Home Bibles ☰ Books ಅಪೋಸ್ತಲರ ಕೃತ್ಯಗಳು 1:17 · ಕನ್ನಡ ಬೈಬಲ್
ಅಪೋಸ್ತಲರ ಕೃತ್ಯಗಳು 1:17 · ಕನ್ನಡ ಬೈಬಲ್

ಅವನು ನಮ್ಮೊಂದಿಗೆ ಎಣಿಸಲ್ಪಟ್ಟು ಈ ಸೇವೆಯಲ್ಲಿ ಪಾಲು ಹೊಂದಿದ ವನಾಗಿದ್ದನು.

Cross references

ಮತ್ತಾಯ 10:4

ಕಾನಾನ್ಯನಾದ ಸೀಮೋನ ಮತ್ತು ಆತನನ್ನು ಹಿಡಿದುಕೊಟ್ಟ ಯೂದ ಇಸ್ಕರಿಯೋತ ಎಂಬಿವುಗಳೇ.

ಮಾರ್ಕ 3:19

ಆತನನ್ನು ಹಿಡು ಕೊಡಲಿಕ್ಕಿದ್ದ ಯೂದ ಇಸ್ಕರಿ ಯೋತ್‌ ಎಂಬವರೇ. ಮತ್ತು ಅವರು ಒಂದು ಮನೆಯೊಳಕ್ಕೆ ಹೋದರು.

ಲೂಕ 6:16

ಯಾಕೋಬನ ಸಹೋದರನಾದ ಯೂದ, ಮತ್ತು ದ್ರೋಹಿಯಾದ ಇಸ್ಕರಿಯೋತ ಯೂದ ಎಂಬವರೇ.

ಲೂಕ 22:47

ಆತನು ಇನ್ನೂ ಮಾತನಾಡುತ್ತಿರುವಾಗ ಇಗೋ, ಸಮೂಹವು ಮತ್ತು ಹನ್ನೆರಡು ಮಂದಿಯಲ್ಲಿ ಯೂದ ನೆಂದು ಕರೆಯಲ್ಪಟ್ಟ ಒಬ್ಬನು ಅವರ ಮುಂದೆ ಹೋಗುತ್ತಾ ಯೇಸುವಿಗೆ ಮುದ್ದಿಡುವದಕ್ಕಾಗಿ ಆತನನ್ನು ಸವಿಾಪಿಸಿದನು.

ಯೋಹಾನ 6:70

ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವ ರಿಗೆ--ಹನ್ನೆರಡು ಮಂದಿಯಾದ ನಿಮ್ಮನ್ನು ನಾನು ಆರಿಸಿ ಕೊಂಡೆನಲ್ಲವೇ? ಆದರೆ ನಿಮ್ಮಲ್ಲಿ ಒಬ್ಬನು ಸೈತಾನನಾ ಗಿದ್ದಾನೆ ಅಂದನು.ಸೀಮೋನನ ಮಗನಾದ ಇಸ್ಕರಿಯೋತ್‌ ಯೂದನ ವಿಷಯವಾಗಿ ಆತನು ಹೇಳಿ ದನು. ಯಾಕಂದರೆ ಹನ್ನೆರಡು ಮಂದಿಯಲ್ಲಿ ಒಬ್ಬನಾದ ಇವನು ಆತನನ್ನು ಹಿಡುಕೊಡುವದಕ್ಕಿದ್ದನು.

ಯೋಹಾನ 17:12

ನಾನು ಅವರೊಂದಿಗೆ ಲೋಕದಲ್ಲಿದ್ದಾಗ ನಿನ್ನ ಹೆಸರಿನಲ್ಲಿ ಅವರನ್ನು ಕಾಪಾಡಿದೆನು; ನೀನು ನನಗೆ ಕೊಟ್ಟವರನ್ನು ನಾನು ಕಾಪಾಡಿದ್ದೇನೆ; ಬರಹವು ನೆರವೇರುವ ಹಾಗೆ ಆ ನಾಶನದ ಮಗನೇ ಹೊರತು ಅವರಲ್ಲಿ ಒಬ್ಬನೂ ನಾಶವಾಗಲಿಲ್ಲ.

