬದು ನಿನಗೆ ಚೆನ್ನಾಗಿ ಗೊತ್ತಿದೆ.
ಇದಲ್ಲದೆ ಯಾವನಾದರೂ ಪ್ರವೀಣತೆಗಾಗಿ ಹೋರಾಡುವಾಗ ನಿಯಮದ ಪ್ರಕಾರ ಹೋರಾಡ ದಿದ್ದರೆ ಅವನಿಗೆ ಕಿರೀಟ ದೊರೆಯುವದಿಲ್ಲ.
ಆದದರಿಂದ ದೇವರ ಮುಂದೆಯೂ ಆತನ ಬರೋಣದಲ್ಲಿ ಮತ್ತು ಆತನ ರಾಜ್ಯ ದಲ್ಲಿ ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರಿಸುವ ಕರ್ತನಾದ ಯೇಸು ಕ್ರಿಸ್ತನ ಮುಂದೆಯೂ ನಾನು ನಿನಗೆ ಖಂಡಿತವಾಗಿ ಹೇಳುವದೇನಂದರೆ--
ನಾವು ಭಾಗ್ಯಕರವಾದ ನಿರೀಕ್ಷೆಯನ್ನೂ ಮಹತ್ತಾದ ದೇವರ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಪ್ರಭಾವದ ಪ್ರತ್ಯಕ್ಷತೆಯನ್ನೂ ಎದುರು ನೋಡುವವರಾಗಿದ್ದೇವೆ.
ಹಾಗೆಯೇ ಕ್ರಿಸ್ತನು ಬಹು ಜನರ ಪಾಪಗಳನ್ನು ಹೊತ್ತುಕೊಳ್ಳುವದಕ್ಕೋಸ್ಕರ ಒಂದೇ ಸಾರಿ ಸಮರ್ಪಿತ ನಾದನು. ತನ್ನನ್ನು ನಿರೀಕ್ಷಿಸಿ ಕೊಂಡಿರುವವರಿಗೆ ರಕ್ಷಣೆ ಯನ್ನುಂಟು ಮಾಡುವದಕ್ಕೋಸ್ಕರ ಪಾಪವಿಲ್ಲದವನಾಗಿ ಎರಡನೆಯ ಸಾರಿ ಕಾಣಿಸಿಕೊಳ್ಳುವನು.
ಕಷ್ಟಗಳನ್ನು ಸಹಿಸಿಕೊಳ್ಳುವವನು ಧನ್ಯನು; ಅವನು ಪರಿಶೋಧಿತನಾದ ಮೇಲೆ ಕರ್ತನು ತನ್ನನ್ನು ಪ್ರೀತಿಸುವವರಿಗೆ ವಾಗ್ದಾನ ಮಾಡಿದ ಜೀವದ ಕಿರೀಟ ವನ್ನು ಹೊಂದುವನು;
ಲಯ ಕಳಂಕ ಕ್ಷಯಗಳಿಲ್ಲದ ಬಾಧ್ಯತೆಗೂ ನಮ್ಮನ್ನು ತಿರಿಗಿ ಹುಟ್ಟಿಸಿದ್ದಾನೆ. ಈ ಬಾಧ್ಯತೆಯು ನಿಮಗೋಸ್ಕರ ಪರಲೋಕದಲ್ಲಿ ಇಟ್ಟಿದೆ.
ಪ್ರಧಾನ ಕುರುಬನು ಪ್ರತ್ಯಕ್ಷನಾಗುವಾಗ ನೀವು ಎಂದಿಗೂ ಬಾಡದ ಮಹಿಮೆಯುಳ್ಳ ಕಿರೀಟವನ್ನು ಹೊಂದುವಿರಿ.
ಇಗೋ ಆತನು ಮೇಘಗ ಳೊಂದಿಗೆ ಬರುತ್ತಾನೆ; ಎಲ್ಲರ ಕಣ್ಣುಗಳು ಆತನನ್ನು ಕಾಣುವವು; ಆತನನ್ನು ಇರಿದವರು ಸಹ ಕಾಣುವರು; ಭೂಮಿಯಲ್ಲಿರುವ ಎಲ್ಲಾ ಕುಲದವರು ಆತನ ನಿಮಿತ್ತ ಗೋಳಾಡುವರು. ಹೌದು, ಹಾಗೆಯೇ ಆಗುವದು. ಆಮೆನ್.
