Home Bibles ಅಪೋಸ್ತಲರ ಕೃತ್ಯಗಳು 10:24 · ಕನ್ನಡ ಬೈಬಲ್
ಅಪೋಸ್ತಲರ ಕೃತ್ಯಗಳು 10:24 · ಕನ್ನಡ ಬೈಬಲ್

ಮರುದಿನ ವಾದ ಮೇಲೆ ಅವರು ಕೈಸರೈಯಕ್ಕೆ ಸೇರಿದರು. ಕೊರ್ನೇಲ್ಯನು ತನ್ನ ಬಂಧುಬಳಗದವರನ್ನೂ ಹತ್ತಿರದ ಮಿತ್ರರನ್ನೂ ಕೂಡ ಕರೆಯಿಸಿ ಅವರಿಗಾಗಿ ಎದುರು ನೋಡುತ್ತಿದ್ದನು.

Cross references

ಯೆಶಾಯ 2:3

ಅನೇಕ ಪ್ರಜೆಗಳು ಹೋಗಿ--ಬನ್ನಿರಿ, ಕರ್ತನ ಪರ್ವತಕ್ಕೂ ಯಾಕೋಬನ ದೇವರ ಆಲಯ ಕ್ಕೂ ಹೋಗೋಣ; ಆತನು ತನ್ನ ಮಾರ್ಗಗಳನ್ನು ನಮಗೆ ಬೋಧಿಸುವನು; ನಾವು ಆತನ ದಾರಿಗಳಲ್ಲಿ ನಡೆಯುವೆವು ಎಂದು ಹೇಳುವರು; ಚೀಯೋನಿನಿಂದ ನ್ಯಾಯಪ್ರಮಾಣವೂ ಯೆರೂಸಲೇಮಿನಿಂದ ಕರ್ತನ ವಾಕ್ಯವೂ ಹೊರಡುವದು.

ಮೀಕ 4:2

ಅನೇಕ ಜನಾಂಗಗಳು ಬಂದು ಹೇಳುವ ದೇನಂದರೆ--ಬನ್ನಿರಿ; ಕರ್ತನ ಬೆಟ್ಟಕ್ಕೆ ಯಾಕೋಬಿನ ದೇವರ ಆಲಯಕ್ಕೆ ಹೋಗೋಣ; ಆತನು ತನ್ನ ಮಾರ್ಗಗಳನ್ನು ನಮಗೆ ಬೋಧಿಸುವನು; ನಾವು ಆತನ ಹಾದಿಗಳಲ್ಲಿ ನಡೆಯುವೆವು; ಯಾಕಂದರೆ ಚೀಯೋನಿನೊಳಗಿಂದ ನ್ಯಾಯಪ್ರಮಾಣವೂ ಯೆರೂ ಸಲೇಮಿನೊಳಗಿಂದ ದೇವರ ವಾಕ್ಯವೂ ಹೊರಡು ವದು.

ಜೆಕರ್ಯ 3:10

ಆ ದಿನದಲ್ಲಿ ನೀವು ನಿಮ್ಮ ನಿಮ್ಮ ನೆರೆಯವರನ್ನು ದ್ರಾಕ್ಷೇಬಳ್ಳಿಯ ಕೆಳಗೂ ಅಂಜೂರ ಮರದ ಕೆಳಗೂ ಕರೆಯುವಿರಿ ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ.

ಜೆಕರ್ಯ 8:20

ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಜನಗಳೂ ಅನೇಕ ಪಟ್ಟಣಗಳ ನಿವಾಸಿಗಳೂ ಇನ್ನು ಬರುವರು;

ಮತ್ತಾಯ 9:9

ತರುವಾಯ ಯೇಸು ಅಲ್ಲಿಂದ ಹಾದು ಹೋಗು ತ್ತಿದ್ದಾಗ ಮತ್ತಾಯನೆಂಬ ಹೆಸರುಳ್ಳ ಒಬ್ಬ ಮನುಷ್ಯನು ಸುಂಕದ ಕಟ್ಟೆಯಲ್ಲಿ ಕೂತಿರುವದನ್ನು ನೋಡಿ ಅವ ನಿಗೆ--ನನ್ನನ್ನು ಹಿಂಬಾಲಿಸು ಅನ್ನಲು ಅವನು ಎದ್ದು ಆತನನ್ನು ಹಿಂಬಾಲಿಸಿದನು.

ಮಾರ್ಕ 5:19

ಆದಾಗ್ಯೂ ಯೇಸು ಅವನನ್ನು ಇರಗೊಡದೆ ಅವನಿಗೆ--ನಿನ್ನ ಮನೆಗೂ ಸ್ನೇಹಿತರ ಬಳಿಗೂ ಹೋಗಿ ಕರ್ತನು ನಿನ್ನ ಮೇಲೆ ಕರುಣೆಯಿಟ್ಟು ಎಂಥಾ ಮಹತ್ಕಾರ್ಯಗಳನ್ನು ಮಾಡಿ ದ್ದಾನೆಂದು ಅವರಿಗೆ ಹೇಳು ಅಂದನು.

ಲೂಕ 5:29

ತರುವಾಯ ಲೇವಿಯು ತನ್ನ ಸ್ವಂತ ಮನೆಯಲ್ಲಿ ಆತನಿಗೆ ದೊಡ್ಡ ಔತಣವನ್ನು ಮಾಡಿಸಲು ಸುಂಕದವರು ಮತ್ತು ಬೇರೆ ಬಹಳ ಜನರು ಅವರೊಂದಿಗೆ ಕೂತುಕೊಂಡರು.

ಯೋಹಾನ 1:1

ಆದಿಯಲ್ಲಿ ವಾಕ್ಯವಿದ್ದನು; ಆ ವಾಕ್ಯವು ದೇವರೊಂದಿಗೆ ಇದ್ದನು; ಆ ವಾಕ್ಯವು ದೇವರಾಗಿದ್ದನು.

ಯೋಹಾನ 1:41

ಇವನು ಮೊದಲು ತನ್ನ ಸ್ವಂತ ಸಹೋದರನಾದ ಸೀಮೋನನನ್ನು ಕಂಡು ಅವ ನಿಗೆ--ನಾವು ಮೆಸ್ಸೀಯನನ್ನು ಕಂಡುಕೊಂಡೆವು ಎಂದು ಹೇಳಿದನು (ಮೆಸ್ಸೀಯನು ಅಂದರೆ ಕ್ರಿಸ್ತನು ಎಂದರ್ಥ).

ಯೋಹಾನ 4:28

ಆಗ ಆ ಸ್ತ್ರೀಯು ತನ್ನ ನೀರಿನ ಕೊಡವನ್ನು ಬಿಟ್ಟು ಪಟ್ಟಣದೊಳಕ್ಕೆ ಹೊರಟುಹೋಗಿ ಜನರಿಗೆ--

ಅಪೋಸ್ತಲರ ಕೃತ್ಯಗಳು 8:40

ತರುವಾಯ ಫಿಲಿಪ್ಪನು ಅಜೋತಿನಲ್ಲಿ ಕಾಣಿಸಿ ಕೊಂಡು ಅಲ್ಲಿಂದ ಕೈಸರೈಯಕ್ಕೆ ಬರುವ ತನಕ ಎಲ್ಲಾ ಪಟ್ಟಣಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ಹೋದನು.

Interlinear

Choose Theme