ಅಪೋಸ್ತಲರ ಕೃತ್ಯಗಳು 1:25

ಯೂದನು ತನ್ನ ಸ್ವಸ್ಥಳಕ್ಕೆ ಹೋಗುವ ದಕ್ಕಾಗಿ ಅಪರಾಧದ ನಿಮಿತ್ತ ಈ ಸೇವೆಯಿಂದಲೂ ಅಪೊಸ್ತಲತನದಿಂದಲೂ ಬಿದ್ದು ಹೋದನು. ಈಗ ಈ ಸೇವೆಯಲ್ಲಿಯೂ ಅಪೊಸ್ತಲತನದಿಂದಲೂ ಒಬ್ಬನು ಪಾಲುಹೊಂದುವಂತೆ ಈ ಇಬ್ಬರಲ್ಲಿ ಯಾರನ್ನು ನೀನು ಆರಿಸಿಕೊಳ್ಳುತ್ತೀಯೋ ತೋರಿಸು ಎಂದು ಹೇಳಿದರು.ತರುವಾಯ ಅವರು ತಮ್ಮ ಚೀಟುಗಳನ್ನು ಹಾಕಿದಾಗ ಚೀಟು ಮತ್ತೀಯನಿಗೆ ಬಂದದ್ದರಿಂದ ಅವನು ಹನ್ನೊಂದು ಮಂದಿ ಅಪೊಸ್ತಲರೊಂದಿಗೆ ಎಣಿಸ ಲ್ಪಟ್ಟನು.

ಅಪೋಸ್ತಲರ ಕೃತ್ಯಗಳು 12:25

ಬಾರ್ನಬ ಸೌಲರು ತಮ್ಮ ಸೇವೆ ತೀರಿಸಿಕೊಂಡು ಮಾರ್ಕನೆನಿಸಿಕೊಳ್ಳುವ ಯೋಹಾನ ನನ್ನು ಕರಕೊಂಡು ಯೆರೂಸಲೇಮಿನಿಂದ ಹಿಂತಿರುಗಿ ಬಂದರು.

ಅಪೋಸ್ತಲರ ಕೃತ್ಯಗಳು 20:24

ಆದಾಗ್ಯೂ ಇವುಗಳಲ್ಲಿ ಯಾವದೊಂದು ನನ್ನನ್ನು ಕದಲಿಸುವದಿಲ್ಲ; ಇಲ್ಲವೆ ನನ್ನ ಪ್ರಾಣವು ನನಗೆ ಪ್ರಿಯವಾದದ್ದೆಂದು ನಾನು ಎಣಿಸುವದಿಲ್ಲ; ಹೀಗೆ ದೇವರ ಕೃಪೆಯ ಸುವಾರ್ತೆಯನ್ನು ಸಾಕ್ಷಿಕರಿಸು ವದಕ್ಕಾಗಿ ನಾನು ಕರ್ತನಾದ ಯೇಸುವಿನಿಂದ ಹೊಂದಿದ ಸೇವೆಯೆಂಬ ಓಟವನ್ನು ಸಂತೋಷದಿಂದ ಕೊನೆಗಾಣಿಸುವ

ಅಪೋಸ್ತಲರ ಕೃತ್ಯಗಳು 21:19

ಅವನು ಅವರನ್ನು ವಂದಿಸಿ ತನ್ನ ಸೇವೆಯ ಮೂಲಕ ದೇವರು ಪ್ರತ್ಯೇಕವಾಗಿ ಅನ್ಯ ಜನರಲ್ಲಿ ಎಂಥ ಕಾರ್ಯಗಳನ್ನು ಮಾಡಿಸಿದನೆಂದು ವಿವರಿಸಿದನು.

2 ಕೊರಿಂಥದವರಿಗೆ 4:1

ಆದದರಿಂದ ನಾವು ಕರುಣೆಯಿಂದ ಈ ಸೇವೆಯನ್ನು ಹೊಂದಿದವರಾಗಿರಲಾಗಿ ಧೈರ್ಯಗೆಡುವದಿಲ್ಲ.

2 ಕೊರಿಂಥದವರಿಗೆ 5:18

ಎಲ್ಲವುಗಳು ದೇವರವುಗಳಾಗಿವೆ; ಆತನು ಯೇಸು ಕ್ರಿಸ್ತನ ಮೂಲಕ ನಮ್ಮನ್ನು ತನಗೆ ಸಮಾಧಾನಪಡಿಸಿಕೊಂಡು ಸಮಾಧಾನದ ವಿಷಯವಾದ ಸೇವೆಯನ್ನು ನಮಗೆ ಅನುಗ್ರಹಿಸಿದ್ದಾನೆ.

Interlinear

Choose Theme