ನಿನ್ನನ್ನು ಸಂಕಟಪಡಿಸುವವುಗಳಲ್ಲಿ ಯಾವ ದಕ್ಕೂ ಹೆದರಬೇಡ. ಇಗೋ, ನೀವು ಶೋಧಿಸಲ್ಪಡು ವಂತೆ ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವನು; ಹತ್ತು ದಿವಸಗಳ ತನಕ ನಿಮಗೆ ಸಂಕಟವಿ ರುವದು. ನೀನು ಸಾಯಬೇಕಾದರೂ ನಂಬಿಗಸ್ತ ನಾಗಿರು; ನಾನು ನಿನಗೆ
ಇದಲ್ಲದೆ ಸಿಂಹಾಸನದ ಸುತ್ತಲೂ ಇಪ್ಪತ್ತನಾಲ್ಕು ಆಸನಗಳಿದ್ದವು; ಆ ಆಸನಗಳ ಮೇಲೆ ಬಿಳೀ ವಸ್ತ್ರ ಧರಿಸಿಕೊಂಡಿದ್ದ ಇಪ್ಪತ್ತು ನಾಲ್ಕು ಮಂದಿ ಹಿರಿಯರು ಕೂತಿದ್ದರು; ಅವರ ತಲೆಗಳ ಮೇಲೆ ಚಿನ್ನದ ಕಿರೀಟ ಗಳಿದ್ದವು.
ಆಗ ಆ ಇಪ್ಪತ್ತನಾಲ್ಕು ಮಂದಿ ಹಿರಿಯರು ಸಿಂಹಾಸನದ ಮೇಲೆ ಕೂತಿದ್ದಾತನ ಮುಂದೆ ಅಡ್ಡಬಿದ್ದು ತಮ್ಮ ಕಿರೀಟಗಳನ್ನು ಸಿಂಹಾಸನದ ಮುಂದೆ ಹಾಕಿ ಯುಗಯುಗಾಂತರ ಗಳಲ್ಲಿಯೂ ಜೀವಿಸುವಾತನನ್ನು ಆರಾಧಿಸುತ್ತಾ--ಓ ಕರ್ತನೇ, ನೀನು ಪ್ರಭಾವ ಮಾನಬಲಗಳನ್ನು ಹೊಂದುವದಕ್ಕೆ ಯೋಗ್ಯನಾಗಿದ್ದೀ; ಯಾಕಂದರೆ ಸಮಸ್ತವನ್ನು ಸೃಷ್ಟಿಸಿದಾತನು ನೀನೇ. ಅವು ನಿನ್ನ ಚಿತ್ತ ದಂತೆ ಉಂಟಾಗಿ ಸೃಷ್ಟಿಸಲ್ಪಟ್ಟವು ಎಂದು ಹೇಳುವರು.
ಪರಲೋಕವು ತೆರೆದಿರುವದನ್ನು ನಾನು ಕಂಡೆನು. ಆಗ ಬಿಳೀ ಕುದುರೆಯು ಕಾಣಿಸಿತು; ಅದರ ಮೇಲೆ ಕೂತಿದ್ದಾತನು ನಂಬಿಗಸ್ತನೂ ಸತ್ಯವಂತನೂ ಎಂದು ಕರೆಯಲ್ಪಟ್ಟನು. ಆತನು ನೀತಿಯಿಂದ ನ್ಯಾಯವಿಚಾರಣೆ ಮಾಡಿ ಯುದ್ಧ ಮಾಡುತ್ತಾನೆ;
ಇವುಗಳನ್ನು ಸಾಕ್ಷೀಕರಿಸುವಾತನು--ಖಂಡಿತ ವಾಗಿ ನಾನು ಬೇಗ ಬರುತ್ತೇನೆ ಎಂದು ಹೇಳುತ್ತಾನೆ. ಆಮೆನ್. ಹಾಗೆಯೇ ಆಗಲಿ; ಕರ್ತನಾದ ಯೇಸುವೇ, ಬಾ.ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ. ಆಮೆನ್.